ಗ್ರಾಮ ದೇವತೆ ಹಬ್ಬದಲ್ಲಿ ಡ್ಯಾನ್ಸ್ ವಿಚಾರಕ್ಕೆ ಗಲಾಟೆ; ಹಲವರಿಗೆ ಗಾಯ

ಮೈಸೂರು, ಮಾರ್ಚ್ 04: ಗ್ರಾಮ ದೇವತೆ ಹಬ್ಬದ ಆಚರಣೆ ವೇಳೆ ಗುಂಪು ಘರ್ಷಣೆ ನಡೆದು ಹಲವರು ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೈಸೂರು ತಾಲೂಕಿನ ಮೆಲ್ಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮ ದೇವತೆ ಹಬ್ಬದ ಸಂದರ್ಭ ನೃತ್ಯ ಮಾಡುವಾಗ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿದ್ದು, ಮಾತಿಗೆ ಮಾತು ಬೆಳೆದು ಹೊಡೆದಾಟ ನಡೆದಿದೆ.

ನೃತ್ಯ ಮಾಡುವ ವಿಚಾರಕ್ಕೆ ಆರಂಭವಾದ ಜಗಳ ವಿಕೋಪಕ್ಕೆ ಹೋಗುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಈ ವೇಳೆ ಯುವಕರು ಮಚ್ಚು, ಲಾಂಗ್, ಮಾರಕಾಸ್ತ್ರ ಹಿಡಿದು ಹೊಡೆದಾಡಿಕೊಂಡಿದ್ದಾರೆ.

Clash Between Two Groups During Village Festival

ಹಬ್ಬದ ಸಂಭ್ರಮ ಮನೆ ಮಾಡಿದ್ದ ಗ್ರಾಮದಲ್ಲಿ ಈಗ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಘಟನೆ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+