ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಚಾಮುಂಡೇಶ್ವರಿ ವರ್ಧಂತಿ ಉತ್ಸವ
ಮೈಸೂರು, ಆಗಸ್ಟ್.3 : ಶ್ರೀ ಚಾಮುಂಡೇಶ್ವರಿ ವರ್ಧಂತಿ ಉತ್ಸವದ ಅಂಗವಾಗಿ ಚಾಮುಂಡಿಬೆಟ್ಟ ಸೇರಿದಂತೆ ನಗರದ ವಿವಿಧೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ಕಾರ್ಯಕ್ರಮ ಶುಕ್ರವಾರ ನಡೆಯಿತು. ಹಾಗೆಯೇ ರಾಜವಂಶಸ್ಥರಿಂದ ದೇವಿಗೆ ವಿಶೇಷ ಪೂಜೆ ಸಲ್ಲಿಕೆಯಾಯಿತು.
ಮುಂಜಾನೆಯಿಂದಲೇ ಚಾಮುಂಡಿಬೆಟ್ಟಕ್ಕೆ ಜನರು ತೆರಳಿ ಅಮ್ಮನವರ ದರ್ಶನ ಪಡೆದು ಪುಳಕಗೊಂಡರು. ಬೆಟ್ಟದಲ್ಲಿ ಜನಜಂಗುಳಿ ಸೇರಿದ್ದರಿಂದ ಜಾತ್ರೆಯ ಕಳೆ ಮೂಡಿತ್ತು. ಬಸ್ ಗಳಲ್ಲಿ ಬಹಳ ಜನ ದಟ್ಟಣೆ ಇತ್ತು. ವ್ಯಾಪಾರದ ಭರಾಟೆಯೂ ಜೋರಾಗಿತ್ತು.
ದೇವತೆಯ ಚಿನ್ನದ ಪಲ್ಲಕ್ಕಿ ಉತ್ಸವ, ಸಾಂಪ್ರದಾಯಿಕ ರಥೋತ್ಸವ, ಮಂಟಪೋತ್ಸವದ ಜೊತೆಗೆ ಪ್ರಸಾದ ವಿನಿಯೋಗ ನಡೆಯಿತು.
ಬೆಳಗ್ಗೆಯಿಂದಲೇ ದಾನಿಗಳು ಬೆಟ್ಟಕ್ಕೆ ಆಗಮಿಸುವವರಿಗೆ ಅನ್ನಸಂತರ್ಪಣೆಯನ್ನು ಹಮ್ಮಿಕೊಂಡಿದ್ದರು. ಅಲ್ಲದೆ, ವಿವಿಧ ಆಟೋ ಚಾಲಕರ ಸಂಘಗಳು, ಸೇವಾ ಸಂಸ್ಥೆಗಳು, ವೃತ್ತಗಳಲ್ಲಿ ದೇವರ ಪೂಜೆಯನ್ನು ನೆರವೇರಿಸಿ ಬಾತ್, ಮೊಸರನ್ನ, ಕೇಸರಿಬಾತ್ ಮತ್ತಿತರ ತಿಂಡಿಯನ್ನು ವಿತರಿಸುವ ಮೂಲಕ ವರ್ಧಂತಿಯನ್ನು ಆಚರಿಸಿದರು.

ಚಾಮುಂಡೇಶ್ವರಿ ದರ್ಶನ ಪಡೆದ ಭಕ್ತರು
ಚಾಮುಂಡೇಶ್ವರಿ ದೇವಿಯ ವರ್ಧಂತಿ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಅಮ್ಮನವರ ಜನ್ಮದಿನವೇ ಆಕೆಯ ದರ್ಶನ ಪಡೆಯಲು, ಭಕ್ತರು ಹೊತ್ತು ಮೂಡುವ ಮುನ್ನವೇ ಸರತಿ ಸಾಲಿನಲ್ಲಿ ನಿಂತಿದ್ದರು.
ವರ್ಧಂತಿ ಪ್ರಯುಕ್ತ ಮುಂಜಾನೆ 4 ಗಂಟೆಯಿಂದಲೇ ಪೂಜೆ, ಅಭಿಷೇಕ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಎಣ್ಣೆ ಸ್ನಾನ, ನಾನಾ ಅಭಿಷೇಕಗಳು ದೇವಿಗೆ ನಡೆದವು. ನೂಕು ನುಗ್ಗಲ ನಡುವೆಯೇ ಭಕ್ತರು ದೇವಿಯ ದರ್ಶನ ಪಡೆದರು.

ಚಾಲನೆ ನೀಡಿದ ಯದುವೀರ್ ಒಡೆಯರ್
ಶುಕ್ರವಾರ ಬೆಳಗ್ಗೆ 10.35 ಗಂಟೆಗೆ ಮಹಾ ಮಂಗಳಾರತಿ ನಡೆಯಿತು. ಬಳಿಕ ಚಾಮುಂಡೇಶ್ವರಿ ದೇವಿಯ ಚಿನ್ನದ ಪಲ್ಲಕ್ಕಿಯ ಉತ್ಸವ ನಡೆಯಿತು. ಉತ್ಸವಕ್ಕೆ ಯದುವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಲನೆ ನೀಡಿದರು.
ಈ ಸಂದರ್ಭ ಮೂೂರ್ತಿಯ ಪ್ರದಕ್ಷಿಣೆ ನಡೆಯಿತು. ಉತ್ಸವಕ್ಕೆ ಚಾಲನೆ ನೀಡುವ ಸಂದರ್ಭ ಪ್ರಮೋದಾ ದೇವಿ ಒಡೆಯರ್, ತ್ರಿಷಿಕಾ ಕುಮಾರಿ ಸಿಂಗ್ ಇದ್ದರು.

ವಿಶೇಷ ಜಲದ ಅಭಿಷೇಕ
ಚಾಮುಂಡೇಶ್ವರಿ ದೇವಿಯ ವರ್ಧಂತಿ ಪ್ರಯುಕ್ತ ದೇವಿಯ ಮೂರ್ತಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನ ಜಾವ 3 ಗಂಟೆಗೆ ದೇವಿಕೆರೆಯಿಂದ ವಿಶೇಷವಾಗಿ ಜಲವನ್ನು ತಂದು ಅಭಿಷೇಕ ಮಾಡಲಾಯಿತು.
ತೈಲ ಮಜ್ಜನ, ಅರಿಶಿನ ಪೂಜೆ ನಂತರ ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಸಹಸ್ರ ನಾಮಾರ್ಚನೆ ಮಂಗಳಾರತಿಗಳು ಸಾಂಗೋಪಾಂಗವಾಗಿ ನೆರವೇರಿದವು.

ಸಿಹಿ ತಿಂಡಿ ಅರ್ಪಣೆ
ಐದು ಬಗೆಯ ಸಿಹಿ ತಿಂಡಿಗಳನ್ನು ದೇವಿಗೆ ಅರ್ಪಿಸಲಾಯಿತು. ಅರಮನೆಯಿಂದ ತಂದಿದ್ದ ವಿಶೇಷ ಅಲಂಕೃತ ಚಿನ್ನದ ಪಲ್ಲಕ್ಕಿಯಲ್ಲಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನಿರಿಸಲಾಯಿತು. ಪೊಲೀಸ್ ಬ್ಯಾಂಡ್‌ನ ನಿನಾದದೊಂದಿಗೆ ದೇವಿಯನ್ನು ಹೊತ್ತ ರಥ ದೇವಸ್ಥಾನದ ಸುತ್ತಲೂ ಪ್ರದಕ್ಷಿಣೆ ಹಾಕಿತು.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications