ಮಾಜಿ ಮೇಯರ್ ಸಂದೇಶ ಸ್ವಾಮಿಯ ಅಣಕು ಶವಯಾತ್ರೆ
ಮೈಸೂರು, ಅಕ್ಟೋಬರ್ 27: ಮಾಜಿ ಮೇಯರ್ ಸಂದೇಶಸ್ವಾಮಿ ಅವರು ಖಾಸಗಿ ವಾಹಿನಿಯೊಂದರಲ್ಲಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಕುರಿತು ನೀಡಿದ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿ.ಜೆಡ್.ಜಮೀರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.
ಇನ್ನು ಪ್ರತಿಭಟನಾ ನಿರತರು ಮಾತನಾಡಿ, ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಅವರ ಕುರಿತು ಸಂದೇಶಸ್ವಾಮಿಯವರು ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ. ಇದು ಅವರಿಗೆ ಶೋಭೆ ತರುವುದಿಲ್ಲ. ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಅಣಕು ಶವಯಾತ್ರೆ ನಡೆಸಿದರು.

ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಪ್ರತಿಭಟನೆ
ಬಹು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಮೈಸೂರು ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಮಾತನಾಡಿ ಕಾರ್ಮಿಕರ ಹಲವಾರು ಬೇಡಿಕೆಗಳ ಬಗ್ಗೆ ರಾಜ್ಯ ಸರ್ಕಾರ ತುರ್ತಾಗಿ ಗಮನ ಹರಿಸಬೇಕು. ಎಲ್ಲಾ ಅನುಸೂಚಿತ ಉದ್ಯೋಗಿಗಳಿಗೂ ಸಮಾನ ಕನಿಷ್ಟ ವೇತನದ ಒಂದೇ ಅಧಿಸೂಚನೆಯನ್ನು ರೂ. 18000 ಸಮಾನ ಕನಿಷ್ಟ ವೇತನ ನಿಗದಿಗೊಳಿಸಿ ಹೊರಡಿಸಬೇಕು.

ಗುತ್ತಿಗೆ ಮುಂತಾದ ಖಾಯಮೇತರ ಕಾರ್ಮಿಕರ ಖಾಯಂಗೆ ಅಸ್ಸಾಂ ಮತ್ತು ತಮಿಳುನಾಡು ಮಾದರಿಯಲ್ಲಿ ಖಾಯಂ ಸ್ಥಾನಮಾನ ಕಲ್ಪಿಸುವ ಶಾಸನ ರೂಪಿಸಿ ಜಾರಿಗೊಳಿಸಬೇಕು. ಮಹಾರಾಷ್ಟ್ರ ಮಾದರಿಯಲ್ಲಿ ಕಾರ್ಮಿಕ ಸಂಘಗಳ ಕಡ್ಡಾಯ ಶಾಸನಾತ್ಮಕ ಮಾನ್ಯತೆಗೆ ಶಾಸನ ರೂಪಿಸಿ ಜಾರಿಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.












Click it and Unblock the Notifications