• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾಡದೇವತೆಯ ವರ್ಧಂತಿಗೆ ತಯಾರಾಗುತ್ತಿದೆ ಸಾಂಸ್ಕೃತಿಕ ನಗರಿ

By ಮೈಸೂರು ಪ್ರತಿನಿಧಿ
|

ಮೈಸೂರು, ಮೇ 9 : ನಾಡದೇವತೆ ಶ್ರೀ ಚಾಮುಂಡಿದೇವಿಯ ಆಷಾಢ ಶುಕ್ರವಾರ ಪೂಜೆಯಂದ್ರೆ ಇಡೀ ರಾಜ್ಯಕ್ಕೆ ಒಂದು ವಿಶೇಷ ಹಬ್ಬ. ಹಬ್ಬವನ್ನು ವೈಭವೋಪೇತವಾಗಿ ಆಚರಿಸಲು ಅನುಕೂಲಕರವಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದೆ ಎಂದು ಇಂದು ಜಿಲ್ಲಾಧಿಕಾರಿ ರಂದೀಪ್ ಇಂದು ತಿಳಿಸಿದರು.

2017ನೇ ಸಾಲಿನ ಆಷಾಢ ಶುಕ್ರವಾರಗಳು ಹಾಗೂ ಅಮ್ಮನವರ ಜನ್ಮೋತ್ಸವ ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಚಾಮುಂಡಿ ಬೆಟ್ಟದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಈ ವರ್ಷ ಜೂನ್ 30 ರಂದು ಮೊದಲನೇ ಆಷಾಢ ಶುಕ್ರವಾರ, ಜುಲೈ 7 ರಂದು ಎರಡನೇ ಆಷಾಢ ಶುಕ್ರವಾರ, ಜುಲೈ 14 ರಂದು ಮೂರನೇ ಆಷಾಢ ಶುಕ್ರವಾರ, ಜುಲೈ 21 ರಂದು ನಾಲ್ಕನೇ ಆಷಾಢ ಶುಕ್ರವಾರ ಹಾಗೂ ಜುಲೈ 16 ರಂದು ಅಮ್ಮನವರ ವರ್ಧಂತಿ ಮಹೋತ್ಸವ ನಡೆಯಲಿದೆ. ಈ ದಿನಗಳಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆ ಕಲ್ಪಿಸಲು ಸಕಲ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಪೂರ್ವಸಿದ್ಧತಾ ಸಭೆಯಲ್ಲಿ ತಿಳಿಸಿದರು.[ನೀರು ಬಿಟ್ಟಿಲ್ಲ ಅಂದ್ರೆ ಬೆಂಕಿ ಹಚ್ತೀವಿ: ಎಂಸಿಸಿ ಸದಸ್ಯ ಆಕ್ರೋಶ]

ಖಾಸಗಿ ವಾಹನಗಳಿಗೆ ಸಂಪೂರ್ಣ ನಿರ್ಬಂಧ

ಖಾಸಗಿ ವಾಹನಗಳಿಗೆ ಸಂಪೂರ್ಣ ನಿರ್ಬಂಧ

ಈ ಬಾರಿ ಚಾಮುಂಡಿಬೆಟ್ಟಕ್ಕೆ ಬರುವ ಎಲ್ಲ ಖಾಸಗಿ ವಾಹನಗಳನ್ನು ಲಲಿತ ಮಹಲ್ ಹೆಲಿಪ್ಯಾಡ್ ಅಥವಾ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಪಾರ್ಕಿಂಗ್ ಮಾಡಿ ಅಲ್ಲಿಂದ ಬೆಟ್ಟಕ್ಕೆ ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಮೂಲಕ ನಿಗದಿತ ಬಸ್ ದರ ಪಾವತಿಸಿ ತೆರಳುವ ವ್ಯವಸ್ಥೆ ಮಾಡಲಾಗಿದೆ. ಭಕ್ತಾಧಿಗಳ ಸಂಖ್ಯೆಯನ್ನು ಅಂದಾಜು ಮಾಡಿ ಅದಕ್ಕೆ ಅನುಗುಣವಾಗಿ ಬಸ್ ಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಮೂಲಭೂತ ಸೌಕರ್ಯದ ವ್ಯವಸ್ಥೆ

ಮೂಲಭೂತ ಸೌಕರ್ಯದ ವ್ಯವಸ್ಥೆ

ಲಲಿತ ಮಹಾಲ್ ಹೆಲಿಪ್ಯಾಡ್ ಮತ್ತು ವಸ್ತುಪ್ರದರ್ಶನದ ಪಾರ್ಕಿಂಗ್ ಸ್ಥಳಗಳಿಂದ ಬೆಟ್ಟಕ್ಕೆ ಪ್ರಯಾಣಿಸುವ ಭಕ್ತಾದಿಗಳ ಅನುಕೂಲಕ್ಕಾಗಿ ಕುಡಿಯುವ ನೀರಿನ ವ್ಯವಸ್ಥೆ, ವಾಟರ್ ಫ್ರೂಫ್ ಶಾಮಿಯಾನ, ತಾತ್ಕಾಲಿಕ ಶೌಚಾಲಯ, ಬ್ಯಾರಿಕೇಡಿಂಗ್, ವಿದ್ಯುತ್ ದೀಪದ ವ್ಯವಸ್ಥೆ, ದ್ವಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡುವಂತೆ ತಿಳಿಸಿದರು.[ಒಡೆಯರ್ ವಂಶಸ್ಥ ಯದುವೀರ್ ನೆಟಿಜನ್ಸ್ ಗೆ ಕೊಟ್ರು ಎಚ್ಚರಿಕೆ]

ಅಪರಾಧ ತಡೆಗಾಗಿ ಸಿಸಿ ಕಣ್ಗಾವಲು

ಅಪರಾಧ ತಡೆಗಾಗಿ ಸಿಸಿ ಕಣ್ಗಾವಲು

ಸದರಿ ಕಾರ್ಯಕ್ರಮದ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಬರುವುದರಿಂದ ಸರಗಳ್ಳತನ, ಜೇಬು ಕಳ್ಳತನ ಇತ್ಯಾದಿ ಅಹಿತಕರ ಘಟನೆಗಳನ್ನು ತಡೆಯಲು ದೇವಸ್ಥಾನದ ಹೊರ ಆವರಣದಲ್ಲಿ ತಾತ್ಕಾಲಿಕ ಸಿಸಿ ಕ್ಯಾಮರಾಗಳನ್ನು ಅಳವಡಿಸುವುದು. ದೇವಿಕೆರೆ, ಮಹಿಷಾಸುರ ಪ್ರತಿಮೆಯ ಬಳಿ ಹಾಗೂ ದೇವಸ್ಥಾನದ ವರೆಗೆ ಹೆಚ್ಚಿನ ವಿದ್ಯುತ್ ದೀಪಗಳನ್ನು ಅಳವಡಿಸುವಂತೆ ತಿಳಿಸಿದರು.[ವಿಶ್ವನಾಥ್ ರೊಂದಿಗೆ ನಾನು ಮಾತನಾಡುವುದಿಲ್ಲ: ಸಿದ್ದರಾಮಯ್ಯ]

ಬೆಟ್ಟದಲ್ಲಿ ತುರ್ತು ಆರೋಗ್ಯ ವ್ಯವಸ್ಥೆ

ಬೆಟ್ಟದಲ್ಲಿ ತುರ್ತು ಆರೋಗ್ಯ ವ್ಯವಸ್ಥೆ

ಹೆಚ್ಚಿನ ಪ್ರಮಾಣದಲ್ಲಿ ಭಕ್ತಾದಿಗಳು ಆಗಮಿಸುವುದರಿಂದ ಮುಂಜಾಗ್ರತೆಯಾಗಿ ಭಕ್ತರ ವೈದ್ಯಕೀಯ ಚಿಕಿತ್ಸೆಗಾಗಿ ಬೇಕಾಗುವ ಔಷಧಗಳೊಂದಿಗೆ ಬೆಟ್ಟಕ್ಕೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸುವುದು. ಹೆಲಿಪ್ಯಾಡ್, ನಂದಿ ಮತ್ತು ದೇವಸ್ಥಾನದ ಬಳಿ ಒಂದೊಂದು ಅಂಬ್ಯುಲೆನ್ಸ್ ವ್ಯವಸ್ಥೆ ಮಾಡುವುದು. ಹೊರಗಿನಿಂದ ಸೇವಾರ್ಥದಾರರು ಬೆಟ್ಟದಲ್ಲಿ ಹಂಚಲು ತರುವ ಪ್ರಸಾದವನ್ನು ಪರಿಶೀಲಿಸಿ ನಂತರ ಹಂಚುವುದಕ್ಕೆ ಅನುಮತಿ ನೀಡಬೇಕು ಎಂದು ಹೇಳಿದರು.[ಕಾಂಬೋಡಿಯಾ ಸಂಸತ್ ಚುನಾವಣೆಗೆ ಸಜ್ಜಾಗುತ್ತಿದೆ ಮೈಲಾಕ್ ಶಾಹಿ]

ಉಪಸ್ಥಿತಿ

ಉಪಸ್ಥಿತಿ

ಸಭೆಯಲ್ಲಿ ಮೈಸೂರು ನಗರ ಉಪ ಪೊಲೀಸ್ ಆಯುಕ್ತರಾದ ಶೇಖರ್, ರುದ್ರಮುನಿ, ಮೈಸೂರು ತಾಲ್ಲೂಕು ತಹಶೀಲ್ದಾರ್ ರಮೇಶ್ ಬಾಬು, ಮುಜರಾಯಿ ತಹಶೀಲ್ದಾರ್ ಯತಿರಾಜ್, ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪ್ರಸಾದ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಭಾಗವಹಿಸಿದರು.[ವೇಣುಗೋಪಾಲ್ ಅವರಿಗೆ ವಿಶ್ವನಾಥ್ ಬರೆದ ಪತ್ರದಲ್ಲೇನಿದೆ?]

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Annual fair which takes place every Fridays of June-July month in Chamundi hill will be started from June 30th friday. The district administration is arranging necessary arrangements for the fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more