ಮೈಸೂರು-ಕುಶಾಲನಗರ ರೈಲು ಮಾರ್ಗಕ್ಕೆ ಕೇಂದ್ರದ ಒಪ್ಪಿಗೆ

ಮೈಸೂರು, ಫೆಬ್ರವರಿ 28 : ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಈ ರೈಲಯ ಯೋಜನೆ ಭಾರಿ ವಿರೋಧಕ್ಕೆ ಕಾರಣವಾಗಿತ್ತು.

ಮೈಸೂರು (ಬೆಳಗೊಳ)-ಕುಶಾಲನಗರ ರೈಲು ಮಾರ್ಗಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. 87 ಕಿ.ಮೀ. ರೈಲು ಮಾರ್ಗವನ್ನು 1,860 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತದೆ.

ಈ ನೂತನ ಮಾರ್ಗ ನಿರ್ಮಾಣವಾದರೆ ಕೊಡಗು ಜಿಲ್ಲೆಗೆ ರೈಲ್ವೆ ಸಂಪರ್ಕ ಲಭಿಸಿದಂತಾಗುತ್ತದೆ. ರೈಲು ಮಾರ್ಗ ಪೂರ್ಣಗೊಂಡರೆ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರದ ಜನರಿಗೆ ಅನುಕೂಲವಾಗಲಿದೆ.

Central government approves for Mysuru Kushalnagar railway line

ಕೊಡಗು ಜಲ್ಲೆಯ ಪ್ರವಾಸೋದ್ಯಮಕ್ಕೆ ರೈಲು ಮಾರ್ಗ ನಿರ್ಮಾಣದಿಂದ ಲಾಭವಾಗುವ ನಿರೀಕ್ಷೆ ಇದೆ. ಪ್ರತಿವರ್ಷ ಲಕ್ಷಾಂತರ ಸಂಖ್ಯೆಯಲ್ಲಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಆಗಮಿಸುತ್ತಾರೆ. ರೈಲು ಮಾರ್ಗ ನಿರ್ಮಾಣದಿಂದ ಸಂಚಾರಕ್ಕೆ ಅನುಕೂಲವಾಗಲಿದೆ.

ಕೊಡಗಿನಲ್ಲಿ ರೈಲು ಮಾರ್ಗ ನಿರ್ಮಾಣ ಮಾಡಲು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಮೈಸೂರು-ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ ಹಿಂದೆಯೇ ಸಮೀಕ್ಷೆ ನಡೆಸಲಾಗಿತ್ತು. ಆದರೆ, ಯೋಜನೆ ಲಾಭದಾಯಕವಲ್ಲ ಎಂದು ಯೋಜನೆ ಕೈಗೆತ್ತಿಕೊಂಡಿರಲಿಲ್ಲ.

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. 'ಹಲವು ವರ್ಷಗಳಿಂದ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗುತ್ತದೆ' ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+