ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು: ಭದ್ರತೆಯ ನಡುವೆ 26 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಆರಂಭ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜುಲೈ 30: ರಾಜ್ಯದಾದ್ಯಂತ ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 10,368 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಎರಡು ಗಂಟೆ ಮುಂಚಿತವಾಗಿಯೇ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೈಗೊಂಡಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವದ ಸೂಚನೆ!ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರದ ಮಹತ್ವದ ಸೂಚನೆ!

ಇಂದು ಬೆಳಿಗ್ಗೆ 10.30 ರಿಂದ ಪರೀಕ್ಷೆ ಆರಂಭವಾಗಲಿದ್ದು, 11.50 ರವರೆಗೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನೂ ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಬಂದಾಗ ಅವರಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಕೈಗಳಿಗೆ ಸ್ಯಾನಿಟೈಸರ್ ಹಾಕಿ ಒಳಗೆ ಬಿಡಲಾಯಿತು.

Mysuru: CET Exam Started In 26 Centers On Today

ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನೊಳಗೊಂಡ ಹೆಲ್ತ್ ಡೆಸ್ಕ್ ಬೆಳಿಗ್ಗೆ 8 ರಿಂದಲೇ ಕಾರ್ಯಾಚರಣೆಗಿಳಿದಿತ್ತು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮಾಸ್ಕ್ ಧರಿಸಿಯೇ ಬಂದಿದ್ದರು. ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದುದರಿಂದ ವಿದ್ಯಾರ್ಥಿಗಳ ಪೋಷಕರು 200 ಮೀಟರ್ ವ್ಯಾಪ್ತಿಯಲ್ಲಿಯೇ ಮಕ್ಕಳನ್ನು ಬಿಟ್ಟು ಅಲ್ಲೇ ನಿಂತಿರುವುದು ಕಂಡು ಬಂತು. ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.

English summary
CET exams are being conducted today and tomorrow across the state and students are writing exams at 26 examination centers in Mysuru district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X