ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ಸಿ.ಹೆಚ್.ವಿಜಯಶಂಕರ್

|
Google Oneindia Kannada News

ಮೈಸೂರು, ಮಾರ್ಚ್ 15:ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್‌ನ ಸಿ.ಎಚ್.ವಿಜಯಶಂಕರ್ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಗೆ ಕಾಯಲಾಗುತ್ತಿದೆ. ಕಳೆದ ಬಾರಿ ಕಾಂಗ್ರೆಸ್‌ನಿಂದ ಎಚ್.ವಿಶ್ವನಾಥ್ ಅವರು ಸ್ಪರ್ಧಿಸುವ ಮೂಲಕ ಜೆಡಿಎಸ್ ಗೆ ಸೆಡ್ಡು ಹೊಡೆದಿದ್ದರು.

ಆದರೆ ಜೆಡಿಎಸ್ ನಾಮಕಾವಸ್ಥೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಬಿಜೆಪಿಯ ಗೆಲುವಿನ ಹಾದಿಯನ್ನು ಸುಗಮ ಮಾಡಿಕೊಟ್ಟಿದ್ದರು.ಆದರೆ ಈ ಬಾರಿ ಎಲ್ಲವೂ ಬದಲಾಗಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಯಾಗಿದ್ದು, ಬಿಜೆಪಿ ವಿರುದ್ಧ ಸ್ಪರ್ಧೆಗೆ ತಯಾರಿ ನಡೆಸುತ್ತಿವೆ.

ಸದ್ಯ ಸೀಟು ಹಂಚಿಕೆ ವೇಳೆ ಮೈಸೂರನ್ನು ಕಾಂಗ್ರೆಸ್‌ಗೆ ಉಳಿಸಿಕೊಂಡು ಮೇಲುಗೈ ಸಾಧಿಸುವಲ್ಲಿ ಮತ್ತು ತನ್ನ ಆಪ್ತನಿಗೆ ನೀಡುವಲ್ಲಿಯೂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಬಿಜೆಪಿಯಲ್ಲಿಯೇ ಇದ್ದ ವಿಜಯಶಂಕರ್ ಬಿಜೆಪಿ ರಾಜ್ಯ ನಾಯಕರೊಂದಿಗೆ ಮುನಿಸಿಕೊಂಡು ಕಾಂಗ್ರೆಸ್ ಸೇರ್ಪಡೆಯಾಗುವ ಮೂಲಕ ಗಮನಸೆಳೆದಿದ್ದರು.

ಕೈ-ತೆನೆ ಪಾಳಯದಿಂದ ಮೈಸೂರು ಲೋಕಸಭಾ ಅಭ್ಯರ್ಥಿಯಾಗಿ ವಿಜಯಶಂಕರ್?ಕೈ-ತೆನೆ ಪಾಳಯದಿಂದ ಮೈಸೂರು ಲೋಕಸಭಾ ಅಭ್ಯರ್ಥಿಯಾಗಿ ವಿಜಯಶಂಕರ್?

ಲೋಕಸಭಾ ಕ್ಷೇತ್ರದ ಸೀಟು ಹಂಚಿಕೆ ಸಂದರ್ಭ ಮೈತ್ರಿ ಪಕ್ಷದಲ್ಲಿ ಮೈಸೂರು ಕ್ಷೇತ್ರಕ್ಕಾಗಿ ಒಂದಷ್ಟು ಹಗ್ಗ ಜಗ್ಗಾಟವೂ ನಡೆದಿತ್ತು. ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಇರುವ ಕಾರಣ ತಮಗೆ ನೀಡುವಂತೆ ಜೆಡಿಎಸ್ ನಾಯಕರು ಪಟ್ಟು ಹಿಡಿದಿದ್ದರು. ಮುಂದೆ ಓದಿ...

 ಕೊನೆಗೂ ಕಾಂಗ್ರೆಸ್‌ ಪಾಲು

ಕೊನೆಗೂ ಕಾಂಗ್ರೆಸ್‌ ಪಾಲು

ಮೈಸೂರು ಭಾಗದಲ್ಲಿ ತಮ್ಮ ಹಿಡಿತ ಕಳೆದುಕೊಳ್ಳುವ ಭಯದಲ್ಲಿದ್ದ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಕ್ಷೇತ್ರವನ್ನು ಬಿಟ್ಟುಕೊಟ್ಟುವುದಿಲ್ಲ ಎಂದು ಬಿಗಿ ಪಟ್ಟುಹಿಡಿದ ಪರಿಣಾಮ ಕೊನೆಗೂ ಕಾಂಗ್ರೆಸ್‌ಗೆ ದಕ್ಕುವಂತಾಗಿದೆ. ಅಷ್ಟೇ ಅಲ್ಲದೆ , ಈ ಕ್ಷೇತ್ರದ ಮೇಲೆ ದೃಷ್ಠಿ ನೆಟ್ಟು ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ವಿಜಯಶಂಕರ್ ಅವರಿಗೆ ಸಿಗುವಂತಾಗಿದೆ.

