ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಪೊಲೀಸ್ ಎನ್‌ ಕೌಂಟರ್‌ ತನಿಖೆ ಸಿಐಡಿಗೆ

|
Google Oneindia Kannada News

ಮೈಸೂರು, ಮೇ 18 : ಮೈಸೂರಿನಲ್ಲಿ ನಡೆದ ಪೊಲೀಸ್ ಎನ್‌ ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಗುರುವಾರ ಮಧ್ಯಾಹ್ನ ನಡೆದ ಎನ್‌ ಕೌಂಟರ್‌ನಲ್ಲಿ ಸುಖ್ವಿಂದರ್ ಸಿಂಗ್ ಎಂಬಾತ ಮೃತಪಟ್ಟಿದ್ದ.

ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದ್ದಾರೆ. ನಾಲ್ವರು ಸಿಐಡಿ ಅಧಿಕಾರಿಗಳ ತಂಡ ಮೈಸೂರಿಗೆ ಶುಕ್ರವಾರ ಸಂಜೆಯೇ ತೆರಳಿದ್ದು, ತನಿಖೆಯನ್ನು ಆರಂಭಿಸಿದೆ.

ಮೈಸೂರಲ್ಲಿ ಎನ್‌ ಕೌಂಟರ್, ಸತ್ತ ವ್ಯಕ್ತಿಗೆ ಹಳೆ ನೋಟಿನ ನಂಟುಮೈಸೂರಲ್ಲಿ ಎನ್‌ ಕೌಂಟರ್, ಸತ್ತ ವ್ಯಕ್ತಿಗೆ ಹಳೆ ನೋಟಿನ ನಂಟು

ಪೊಲೀಸ್ ಎನ್‌ ಕೌಂಟರ್‌ನಲ್ಲಿ ಮೃತಪಟ್ಟ ಸುಖ್ವಿಂದರ್ ಸಿಂಗ್ ಕುಟುಂಬದವರು ಪಂಜಾಬ್‌ನ ಫರೀದಾಕೋಟರ್‌ನಿಂದ ಹೊರಟಿದ್ದಾರೆ. ಅವರು ಬಂದ ಬಳಿಕ ಕೆ.ಆರ್.ಆಸ್ಪತ್ರೆಯಲ್ಲಿರುವ ಶವದ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಮೈಸೂರಿನಲ್ಲಿ ಶೂಟೌಟ್ ಪ್ರಕರಣ: ಬೆಳಕಿಗೆ ಬಂತು ಸ್ಫೋಟಕ ಮಾಹಿತಿಮೈಸೂರಿನಲ್ಲಿ ಶೂಟೌಟ್ ಪ್ರಕರಣ: ಬೆಳಕಿಗೆ ಬಂತು ಸ್ಫೋಟಕ ಮಾಹಿತಿ

CID

ಎನ್‌ ಕೌಂಟರ್‌ ವೇಳೆ ಪರಾರಿಯಾಗಿರುವ ಇಬ್ಬರಿಗಾಗಿ ಹುಡುಕಾಟ ನಡೆದಿದೆ. ಹೋಟೆಲ್, ರೆಸಾರ್ಟ್‌ಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಪರಾರಿಯಾದ ಆರೋಪಿಗಳಲ್ಲಿ ಒಬ್ಬ ಬೆಂಗಳೂರಿನ ನಿವಾಸಿ ಎಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ.

ರದ್ದುಪಡಿಸಲಾದ 500 ಮತ್ತು 1000 ರೂ. ನೋಟುಗಳನ್ನು ಬದಲಾವಣೆ ಮಾಡಿಕೊಡುತ್ತಿದ್ದರು ಎಂಬ ಮಾಹಿತಿ ಪಡೆದ ಪೊಲೀಸರು ಅವರನ್ನು ಬಂಧಿಸಲು ಹೋಗಿದ್ದರು. ಈ ವೇಳೆ ಸುಖ್ವಿಂದರ್ ಸಿಂಗ್ ಪೊಲೀಸರ ಮೇಲೆ ಗುಂಡು ಹಾರಿಸಲು ಮುಂದಾಗಿದ್ದ. ಆಗ ಪೊಲೀಸರು ಗುಂಡು ಹಾರಿಸಿದಾಗ ಆತ ಮೃತಪಟ್ಟಿದ್ದ.

ಪೊಲೀಸರಿಗೆ ಮಾಹಿತಿ ನೀಡಿದಾತ ಮತ್ತು ಗುಂಡಿನ ದಾಳಿ ನಡೆಸಿದ ವಿಜಯನಗರ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಬಿ.ಜಿ.ಕುಮಾರ್ ಅವರನ್ನು ಪ್ರತ್ಯೇಕವಾಗಿ ಅಪರಾಧ ಪತ್ತೆದಳದ ಎಸಿಪಿ ಮರಿಯಪ್ಪ ನೇತೃತ್ವದ ತಂಡ ವಿಚಾರಣೆ ನಡೆಸಿದೆ.

English summary
Neelamani Raju Director general (DGP) of Karnataka ordered for CID probe on police encounter at Mysuru city on May 16, 2019. Sukhwind Singh (40) shot dead in encounter.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X