ಮತ ಬೇಟೆಗೂ ಮೊದಲು ನಾಡ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಅಮಿತ್ ಶಾ

ಮೈಸೂರು, ಏಪ್ರಿಲ್‌ 24: ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನ ಗಣನೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರದ ನಾಯಕರು ರಾಜ್ಯದಲ್ಲಿ ಮತ ಬೇಟೆ ಆರಂಭಿಸಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರು ಶತ ಪ್ರಯತ್ನ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಹೈ ಕಮಾಂಡ್‌ ನಾಯಕರ ಮತ ಬೇಟೆ ಜೋರಾಗಿದ್ದು, ಸೋಮವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಚುನಾವಣಾ ಪ್ರಚಾರ ಕಣಕ್ಕೆ ಇಳಿಯುವ ಮೊದಲು ಕೇಂದ್ರ ಸಚಿವ ಅಮಿತ್ ಶಾ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದು, ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

Central minister Amit Shah Visit Mysuru Chamundi Hills

ಕೇಂದ್ರ ಸಚಿವ ಅಮಿತ್ ಶಾಗೆ ಬಿಜೆಪಿ ನಾಯಕರು ಮೈಸೂರಿನಲ್ಲಿ ಅದ್ಧೂರಿ ಸ್ವಾಗತ ಕೋರಿದ್ದು, ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಗೃಹ ಸಚಿವರ ಭೇಟಿ ವೇಳೆ ಮೈಸೂರಿನ ಕೆ.ಆರ್‌ ಕ್ಷೇತ್ರದ ಹಾಲಿ ಶಾಸಕ ರಾಮದಾಸ್‌, ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಸ್ಥಳೀಯ ಮೈಸೂರಿನ ಬಿಜೆಪಿ ಅಭ್ಯರ್ಥಿಗಳು ಹಾಗೂ ಮುಖಂಡರು ಭಾಗಿಯಾಗಿದ್ದರು.

ಬಿಜೆಪಿ ತನ್ನ ಸ್ಥಾನವನ್ನು ಹಳೆ ಮೈಸೂರು ಭಾಗದಲ್ಲಿ ಭದ್ರಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಬಿಜೆಪಿ ಚುನಾವಣಾ ಚಾಣಕ್ಯ ಅಮಿತ್ ಶಾ ರಣತಂತ್ರದೊಂದಿಗೆ ಮೈಸೂರಿಗೆ ಭೇಟಿ ನೀಡಿದ್ದಾರೆ. ಮೈಸೂರು-ಚಾಮರಾಜನಗರ ಭಾಗದಲ್ಲಿ ಎರಡು ದಿನಗಳ ಕಾಲ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ.

Central minister Amit Shah Visit Mysuru Chamundi Hills

ಸದ್ಯ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ಅಮಿತ್ ಶಾ, ಇದಾದ ಬಳಿಕ ಚಾಮರಾಜನಗರದತ್ತ ತೆರಳಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರೋಡ್ ಶೋನಲ್ಲಿ ಕೇಂದ್ರ ಸಚಿವ ಗೃಹ ಅಮಿತ್ ಶಾ ಭಾಗಿಯಾಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+