Breaking News: ಸಿಎಂ ನೇತೃತ್ವದಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ, ಯದುವೀರ್ ಟ್ವೀಟ್
ಮೈಸೂರು, ಸೆಪ್ಟೆಂಬರ್ 03: ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವಿಚಾರದಲ್ಲಿ ಮತ್ತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಯದುವೀರ್ ಒಡೆಯರ್ ನಡುವೆ ಜಟಾಪಟಿ ಆರಂಭವಾಗಿದೆ. ಮೈಸೂರಿನಲ್ಲಿರುವ ಸಿದ್ದರಾಮಯ್ಯ ಇಂದು ಪ್ರಾಧಿಕಾರದ ಸಭೆಯನ್ನು ಕರೆದಿದ್ದು, ಈ ಕುರಿತು ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಟ್ವೀಟ್ ಮಾಡಿದ್ದಾರೆ.
ಮಂಗಳವಾರ ಟ್ವೀಟ್ ಮಾಡಿರುವ ಯದುವೀರ್ ಒಡೆಯರ್, 'ನಮಸ್ತೆ, ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮ 2024 ಪ್ರಸ್ತುತ ಕರ್ನಾಟಕದ ಗೌರವಾನ್ವಿತ ಹೈಕೋರ್ಟ್‌ನಲ್ಲಿ ಕಾನೂನು ಸವಾಲನ್ನು ಎದುರಿಸುತ್ತಿದೆ ಎಂಬುದನ್ನು ನಾನು ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮುಂದಿನ ಸೂಚನೆ ಬರುವವರೆಗೂ ಕಾಯಿದೆ ಜಾರಿ ಮಾಡಬಾರದು ಎಂದು ಮಧ್ಯಂತರ ಆದೇಶ ನೀಡಿದ್ದರೂ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಇಂದು ಸಭೆ ನಿಗದಿಯಾಗಿದೆ' ಎಂದು ಹೇಳಿದ್ದಾರೆ.

'5ನೇ ಸೆಪ್ಟೆಂಬರ್ 2024 ರಂದು ಈ ವಿಷಯವನ್ನು ನ್ಯಾಯಾಂಗ ವಿಚಾರಣೆ ನಡೆಯಲಿದ್ದು ಕಾನೂನು ಪ್ರಕ್ರಿಯೆಯನ್ನು ಗೌರವಿಸಲು ಮತ್ತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ನಿಮ್ಮ ಕಾನೂನನ್ನು ಎತ್ತಿಹಿಡಿಯುವಲ್ಲಿ ಮತ್ತು ಸರಿಯಾದ ಪ್ರಕ್ರಿಯೆಯನ್ನು ಅನುಸರಿಸುವುದನ್ನು ಖಚಿತಪಡಿಸಿಕೊಳ್ಳಲು ದೃಢವಾಗಿ ನಿಲ್ಲುತ್ತೇನೆ' ಎಂದು ಯದುವೀರ್ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, "ಹೈಕೋರ್ಟ್ ಆದೇಶದಂತೆಯೇ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ನಡೆಸುತ್ತಿದ್ದೇನೆ" ಎಂದು ಹೇಳಿದ್ದಾರೆ. ಆದ್ದರಿಂದ ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಯುವುದು ಖಚಿತವಾಗಿದೆ.
ಏನಿದು ಜಟಾಪಟಿ?; ಕರ್ನಾಟಕ ಸರ್ಕಾರ ಮತ್ತು ಮೈಸೂರು ರಾಜಮನೆತನದ ನಡುವೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿಚಾರದಲ್ಲಿ ಜಟಾಪಟಿ ನಡೆಯುತ್ತಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಹೈಕೋರ್ಟ್‌ನಿಂದ ತಂದಿದ್ದ ತಡೆಯಾಜ್ಞೆ ತೆರವುಗೊಳಿಸಲಾಗಿದೆ. ಆದ್ದರಿಂದ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ದಾಸೋಹ ಭವನದಲ್ಲಿ ಪ್ರಾಧಿಕಾರದ ಮೊದಲ ಸಭೆಯನ್ನು ನಡೆಸುತ್ತಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್. ಸಿ. ಮಹದೇವಪ್ಪ ಸಹ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
2024ರ ಜುಲೈ 1ರಂದು ಕರ್ನಾಟಕ ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶವನ್ನು ಹೊರಡಿಸಿತ್ತು. ಜುಲೈ 26ರಂದು ಪ್ರಮೋದಾ ದೇವಿ ಒಡೆಯರ್ ಈ ಆದೇಶಕ್ಕೆ ತಡೆಯಾಜ್ಞೆಯನ್ನು ತಂದಿದ್ದರು. ಚಾಮುಂಡಿ ಬೆಟ್ಟ ರಾಜಮನೆತನದ ಖಾಸಗಿ ಆಸ್ತಿ ಎಂಬುದು ವಾದವಾಗಿದೆ.
ಆದರೆ ಸರ್ಕಾರ ಚಾಮುಂಡಿ ಬೆಟ್ಟವನ್ನು ಹಿಂದಿನಿಂದ ಸರ್ಕಾರವೇ ನಿರ್ವಹಣೆ ಮಾಡುತ್ತಿದೆ. ಜನರ ಒತ್ತಾಯದ ಮೇರೆಗೆ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗಿದೆ. ಅಧಿಕಾರಿಗಳೇ ಸಂಪೂರ್ಣವಾಗಿ ನಿರ್ವಹಣೆ ಮಾಡುವ ಪ್ರಾಧಿಕಾರವಿದು ಎಂಬುದು ಸರ್ಕಾರದ ವಾದವಾಗಿದೆ.
-
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.











Click it and Unblock the Notifications