ರಾಜೀವ್ ಗಾಂಧಿ ಬಗ್ಗೆ ಮೋದಿ ಹಾಗೆ ಹೇಳಬಾರದಿತ್ತು: ಶ್ರೀನಿವಾಸ್ ಪ್ರಸಾದ್ ವಿರೋಧ
ಮೈಸೂರು, ಮೇ 8: ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ ಕುರಿತು ಆ ರೀತಿಯ ಹೇಳಿಕೆ ನೀಡಬಾರದಿತ್ತು ಎಂದು ಮಾಜಿ ಸಚಿವ, ಚಾಮರಾಜನಗರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧ ಇದೆ ಎಂದರು.
ಉತ್ತರ ಪ್ರದೇಶದ ಲಕ್ನೋದಲ್ಲಿ ಇತ್ತೀಚೆಗೆ ಚುನಾವಣಾ ಪ್ರಚಾರ ನಡೆಸುವ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು, 'ನಿಮ್ಮ ತಂದೆ (ಮಾಜಿ ಪ್ರಧಾನಿ ರಾಜೀವ್ ಗಾಂಧಿ) ಮಿಸ್ಟರ್ ಕ್ಲೀನ್ ಎಂದು ನಿಮ್ಮ ಕುಟುಂಬಕ್ಕೆ ಆಪ್ತರಾಗಿರುವವರು ಹೇಳುತ್ತಾರೆ. ಆದರೆ, ನಿಮ್ಮ ತಂದೆಯ ಬದುಕು ಭ್ರಷ್ಟಾಚಾರಿ ನಂಬರ್ 1 ಹಣೆಪಟ್ಟಿಯೊಂದಿಗೆ ಅಂತ್ಯವಾಯಿತು' ಎಂದು ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದರು
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ರಾಜೀವ್ ಗಾಂಧಿ 1980ರಲ್ಲಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ನಡೆದ ಬೋಫೋರ್ಸ್ ಹಗರಣದ ಕುರಿತು ಪ್ರಸ್ತಾಪಿಸಿದ್ದ ನರೇಂದ್ರ ಮೋದಿ ಅವರು, 'ಸ್ವೀಡಿಶ್ ಮೂಲದ ಬೋಫೋರ್ಸ್ ಕಂಪೆನಿಯಿಂದ ದೊಡ್ಡ ಮೊತ್ತದ ಹಣವನ್ನು ಕಿಕ್ ಬ್ಯಾಕ್ ರೂಪದಲ್ಲಿ ಪಡೆಯಲಾಗಿತ್ತು' ಎಂದು ಆರೋಪಿಸಿದ್ದರು.
ಮೋದಿ ಅವರ ಹೇಳಿಕೆ ರಾಷ್ಟ್ರಾದ್ಯಂತ ವ್ಯಾಪಕ ಚರ್ಚೆಗೆ ಒಳಗಾಗಿತ್ತು. ರಾಜೀವ್ ಗಾಂಧಿ ಅವರು ಪ್ರಧಾನಿಯಾಗಿದ್ದಾಗಲೇ ಹುತಾತ್ಮರಾದವರು. ಅವರು ದೇಶದ ಅಭಿವೃದ್ಧಿಗಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಬಗ್ಗೆ ಪ್ರಧಾನಿ ಹುದ್ದೆಯಲ್ಲಿರುವ ವ್ಯಕ್ತಿ ಕೀಳಾಗಿ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ಸಿಗರು ವಾಗ್ದಾಳಿ ನಡೆಸಿದ್ದರು.

ರಾಜೀವ್ ಗಾಂಧಿ ಬಗ್ಗೆ ಹೇಳಬಾರದಿತ್ತು
ರಾಜೀವ್ ಗಾಂಧಿ ಭ್ರಷ್ಟಾಚಾರದ ಬಗ್ಗೆ ಮಾತನಾಡಿದವರಲ್ಲ. ಭ್ರಷ್ಟಾಚಾರ ಆರೋಪ ಬಂದರೆ ರಾಜಕೀಯ ತ್ಯಜಿಸುವುದಾಗಿ ಹೇಳಿದ್ದರು. ಅವರನ್ನು ದೆಹಲಿ ಹೈಕೋರ್ಟ್ ಆರೋಪಮುಕ್ತರನ್ನಾಗಿ ಮಾಡಿತ್ತು. ರಾಜೀವ್ ಗಾಂಧಿ ಅವರ ಬಗ್ಗೆ ಮೋದಿ ಅವರು ಮಾತನಾಡಿರುವುದು ಸರಿಯಲ್ಲ. ಆ ಮಾತು ಮೋದಿ ಅವರಿಂದ ಬರಬಾರದಿತ್ತು.

ದೇಶಕ್ಕೋಸ್ಕರ ಪ್ರಾಣ ನೀಡಿದ್ದಾರೆ
ರಾಜೀವ್ ಗಾಂಧಿ ಅವರ ಕುರಿತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಒಳ್ಳೆಯ ಮಾತು ಆಡಿದ್ದಾರೆ. ಮೋದಿ ಅವರ ಮಾತು ಕೇಳಿ ನನಗೂ ಬೇಸರವಾಯಿತು. ರಾಜೀವ್ ಗಾಂಧಿ ದೇಶಕ್ಕೋಸ್ಕರ ಪ್ರಾಣ ನೀಡಿದ್ದಾರೆ. ಅಂತಹವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿರುವುದು ಸರಿಯಲ್ಲ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದರು.

ನಾನು-ವಿಶ್ವನಾಥ್ ಸ್ನೇಹಿತರು
ನಾನು ಎಚ್ ವಿಶ್ವನಾಥ್ ಸ್ನೇಹಿತರು. ನಿನ್ನೆ ವಿಶ್ವನಾಥ್ ನನ್ನನ್ನು ಭೇಟಿ ಮಾಡಿ ಮಾತನಾಡಿದರು. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮಾತನಾಡಿರಲಿಲ್ಲ. ರಾಜಕೀಯದಲ್ಲಿ ಬೇರೆ ಬೇರೆ ಇದ್ದರೂ ನಮ್ಮ ವಿಶ್ವಾಸಕ್ಕೆ ಧಕ್ಕೆ ಆಗಿಲ್ಲ. ವಿಶ್ವನಾಥ್ ಅವರು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷರಾಗಿರುವುದರಿಂದ ಅವರನ್ನು ಈ ಹಿಂದೆ ಭೇಟಿ ಮಾಡಿರಲಿಲ್ಲ ಎಂದು ತಮ್ಮ ಹಾಗೂ ವಿಶ್ವನಾಥ್ ಅವರ ಭೇಟಿ ಕುರಿತು ಸ್ಪಷ್ಟನೆ ನೀಡಿದರು.

ದೋಸ್ತಿ ಕಥೆ ಗೊತ್ತಿದೆ
ಮುಂದಿನ ಬೆಳವಣಿಗೆ, ಊಹಾಪೋಹಗಳ ಬಗ್ಗೆ ಮಾತನಾಡಬಾರದು. ಕೆಲವು ಕಡೆ ಅಸಮಾಧಾನ ಇದ್ದರೂ ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಮೈಸೂರಿನಲ್ಲಿ ದೋಸ್ತಿ ಕಥೆ ಏನಾಯ್ತು ಎಂಬುದು ನಮಗೆ ಗೊತ್ತಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ವಿಚಾರದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅದು ನಮಗೆ ಸಂಬಂಧವಿಲ್ಲ, ಆ ವಿಚಾರದ ಬಗ್ಗೆ ಮಾತೂ ಆಡಿಲ್ಲ. ಅವರು ಸಿಎಂ ಆಗಿದ್ದಾಗ ಏನೇನು ಮಾತನಾಡಿದ್ದರು ಎಂಬುದು ತಿಳಿದಿದೆ ಎಂದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications