• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸರಳ ದಸರಾ ಉದ್ಘಾಟನೆಗೆ ಸಿದ್ಧವಾದ ಚಾಮುಂಡಿ ಬೆಟ್ಟ

|

ಮೈಸೂರು, ಅಕ್ಟೋಬರ್ 16: ಮೈಸೂರು ದಸರಾ ಇತಿಹಾಸದಲ್ಲಿಯೇ ಎಲ್ಲರೂ ನೆನಪಿಟ್ಟುಕೊಳ್ಳುವಂತಹ ಪರಿಸ್ಥಿತಿ ಈ ಬಾರಿ ಒದಗಿ ಬಂದಿದೆ. ಸರಳ ಮತ್ತು ಸಾಂಪ್ರದಾಯಿಕ ದಸರಾವನ್ನು ಆಚರಿಸುವುದು ಅನಿವಾರ್ಯವಾಗಿರುವುದರಿಂದ ಮೈಸೂರಿನಲ್ಲಿ ದಸರಾ ರಂಗು ಕಾಣಿಸುತ್ತಿಲ್ಲ.

ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯದಂತೆ ದಸರಾ ಆಚರಣೆಗೆ ಅಕ್ಟೋಬರ್ 17ರಂದು ಚಾಲನೆ ನೀಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ನಾಳೆಯಿಂದ ಮೈಸೂರು ರಾಜವಂಶಸ್ಥರ ಖಾಸಗಿ ದರ್ಬಾರ್ ಆರಂಭ

ಶನಿವಾರ ಬೆಳಿಗ್ಗೆ 7.45ರಿಂದ 8.15ರೊಳಗೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಯ ಅಗ್ರಪೂಜೆಯೊಡನೆ ಹತ್ತು ದಿನಗಳ ದಸರಾ ಕಾರ್ಯಕ್ರಮ ಆರಂಭವಾಗಲಿದ್ದು, ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹಿರಿಯ ಪ್ರಾಧ್ಯಾಪಕ ಮತ್ತು ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವರು, ಗಣ್ಯರ ಉಪಸ್ಥಿತಿಯಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿಗೆ ಅಗ್ರ ಪೂಜೆ ಸಲ್ಲಿಸಿ ಚಾಲನೆ ನೀಡಲಿದ್ದಾರೆ.

ದಸರಾ ಉದ್ಘಾಟನೆಗೆ ಮುನ್ನ ಮುಖ್ಯಮಂತ್ರಿಗಳೊಂದಿಗೆ ಬೆಟ್ಟಕ್ಕೆ ಆಗಮಿಸುವ ಡಾ.ಮಂಜುನಾಥ್ ಅವರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆ ನಂತರ ದೇವಸ್ಥಾನದ ಪಕ್ಕದಲ್ಲೇ ನಿರ್ಮಿಸಿರುವ ವಿಶೇಷ ವೇದಿಕೆಯಲ್ಲಿ, ಬೆಳ್ಳಿರಥದಲ್ಲಿ ಅಲಂಕರಿಸಿರುವ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈದು ದಸರಾ ಆಚರಣೆಗೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಪ್ರಹ್ಲಾದ ಜೋಶಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ.ಕಾರಜೋಳ, ಲಕ್ಷ್ಮಣ ಸಂಗಪ್ಪ ಸವದಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಟಿ.ರವಿ, ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ತಸ್ನೀಂ, ಜಿ.ಪಂ ಅಧ್ಯಕ್ಷೆ ಬಿ.ಸಿ.ಪರಿಮಳ ಶ್ಯಾಂ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಸಚಿವ ಎಸ್.ಟಿ ಸೋಮಶೇಖರ್‌

ಶಾಸಕ ಜಿ.ಟಿ.ದೇವೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಆದರೆ ಇದೇ ವೇಳೆ ದಸರಾ ಉದ್ಘಾಟನೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳಿರುವುದಿಲ್ಲ. ಉದ್ಘಾಟನಾ ಕಾರ್ಯಕ್ರಮವನ್ನು 200 ಜನರಿಗೆ ಮಿತಿಗೊಳಿಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೋವಿಡ್ ಪರೀಕ್ಷಾ ವರದಿಯಲ್ಲಿ ನೆಗೆಟಿವ್ ಫಲಿತಾಂಶ ಇರುವ ವ್ಯಕ್ತಿಗಳಿಗೆ ಮಾತ್ರ ಪ್ರವೇಶಾವಕಾಶ ಕಲ್ಪಿಸಲಾಗಿದೆ. ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದೇ ಸಂದರ್ಭ, ಕೊರೊನಾ ವಿರುದ್ಧ ಹಗಲಿರುಳೆನ್ನದೆ ಅವಿರತವಾಗಿ ಶ್ರಮಿಸಿರುವ ಕೊರೊನಾ ವಾರಿಯರ್ ಗಳಾದ ಎಚ್ ‌ಎಚ್ ‌ಎಂಬಿಜಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಟಿ.ಆರ್.ನವೀನ್, ಜಿಲ್ಲಾ ಆಸ್ಪತ್ರೆಯ ಹಿರಿಯ ಶೂಶ್ರೂಷಾಧಿಕಾರಿ ರುಕ್ಮಿಣಿ, ಪೊಲೀಸ್ ಕಾನ್ ಸ್ಟೆಬಲ್ ಪಿ.ಕುಮಾರ, ಪಾಲಿಕೆ ಪೌರಕಾರ್ಮಿಕೆ ಮರಗಮ್ಮ, ನಂಜನಗೂಡು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ನೂರ್ ಜಾನ್, ಸಮಾಜ ಸೇವಕ ಆಯೂಬ್ ಅಹಮದ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ. ಅತ್ತ ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆಯೇ ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್ ‌ಗೆ ಚಾಲನೆ ದೊರೆಯಲಿದೆ.

English summary
The Dasara 2020 inauguration will be held at Chamundi Hills on October 17 and the countdown to the event has begun
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X