ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ವಿವಿಯಿಂದ ವಿದ್ಯಾರ್ಥಿಗಳನ್ನು ತವರಿಗೆ ಕಳಿಸಲು ಚೀನಾ ಮನವಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಮೇ 28: ಕೊರೊನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಮೈಸೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಚೀನಾ ವಿದ್ಯಾರ್ಥಿಗಳನ್ನು ಪರೀಕ್ಷೆ ಮುಗಿಸಿದ ತಕ್ಷಣ ತವರಿಗೆ ಕಳುಹಿಸಿಕೊಡುವಂತೆ ಚೀನಾ ಉನ್ನತ ಶಿಕ್ಷಣ ಇಲಾಖೆಯು ಮೈಸೂರು ವಿವಿ ಉಪಕುಲಪತಿಗಳಿಗೆ ದೂರವಾಣಿ ಮೂಲಕ ಮನವಿ ಮಾಡಿದೆ.

Recommended Video

ಚೀನಾ ಭಾರತ ಗಡಿ ವಿವಾದ ಬಗೆಹರಿಸಲು ಮುಂದಾದ ಅಮೇರಿಕಾ | Oneindia Kannada

ಇದನ್ನು ಖಚಿತಪಡಿಸಿದ ಕುಲಪತಿ ಪ್ರೊ.ಜಿ.ಹೇಮಂತಕುಮಾರ್ ಅವರು, ಪ್ರಸ್ತುತ ವಿವಿಯಲ್ಲಿ 80 ರಿಂದ 90 ಮಂದಿ ಚೀನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರಿಗೆ ಜೂ.10 ರಿಂದ ಜೂನ್ 15 ವರೆಗೆ ಪರೀಕ್ಷೆಗಳು ನಿಗದಿಯಾಗಿತ್ತು. ಆದರೆ ಚೀನಾ ಉನ್ನತ ಶಿಕ್ಷಣ ಇಲಾಖೆ ತನ್ನ ರಾಯಭಾರಿ ಕಚೇರಿಯ ಮೂಲಕ ನನಗೆ ಕರೆ ಮಾಡಿ, ಶೀಘ್ರವೇ ಪರೀಕ್ಷೆ ಮುಗಿಸಿ ನಮ್ಮ ವಿದ್ಯಾರ್ಥಿಗಳನ್ನು ತವರಿಗೆ ಕಳುಹಿಸಿಕೊಡಿ ಎಂದು ಮನವಿ ಮಾಡಿದೆ ಎಂದು ತಿಳಿಸಿದರು. ಅಲ್ಲದೆ ಇತರ ವಿದೇಶಗಳಲ್ಲಿರುವ ಚೀನೀ ವಿದ್ಯಾರ್ಥಿಗಳನ್ನೂ ಕರೆಸಿಕೊಳ್ಳಲಾಗುತ್ತಿದೆ ಎಂದೂ ತಿಳಿಸಿದರು.

ಭಾರತಕ್ಕೆ ಬರದಂತೆ 18 ಚೀನಾ ವಿದ್ಯಾರ್ಥಿಗಳಿಗೆ ಸೂಚಿಸಿದ ಮೈಸೂರು ವಿವಿಭಾರತಕ್ಕೆ ಬರದಂತೆ 18 ಚೀನಾ ವಿದ್ಯಾರ್ಥಿಗಳಿಗೆ ಸೂಚಿಸಿದ ಮೈಸೂರು ವಿವಿ

ಚೀನಾ ಮನವಿಯ ಮೇರೆಗೆ ಪರೀಕ್ಷೆಗಳನ್ನು ಆ ದಿನಾಂಕಕ್ಕಿಂತ ಮುನ್ನವೇ ಅಂದರೆ, ಜೂ.1 ರಿಂದ ಜೂ.6 ರವರೆಗೆ ನಡೆಸಿ, ಚೀನಾ ವಿದ್ಯಾರ್ಥಿಗಳನ್ನು ತವರಿಗೆ ಕಳುಹಿಸಲು ನಿರ್ಧರಿಸಿದ್ದೇವೆ ಎಂದು ತಿಳಿಸಿದರು.

China Higher Education Department Requested Mysore University To Send Back Chinese Students

80 ರಿಂದ 90 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸುವುದರಿಂದ ಸಾರ್ವಜನಿಕ ಅಂತರ ಕಾಯ್ದುಕೊಳ್ಳಲಾಗುತ್ತದೆ. ಪರೀಕ್ಷಾ ಕೊಠಡಿಗೆ ಬರುವ ಮುನ್ನ ವಿದ್ಯಾರ್ಥಿಗಳು ಕಡ್ಡಾಯ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ಪ್ರತಿ ಪರೀಕ್ಷಾ ಕೊಠಡಿಯಲ್ಲೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗುವುದು ಎಂದರು.

English summary
Chinese higher education department has telephoned the Vice Chancellor of Mysuru university and requested to send back the postgraduate students,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X