ಜುಲೈ 20ರಂದು ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನವಿಲ್ಲ

ಮೈಸೂರು, ಜುಲೈ 16 : ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಜುಲೈ 20ರಂದು ಚಾಮುಂಡಿಬೆಟ್ಟದಲ್ಲಿ ದೇವರ ದರ್ಶನವನ್ನು ರದ್ದುಗೊಳಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಕಿತರ ಸಂಖ್ಯೆ 1320ಕ್ಕೆ ಏರಿಕೆಯಾಗಿದೆ.

Recommended Video

      Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

      ಗುರುವಾರ ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಜುಲೈ 20 ರಂದು ಚಾಮುಂಡಿಬೆಟ್ಟದಲ್ಲಿ ದೇವರ ದರ್ಶನವನ್ನು ರದ್ದುಪಡಿಸಲಾಗಿದೆ. ಆಷಾಢ ಶುಕ್ರವಾರ, ಪ್ರತಿ ಶನಿವಾರ ಮತ್ತು ಭಾನುವಾರಗಳಂದು ಹೇರಲಾಗಿದ್ದ ನಿಷೇಧವೂ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

      ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧವಿರುವ ದಿನಗಳಂದು ಗ್ರಾಮಸ್ಥರ ವಾಹನ ಹಾಗೂ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ, ಸಾರ್ವಜನಿಕರ ವಾಹನ ಮತ್ತು ಖಾಸಗಿ ವಾಹನಗಳು ಸಂಚಾರ ನಡೆಸುವಂತಿಲ್ಲ.

      Chamundeshwari Temple Close For Devotes On July 20

      ಚಾಮುಂಡಿಬೆಟ್ಟ ಹಾಗೂ ಉತ್ತನಹಳ್ಳಿ ದೇವಾಲಯದ ಪ್ರದೇಶದಲ್ಲಿ ದೇವಾಲಯದ ವತಿಯಿಂದ ಹಾಗೂ ದಾನಿಗಳಿಂದ ಪ್ರಸಾದ ತಯಾರಿಸುವುದು ಹಾಗೂ ವಿತರಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

      ಮೈಸೂರು ನಗರದಲ್ಲಿ ಕೊರೊನಾ ವೈರಸ್ ಸೋಂಕಿನ ತಡೆಗೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ನಗರದ ಟೀ ಅಂಗಡಿಗಳಲ್ಲಿ ಮತ್ತು ಫುಟ್‌ಪಾತ್‌ನ ಟೀ ವ್ಯಾಪಾರಿ ಸ್ಥಳಗಳಲ್ಲಿ ಜನರು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಅನಗತ್ಯವಾಗಿ ಗುಂಪು ಸೇರುತ್ತಿರುವುದು ಬೆಳಕಿಗೆ ಬಂದಿದೆ. ಆದ್ದರಿಂದ, ಎಲ್ಲಾ ಟೀ ಅಂಗಡಿಗಳನ್ನು ಮುಚ್ಚಲು ಮಹಾನಗರ ಪಾಲಿಕೆ ಆದೇಶ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+