ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು; ಠಾಣೆ ಮೆಟ್ಟಿಲೇರಿದ ಪೊಲೀಸ್ ಅಧಿಕಾರಿಗಳ ಪ್ರೇಮ, ಪ್ರಣಯ!

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಡಿಸೆಂಬರ್ 10 : ಮದುವೆಯಾಗುವುದಾಗಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಪ್ರಕರಣಗಳು ಪೊಲೀಸ್ ಠಾಣೆ ಮೆಟ್ಟಿಲೇರುತ್ತವೆ. ಮೈಸೂರಿನಲ್ಲಿ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ವಿರುದ್ಧವೇ ಇಂತಹ ಆರೋಪ ಕೇಳಿ ಬಂದಿದ್ದು, ದೂರು ನೀಡಿದ ಸಂತ್ರಸ್ತೆ ಸಹ ಪೊಲೀಸ್!

ಕಾನೂನನ್ನು ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ತನ್ನ ಸಹೋದ್ಯೋಗಿಯನ್ನು ವಿವಾಹವಾಗುವುದಾಗಿ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮಹಿಳಾ ಸಬ್‌ಇನ್ಸ್‌ಪೆಕ್ಟರ್ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದು, ಗರ್ಭಪಾತ ಸಹ ಮಾಡಿಸಲಾಗಿದೆ ಎಂದು ಗಂಭೀರ ಆರೋಪ ಮಾಡಲಾಗಿದೆ.

ದರೋಡೆಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಅಮಾನತು ! ದರೋಡೆಗೆ ಸಹಕಾರ ನೀಡಿದ ಪೊಲೀಸ್ ಕಾನ್ಸ್ಟೇಬಲ್ ಅಮಾನತು !

ಮೈಸೂರು ನಗರದ ಎನ್. ಆರ್. ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್‌ ಇನ್ಸ್‌ಪೆಕ್ಟರ್‌ ಆನಂದ್ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ವಿವಿಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಬ್‌ ಇನ್ಸ್‌ ಪೆಕ್ಟರ್ ರಾಧಾ ಆನಂದ್ ವಿರುದ್ಧ ವಿಜಯನಗರ ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ.

ಕರ್ತವ್ಯ ಲೋಪ ಆರೋಪ: ಪಿಎಸ್ಐ ಸಹಿತ 8 ಪೊಲೀಸ್ ಪೇದೆಗಳು ಸಸ್ಪೆಂಡ್ ಕರ್ತವ್ಯ ಲೋಪ ಆರೋಪ: ಪಿಎಸ್ಐ ಸಹಿತ 8 ಪೊಲೀಸ್ ಪೇದೆಗಳು ಸಸ್ಪೆಂಡ್

Cheating Complaint Against Police Sub Inspector

ಲವ್, ಸೆಕ್ಸ್, ದೋಖಾ: ಮೈಸೂರಿನ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಕೆಲಸ ಮಾಡುವಾಗ ಆನಂದ್ ಮತ್ತು ರಾಧಾ ಪರಿಚಯವಾಗಿದೆ. ಪರಿಚಯ ಪ್ರೇಮಕ್ಕೆ ತಿರುಗಿದೆ. ಹೋಟೆಲ್‌, ಪಾರ್ಕ್‌, ಕೆ. ಆರ್‌. ಎಸ್‌ ನಲ್ಲಿ ಜೋಡಿಗಳು ಸುತ್ತಾಡಿದ್ದಾರೆ.

ನಕಲಿ ಪೊಲೀಸ್ ದಾಳಿ ಮಾಡಿ ದರೋಡೆ ಅಸಲಿ ಪೊಲೀಸರು ಅಂದರ್ ನಕಲಿ ಪೊಲೀಸ್ ದಾಳಿ ಮಾಡಿ ದರೋಡೆ ಅಸಲಿ ಪೊಲೀಸರು ಅಂದರ್

ಆನಂದ್ ಮದುವೆಯಾಗುವುದಾಗಿ ನಂಬಿಸಿ ನನ್ನ ಜೊತೆ ದೈಹಿಕ ಸಂಪರ್ಕ ಬೆಳೆಸಿದ್ದಾರೆ. ಇದರಿಂದಾಗಿ ನಾನು ಗರ್ಭಿಣಿಯಾಗಿದ್ದು ಗರ್ಭಪಾತ ಮಾಡಿಸಿದ್ದಾರೆ. ಮದುವೆಯಾಗುವಂತೆ ಒತ್ತಾಯ ಮಾಡಿದಾಗ ಕೊಲೆ ಬೆದರಿಕೆ ಹಾಕಿದ್ದಾರೆ. ನನಗೆ ತಿಳಿಸದೆ ಇನ್ನೊಂದು ಮದುವೆ ಆಗಿದ್ದಾರೆ ಎಂದು ದೂರಿನಲ್ಲಿ ರಾಧಾ ಆರೋಪ ಮಾಡಿದ್ದಾರೆ.

ಇಬ್ಬರು ಅಧಿಕಾರಿಗಳ ಪ್ರೇಮ, ಪ್ರಣಯ, ವಂಚನೆ ಬಗ್ಗೆ ಇಲಾಖೆಯಲ್ಲಿ ಚರ್ಚೆ ಆರಂಭವಾಗಿದೆ. ಇಲಾಖೆಗೆ ಮುಜುಗರ ತಂದಿರುವ ಈ ಪ್ರಕರಣದ ಬಗ್ಗೆ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳಲಿದ್ದಾರೆ? ಕಾದು ನೋಡಬೇಕಿದೆ.

English summary
Cheating complaint against Mysuru N. R. police station sub inspector Anad by VV Puram station sub inspector Radha. Anad cheated her by promise of marriage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X