ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತನ್ವೀರ್ ಸೇಠ್ ರನ್ನು ಸಂಪುಟದಿಂದ ಕೈ ಬಿಡಿ ಎಂದ ಚಂಪಾ

|
Google Oneindia Kannada News

ಮೈಸೂರು, ನವೆಂಬರ್ 24: "ಇಂದಿನ ಸಾಹಿತ್ಯ ಸಮ್ಮೇಳನಕ್ಕೆ ಬಾರದ ಹಾಗೂ ಸರಿಯಾಗಿ ಸ್ಪಂದಿಸದ ಸಚಿವ ತನ್ವೀರ್ ಸೇಠ್ ಅವರನ್ನು ಸಂಪುಟದಿಂದ ಕೈ ಬಿಡಬೇಕು" ಎಂದು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಚಂದ್ರಶೇಖರ ಪಾಟೀಲ (ಚಂಪಾ) ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಚಿತ್ರಗಳು : ಮೈಸೂರಲ್ಲಿ 83ನೇ ಸಾಹಿತ್ಯ ಸಮ್ಮೇಳನ ಸಂಭ್ರಮ

ಇದಕ್ಕೂ ಮುನ್ನ ರಾಜ್ಯದ ಮುಖ್ಯಮಂತ್ರಿಗಳಿಗಿರುವಷ್ಟು ಸೌಜನ್ಯ, ಸಮಯ, ಸಂಯಮ, ಶಿಕ್ಷಣ ಸಚಿವ ತನ್ವೀರ್ ಸೇಠ್ ಗೆ ಇಲ್ಲ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಛಾಟಿ ಬೀಸಿದರು. ನಾಡಗೀತೆ, ನಾಡಧ್ವಜದಂತೆಯೇ ನಮಗೆ "ನಾಡಪಠ್ಯ' ವ್ಯವಸ್ಥೆ ಬೇಕು ಈ ಕುರಿತು ಮುಖ್ಯಮಂತ್ರಿಗಳಿಗೆ ಮತ್ತು ಶಿಕ್ಷಣ ಸಚಿವ ತನ್ವೀರ್ ಸೇಠ್ ಗೆ ಪತ್ರ ಬರೆದೆ.

Champa urges Siddaramaiah to remove minister Tanvir Sait from cabinet

ಮುಖ್ಯಮಂತ್ರಿಗಳು ವಾರದಲ್ಲೇ ಉತ್ತರಿಸಿದರು. ಆದರೆ ಶಿಕ್ಷಣ ಸಚಿವರು ಸೌಜನ್ಯಕ್ಕಾದರೂ ಪ್ರತಿಕ್ರಿಯಿಸಲಿಲ್ಲ. ಕನಿಷ್ಠ ಫೋನ್ ಕರೆ ಕೂಡ ಮಾಡಲಿಲ್ಲ ಎಂದು ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತಪಡಿಸಿದರು. ಮತ್ತು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮೈಸೂರಿನಲ್ಲಿ ನಡೆಯುತ್ತಿದ್ದು, ಅಲ್ಲಿನವರೇ ಆದ ತನ್ವೀರ್ ಸೇಠ್ ಭಾಗವಹಿಸದಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡದ ಸಂಕಟಗಳಿಗೆಲ್ಲ ಕುಲಕಂಟಕರೇ ಕಾರಣ : ಚಂಪಾಕನ್ನಡದ ಸಂಕಟಗಳಿಗೆಲ್ಲ ಕುಲಕಂಟಕರೇ ಕಾರಣ : ಚಂಪಾ

ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ದೂರವಾಣಿ ಮೂಲಕ ತನ್ವೀರ್ ಸೇಠ್ ಅವರನ್ನು ಒನ್ಇಂಡಿಯಾ ಕನ್ನಡ ಸಂಪರ್ಕಿಸಲು ಪ್ರಯತ್ನಿಸಿತು. ಆದರೆ ಅವರ ಮೊಬೈಲ್ ಫೋನ್ ನಾಟ್ ರೀಚಬಲ್ ಆಗಿತ್ತು.

English summary
Minister Tanvir Sait who have elected as MLA from Mysuru is not present in Kannada Sahitya Sammelana on Friday. Sammelana president Champa (Chandrashekhara Patila) urged Siddarmaiah to remove Sait from his cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X