ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿನಿಂದ ಚಾಮುಂಡೇಶ್ವರಿ, ನಂಜನಗೂಡು ದೇಗುಲ ಜನರಿಗೆ ಮುಕ್ತ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಸೆಪ್ಟೆಂಬರ್ 5: ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇಗುಲ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಯಮ ಸಡಿಲಿಕೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ ಚಾಮುಂಡೇಶ್ವರಿ ಮತ್ತು ನಂಜನಗೂಡಿನ ನಂಜುಂಡೇಶ್ವರ ದೇವಾಲಯ ಎರಡು ದೇವಾಲಯಗಳಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಭಾನುವಾರ ಹಾಗೂ ಸರ್ಕಾರಿ ರಜಾ ದಿನಗಳಂದು ಪ್ರವೇಶ ನಿರ್ಬಂಧ ಮುಂದುವರಿಯಲಿದೆ.

 ಆಷಾಢ ಶುಕ್ರವಾರದಲ್ಲಿ ಭಕ್ತರಿಲ್ಲದೆ ಬಣಗುಡುತ್ತಿದೆ ಚಾಮುಂಡಿ ಬೆಟ್ಟ ಆಷಾಢ ಶುಕ್ರವಾರದಲ್ಲಿ ಭಕ್ತರಿಲ್ಲದೆ ಬಣಗುಡುತ್ತಿದೆ ಚಾಮುಂಡಿ ಬೆಟ್ಟ

ಉಳಿದ ದಿನಗಳಂದು ದೇವರ ದರ್ಶನಕ್ಕೆ ಸಮಯ ನಿಗದಿ ಮಾಡಲಾಗಿದೆ. ಚಾಮುಂಡೇಶ್ವರಿ ದರ್ಶನಕ್ಕೆ ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ, ಮಧ್ಯಾಹ್ನ 3.30ರಿಂದ ಸಂಜೆ 6 ಗಂಟೆ, ರಾತ್ರಿ 7.30ರಿಂದ 8 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೆಯೇ ಶುಕ್ರವಾರ ಹಾಗೂ ಶನಿವಾರ ಬೆಳಗ್ಗೆ 7.30ರಿಂದ ಮಧ್ಯಾಹ್ನ 2 ಗಂಟೆ ಮಧ್ಯಾಹ್ನ 3.30ರಿಂದ 6 ಗಂಟೆವರೆಗೆ ಮಾತ್ರ ಪ್ರವೇಶ. ಶುಕ್ರವಾರ ಶನಿವಾರ ರಾತ್ರಿ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

Mysuru: Chamundi Temple And Nanjanagudu Temple Open To Public From Today

ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 6 ಗಂಟೆಯಿಂದ 1 ಗಂಟೆ, ಸಂಜೆ 4 ಗಂಟೆಯಿಂದ ರಾತ್ರಿ 8.30ರವೆಗೆ ದರ್ಶನಕ್ಕೆ ಅವಕಾಶ ನೀಡಲಾಗಿದ್ದು ಈ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ಬಿ ಶರತ್ ಆದೇಶ ಹೊರಡಿಸಿದ್ದಾರೆ.

English summary
Public allowed to Mysuru Chamundeshwari temple and Nanjundeshwara Temple at Nanjangud from today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X