Rohini Sindhuri: ರೋಹಿಣಿ ಸಿಂಧೂರಿ ಡಿಸಿ ಆಗಿದ್ದಾಗ ಬಟ್ಟೆ ಬ್ಯಾಗ್ ಖರೀದಿ ಹಗರಣ: ತನಿಖೆಗೆ ಆದೇಶ
ಮೈಸೂರು, ಮಾರ್ಚ್ 23: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣವನ್ನು ತನಿಖೆಗೆ ಆದೇಶಿಸಿ ಕರ್ನಾಟಕ ಸರ್ಕಾರ ಸೂಚನೆ ಹೊರಡಿಸಿದೆ.
ಮೈಸೂರಿನ ಕೆ.ಆರ್. ನಗರ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಈ ಹಗರಣವನ್ನು ಬಯಲಿಗೆ ಎಳೆದಿದ್ದರು. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್ಗಳನ್ನು ಖರೀದಿಸಲಾಗಿತ್ತು ಎಂದು ಸಾ.ರಾ. ಮಹೇಶ್ ಆರೋಪಿಸಿದ್ದರು.
ಚಿಲ್ಲರೆ ಮಾರುಕಟ್ಟೆಯಲ್ಲಿ 10 ರೂ.ನಿಂದ 13 ರೂ.ಗೆ ಸಿಗುವ ಬ್ಯಾಗ್ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ. ಮಹೇಶ್ ಆರೋಪ ಮಾಡಿದ್ದರು.

ಐಎಎಸ್ ಅಧಿಕಾರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ಅವರು 14.71 ಲಕ್ಷ ಬಟ್ಟೆ ಬ್ಯಾಗ್ಗಳನ್ನು 14 ಕೋಟಿ ರೂ. ಕೊಟ್ಟು ಖರೀದಿಸಿದ್ದರು. ಕೈಮಗ್ಗ ನಿಗಮದ ಬದಲು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡುವ ಮೂಲಕ ರೋಹಿಣಿ ಕಿಕ್ಬ್ಯಾಕ್ ಪಡೆದಿದ್ದಾರೆ. ಈ ಹಗರಣದಲ್ಲಿ 6.18 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ದೂರಿದ್ದರು.
ಅಧಿಕಾರಿಗಳು ಲೂಟಿ ಹೊಡೆಯುತ್ತಿದ್ದರೂ ಸರ್ಕಾರದ ಮುಖ್ಯಕಾರ್ಯದರ್ಶಿ ಏನು ಮಾಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ರೋಹಿಣಿ ಸಿಂಧೂರಿ ಎರಡು ತಿಂಗಳು ಮೈಸೂರಿನಲ್ಲೇ ಮುಂದುವರಿದಿದ್ದರೆ ಹಣವೂ ಮಂಜೂರಾಗಿರುತ್ತಿತ್ತು ಎಂದು ಮೈಸೂರಿನಲ್ಲಿ ಕಳೆದ ಸೆಪ್ಟೆಂಬರ್ 3ರಂದು ಮಾಧ್ಯಮಗೋಷ್ಠಿ ನಡೆಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ. ಮಹೇಶ್ ಗಂಭೀರ ಆರೋಪ ಮಾಡಿದ್ದರು.
"ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಮೊಟಕುಗೊಳಿಸಿ, ಏಕಪಕ್ಷೀಯವಾಗಿ ಬ್ಯಾಗ್ ಖರೀದಿಗೆ ನಿರ್ಧರಿಸಿದ್ದು, ನಿರಂಕುಶ ಪ್ರಭುತ್ವದ ಸಂಕೇತ. ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಗಮನಕ್ಕೂ ತರುವೆ. ಸಿಂಧೂರಿಯವರನ್ನು ಸೇವೆಯಿಂದ ವಜಾ ಮಾಡದಿದ್ದರೆ ಮುಖ್ಯ ಕಾರ್ಯದರ್ಶಿ ಕಚೇರಿ ಮುಂದೆ ಆಮರಣಾಂತ ಧರಣಿ ನಡೆಸುವೆ,'' ಎಂದು ಸವಾಲು ಹಾಕಿದ್ದರು.
ಈ ಆರೋಪಕ್ಕೆ ಸ್ಪಷ್ಟನೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, "ಶಾಸಕರ ಆರೋಪಗಳು ಆಧಾರರಹಿತ. ಬ್ಯಾಗ್ ಪೂರೈಕೆಯ ಗುತ್ತಿಗೆಯನ್ನು ನಿಯಮಾನುಸಾರ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ನಿಗಮವೇ ದರ ನಿಗದಿ ಮಾಡಿದ್ದು, ನನ್ನ ಪಾತ್ರ ಇಲ್ಲ. ಪ್ರಾದೇಶಿಕ ಜವಳಿ ಪ್ರಯೋಗಾಲಯ ಸಮಿತಿಯು ಬ್ಯಾಗ್‌ಗಳ ಗುಣಮಟ್ಟ ದೃಢೀಕರಿಸಿತ್ತು. ನಾನು ಜಿಲ್ಲಾಧಿಕಾರಿಯಾಗಿದ್ದಾಗ ಒಂದು ಪೈಸೆಯನ್ನೂ ನಿಗಮಕ್ಕೆ ನೀಡಿಲ್ಲ. ಈಗ 9.59 ಲಕ್ಷ ರೂ. ಮಾತ್ರ ನಿಗಮಕ್ಕೆ ಪಾವತಿಯಾಗಿದೆ,'' ಎಂದು ಹೇಳಿದ್ದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications