ಚಿಕನ್ ಅಂಗಡಿ ಸ್ವಚ್ಛ ಮಾಡಿ ಎಂದಿದ್ದಕ್ಕೆ ಹಲ್ಲೆ ಮಾಡಿದ ಮಾಲೀಕ
ಮೈಸೂರು, ಮಾರ್ಚ್ 17: ಹಕ್ಕಿಜ್ವರ ಭೀತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತದ ನಿರ್ದೇಶನದಂತೆ ತಮ್ಮ ಮನೆ ಪಕ್ಕ ಇದ್ದ ಚಿಕನ್ ಅಂಗಡಿಯನ್ನು ಸ್ವಚ್ಛಗೊಳಿಸಿ ಎಂದು ಹೇಳಿದ ಕುಟುಂಬದವರ ಮೇಲೆ ಅಂಗಡಿ ಮಾಲೀಕ ಹಲ್ಲೆ ಮಾಡಿರುವ ಘಟನೆ ನಗರದ ಕುಂಬಾರಕೊಪ್ಪಲಿನಲ್ಲಿ ನಡೆದಿದೆ.
Recommended Video
ಹಕ್ಕಿಜ್ವರ ಭೀತಿಯ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತದ ನಿರ್ದೇಶನದಂತೆ ತಮ್ಮ ಮನೆ ಪಕ್ಕ ಇದ್ದ ಚಿಕನ್ ಅಂಗಡಿಯನ್ನು ಸ್ವಚ್ಛಗೊಳಿಸಿ ಎಂದು ಹೇಳಿದ ಕುಟುಂಬದವರ ಮೇಲೆ ಅಂಗಡಿ ಮಾಲೀಕ ಹಲ್ಲೆ ಮಾಡಿರುವ ಘಟನೆ ನಗರದ ಕುಂಬಾರಕೊಪ್ಪಲಿನಲ್ಲಿ ನಡೆದಿದೆ.
ಈ ಹಿನ್ನೆಲೆಯಲ್ಲಿ ಕುಟುಂಬದವರು ತಮ್ಮ ಮನೆಯ ಪಕ್ಕದಲ್ಲೇ ಇದ್ದ ಚಿಕನ್ ಅಂಗಡಿ ಮಾಲೀಕನಿಗೆ ಈ ಬಗ್ಗೆ ತಿಳಿಸಿದಾಗ, ಆಕ್ರೋಶಗೊಂಡ ಮಾಲೀಕನು ಕುಟುಂಬದವರ ಮೇಲೆ ಹಲ್ಲೆ ಮಾಡಿದ್ದಾನೆ.

ಈ ಸಂದರ್ಭದಲ್ಲಿ ಅಕ್ಕಪಕ್ಕದಲ್ಲಿ ಇದ್ದ ಜನರು ಇಬ್ಬರನ್ನು ಸಮಾಧಾನ ಮಾಡಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಹಲ್ಲೆ ಮಾಡಲು ಬಂದ ಚಿಕನ್ ಅಂಗಡಿಯ ಮಾಲೀಕನ ವಿರುದ್ಧ ಸಿಸಿಟಿವಿ ದೃಶ್ಯಗಳನ್ನು ಆಧಾರವಾಗಿಟ್ಟುಕೊಂಡು ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.












Click it and Unblock the Notifications