 ಮಂಡ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ ಸುಮಲತಾ-ಎಸ್‌ಎಂ ಕೃಷ್ಣ ಭೇಟಿ ಮಂಡ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿದ ಸುಮಲತಾ-ಎಸ್‌ಎಂ ಕೃಷ್ಣ ಭೇಟಿ

 ಟಿಕೆಟ್ ನೀಡಲು ಬೆಂಬಲ

ಟಿಕೆಟ್ ನೀಡಲು ಬೆಂಬಲ

ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಬಹಳಷ್ಟು ಚರ್ಚೆ ನಡೆದಿತ್ತು. ಕೊನೆಗೆ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಅವರ ಶಾರದಾದೇವಿ ನಗರದ ನಿವಾಸದಲ್ಲಿ ಮಹತ್ವದ ಸಭೆ ನಡೆಸಿ ಮೈಸೂರು-ಕೊಡಗು ಕ್ಷೇತ್ರದ ಅಭ್ಯರ್ಥಿಯ ಆಯ್ಕೆ ಮಾಡಲಾಗಿದ್ದು, ಸಭೆಯಲ್ಲಿದ್ದ ಮುಖಂಡರು ವಿಜಯಶಂಕರ್ ಅವರಿಗೆ ಟಿಕೆಟ್ ನೀಡಲು ಬೆಂಬಲ ನೀಡಿದ್ದಾರೆ ಎನ್ನಲಾಗಿದೆ.

 ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ: ಸುಮಲತಾ ಅಭಿಮತ ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ: ಸುಮಲತಾ ಅಭಿಮತ

 ದೇವೇಗೌಡರ ವಿರುದ್ಧ ಸೋತಿದ್ದರು

ದೇವೇಗೌಡರ ವಿರುದ್ಧ ಸೋತಿದ್ದರು

ಇನ್ನು ವಿಜಯ್‌ಶಂಕರ್ ಅವರ ಬಗ್ಗೆ ಹೇಳುವುದಾದರೆ, ಮೈಸೂರು-ಕೊಡಗು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 2 ಬಾರಿ ಆಯ್ಕೆಯಾಗಿದ್ದರಾದರೂ 2014ರ ಚುನಾವಣೆಯಲ್ಲಿ ಮೈಸೂರು ಕ್ಷೇತ್ರವನ್ನು ಪ್ರತಾಪಸಿಂಹ ಅವರಿಗೆ ಬಿಟ್ಟುಕೊಟ್ಟಿದ್ದರಿಂದ ಹಾಸನದಲ್ಲಿ ದೇವೇಗೌಡರ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಇದು ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಹೀಗಾಗಿಯೇ ಬಿಜೆಪಿ ನಾಯಕರ ಬಗ್ಗೆ ಬೇಸರಗೊಂಡಿದ್ದರು.

 ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆ

ಅಷ್ಟೇ ಅಲ್ಲದೆ, ಕ್ರಮೇಣ ಬಿಜೆಪಿಯಲ್ಲಿ ಸೂಕ್ತ ಸ್ಥಾನ ಸಿಗದೆ ವಿಜಯ್‌ಶಂಕರ್ ಮೂಲೆ ಗುಂಪಾಗಿದ್ದರಿಂದ 2017ರಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರಂತೆ ಮೈಸೂರು-ಕೊಡಗು ಟಿಕೆಟ್ ಕೊಡಿಸುವುದಾಗಿ ಮಾತು ಕೊಟ್ಟಿದ್ದರಂತೆ ಅದನ್ನು ಈಡೇರಿಸುವ ಮೂಲಕ ತಮ್ಮ ಮಾತನ್ನು ನಡೆಸಿಕೊಟ್ಟಿದ್ದಾರೆ ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ.

English summary
CH Vijayawaskar selected as Congress candidate of Mysore-Kodagu constituency.Now waiting for the official announcement.Here's a report on this
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X