ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಜಾರಿಗೆ ಬರಲಿಗೆ ಪೇ ಅಂಡ್ ಪಾರ್ಕ್

|
Google Oneindia Kannada News

ಮೈಸೂರು, ಮೇ 6 : ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದಲ್ಲಿ ಸದ್ದು ಮಾಡಿದ್ದ ಪೇ ಅಂಡ್ ಪಾರ್ಕ್ ವ್ಯವಸ್ಥೆ ಸಾಂಸ್ಕೃತಿಕ ನಗರ ಮೈಸೂರಿಗೂ ಕಾಲಿಡುವ ಸಾಧ್ಯತೆ ಇದೆ. ನಗರ ಪೊಲೀಸ್ ಆಯುಕ್ತ ಎಂ.ಎ.ಸಲೀಂ ನಗರದಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದ ಹೇಳಿದ್ದಾರೆ.

ಸೋಮವಾರ ಮೈಸೂರಿನಲ್ಲಿ ಮಾತನಾಡಿದ ಸಲೀಂ ರಾಜ್ಯ ಸರ್ಕಾರ ಪ್ರಮುಖ ನಗರಗಳಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸುತ್ತಿದ್ದು. ಆ ನಗರಗಳಲ್ಲಿ ಮೈಸೂರು ಸೇರಿದೆ. ಆದ್ದರಿಂದ ಶೀಘ್ರದಲ್ಲೇ ನಗರದಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

M A Saleem

ಇತ್ತೀಚಿನ ದಿನಗಳಲ್ಲಿ ಮೈಸೂರು ನಗರದಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ. ಪೇ ಅಂಡ್ ಪಾರ್ಕ್ ವ್ಯವಸ್ಥೆ ಜಾರಿಗೆ ತಂದರೆ ನಗರದಲ್ಲಿ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸುವುದು ಕಡಿಮೆಯಾಗುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಸ್ವತಃ ಆಯುಕ್ತರೇ ಪೇ ಅಂಡ್ ಪಾರ್ಕ್ ಬಗ್ಗೆ ಹೇಳಿರುವುದರಿಂದ ಮೈಸೂರಿನ ಜನರು ಪಾರ್ಕಿಂಗ್ ಶುಲ್ಕ ಕಟ್ಟಲು ಸಿದ್ಧವಾಗಬೇಕಾಗಿದೆ. [ಬೆಂಗಳೂರು ಪಾರ್ಕಿಂಗ್ ವ್ಯವಸ್ಥೆ ಸರಿಪಡಿಸಿ]

ನಗರದ ಜನರು ಸೈಕಲ್ ಉಪಯೋಗಿಸುವುದಿಲ್ಲ. ಎಲ್ಲರೂ ಕಾರು ಅಥವ ಬೈಕ್ ಕೊಂಡುಕೊಳ್ಳುತ್ತಾರೆ. ಸಾರ್ವಜನಿಕ ಸಾರಿಗೆಗಳನ್ನು ಉಪಯೋಗಿಸುವುದಿಲ್ಲ, ಆದ್ದರಿಂದ ನಗರಗಳಲ್ಲಿ ಸಂಚಾರದ ಸಮಸ್ಯೆ ಉಂಟಾಗುತ್ತಿದೆ ಎಂದು ಸಲೀಂ ವಿಶ್ಲೇಷಿಸಿದರು.

ಕೆಲವು ತಿಂಗಳ ಹಿಂದೆ ಬೆಂಗಳೂರಿನಲ್ಲಿ ಪೇ ಅಂಡ್ ಪಾರ್ಕ್ ವ್ಯವಸ್ಥೆಯನ್ನು ಜಾರಿಗೆ ತರಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿದ್ಧತೆ ನಡೆಸಿತ್ತು. ಆದರೆ, ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯ ಪ್ರಸ್ತಾವನೆಯನ್ನು ಕೈಬಿಡಲಾಗಿತ್ತು.

English summary
The government is planning to implement pay and park policy across State. It will definitely put a break to haphazard parking in the city, said MA Saleem Mysore Police Commissioner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X