• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಾಪಸ್

|
Google Oneindia Kannada News

ಮೈಸೂರು, ಜೂನ್ 5: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಿರುಕುಳ ಆರೋಪ ಮಾಡಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ಹಿಂಪಡೆದಿದ್ದಾರೆ.

ಉಸ್ತುವಾರಿ ಸಚಿವರ ವೈಫಲ್ಯವೇ, ರೋಹಿಣಿ vs ಶಿಲ್ಪಾನಾಗ್ ಜಟಾಪಟಿಗೆ ಕಾರಣ!? ಉಸ್ತುವಾರಿ ಸಚಿವರ ವೈಫಲ್ಯವೇ, ರೋಹಿಣಿ vs ಶಿಲ್ಪಾನಾಗ್ ಜಟಾಪಟಿಗೆ ಕಾರಣ!?

ಕೋವಿಡ್ ನಿಯಂತ್ರಣ ವಿಚಾರದಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡುವಿನ ಜಟಾಪಟಿ ರಾಜ್ಯಮಟ್ಟದಲ್ಲಿ ಬಹಳ ಚರ್ಚೆಯಾಗುತ್ತಿತ್ತು. ಮನಸ್ಸಿಗೆ ಬೇಸರವಾಗಿ ಆಯುಕ್ತೆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಶಿಲ್ಪಾನಾಗ್ ತಿಳಿಸಿದ್ದರು.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೇಲೆ ದೌರ್ಜನ್ಯ, ಕಿರುಕುಳ ಆರೋಪ ಮಾಡಿ ರಾಜಿನಾಮೆ ನೀಡಿದ್ದ ಶಿಲ್ಪಾನಾಗ್, ಇದೀಗ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಉಪಸ್ಥಿತಿಯಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸೋಮವಾರದಿಂದ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಹೇಳಲಾಗಿದೆ.

ಶುಕ್ರವಾರದಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸಹ ಮೈಸೂರಿಗೆ ಭೇಟಿ ನೀಡಿ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ನಡುವಿನ ಜಟಾಪಟಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದರು.

ಇನ್ನು ಇದೇ ವೇಳೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯನ್ನು ವರ್ಗಾವಣೆ ಮಾಡುವ ವಿಚಾರವಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಲಾಗಿದೆ. ಆದರೆ ಕೋವಿಡ್ ಪರಿಸ್ಥಿತಿಯಲ್ಲಿ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡುವುದು ಅಷ್ಟು ಸುಲಭವಲ್ಲ ಎನ್ನಲಾಗುತ್ತಿದೆ.

English summary
Mysuru City Corporation Commissioner IAS officer Shilpa Nag Withdraws her Resignation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X