ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Rohini Sindhuri: ರೋಹಿಣಿ ಸಿಂಧೂರಿ ಡಿಸಿ ಆಗಿದ್ದಾಗ ಬಟ್ಟೆ ಬ್ಯಾಗ್ ಖರೀದಿ ಹಗರಣ: ತನಿಖೆಗೆ ಆದೇಶ

|
Google Oneindia Kannada News

ಮೈಸೂರು, ಮಾರ್ಚ್ 23: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣವನ್ನು ತನಿಖೆಗೆ ಆದೇಶಿಸಿ ಕರ್ನಾಟಕ ಸರ್ಕಾರ ಸೂಚನೆ ಹೊರಡಿಸಿದೆ.

ಮೈಸೂರಿನ ಕೆ.ಆರ್. ನಗರ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಈ ಹಗರಣವನ್ನು ಬಯಲಿಗೆ ಎಳೆದಿದ್ದರು. ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್​ಗಳನ್ನು ಖರೀದಿಸಲಾಗಿತ್ತು ಎಂದು ಸಾ.ರಾ. ಮಹೇಶ್ ಆರೋಪಿಸಿದ್ದರು.

ಮೈಸೂರು ನೂತನ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಆರೋಪಮೈಸೂರು ನೂತನ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಸಾರಾ ಮಹೇಶ್ ಆರೋಪ

ಚಿಲ್ಲರೆ ಮಾರುಕಟ್ಟೆಯಲ್ಲಿ 10 ರೂ.ನಿಂದ 13 ರೂ.ಗೆ ಸಿಗುವ ಬ್ಯಾಗ್​ಗಳನ್ನು ಜಿಲ್ಲಾಧಿಕಾರಿ 52 ರೂ. ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ. ಮಹೇಶ್ ಆರೋಪ ಮಾಡಿದ್ದರು.

Cloth Bag Scam: Karnataka Govt Order Probe Against Mysuru Former DC Rohini Sindhuri

ಐಎಎಸ್ ಅಧಿಕಾರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ಅವರು 14.71 ಲಕ್ಷ ಬಟ್ಟೆ ಬ್ಯಾಗ್​ಗಳನ್ನು 14 ಕೋಟಿ ರೂ. ಕೊಟ್ಟು ಖರೀದಿಸಿದ್ದರು. ಕೈಮಗ್ಗ ನಿಗಮದ ಬದಲು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡುವ ಮೂಲಕ ರೋಹಿಣಿ ಕಿಕ್​ಬ್ಯಾಕ್ ಪಡೆದಿದ್ದಾರೆ. ಈ ಹಗರಣದಲ್ಲಿ 6.18 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ದೂರಿದ್ದರು.

ಅಧಿಕಾರಿಗಳು ಲೂಟಿ ಹೊಡೆಯುತ್ತಿದ್ದರೂ ಸರ್ಕಾರದ ಮುಖ್ಯಕಾರ್ಯದರ್ಶಿ ಏನು ಮಾಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ರೋಹಿಣಿ ಸಿಂಧೂರಿ ಎರಡು ತಿಂಗಳು ಮೈಸೂರಿನಲ್ಲೇ ಮುಂದುವರಿದಿದ್ದರೆ ಹಣವೂ ಮಂಜೂರಾಗಿರುತ್ತಿತ್ತು ಎಂದು ಮೈಸೂರಿನಲ್ಲಿ ಕಳೆದ ಸೆಪ್ಟೆಂಬರ್ 3ರಂದು ಮಾಧ್ಯಮಗೋಷ್ಠಿ ನಡೆಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ. ಮಹೇಶ್ ಗಂಭೀರ ಆರೋಪ ಮಾಡಿದ್ದರು.

ಪಟ್ಟು ಬಿಡದ ಸಾ.ರಾ.ಮಹೇಶ್: ಸಂಕಷ್ಟದಲ್ಲಿ ರೋಹಿಣಿ ಸಿಂಧೂರಿಪಟ್ಟು ಬಿಡದ ಸಾ.ರಾ.ಮಹೇಶ್: ಸಂಕಷ್ಟದಲ್ಲಿ ರೋಹಿಣಿ ಸಿಂಧೂರಿ

"ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಮೊಟಕುಗೊಳಿಸಿ, ಏಕಪಕ್ಷೀಯವಾಗಿ ಬ್ಯಾಗ್ ಖರೀದಿಗೆ ನಿರ್ಧರಿಸಿದ್ದು, ನಿರಂಕುಶ ಪ್ರಭುತ್ವದ ಸಂಕೇತ. ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಗಮನಕ್ಕೂ ತರುವೆ. ಸಿಂಧೂರಿಯವರನ್ನು ಸೇವೆಯಿಂದ ವಜಾ ಮಾಡದಿದ್ದರೆ ಮುಖ್ಯ ಕಾರ್ಯದರ್ಶಿ ಕಚೇರಿ ಮುಂದೆ ಆಮರಣಾಂತ ಧರಣಿ ನಡೆಸುವೆ,'' ಎಂದು ಸವಾಲು ಹಾಕಿದ್ದರು.

ಈ ಆರೋಪಕ್ಕೆ ಸ್ಪಷ್ಟನೆ ನೀಡಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, "ಶಾಸಕರ ಆರೋಪಗಳು ಆಧಾರರಹಿತ. ಬ್ಯಾಗ್‌ ಪೂರೈಕೆಯ ಗುತ್ತಿಗೆಯನ್ನು ನಿಯಮಾನುಸಾರ ಕೈಮಗ್ಗ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿತ್ತು. ನಿಗಮವೇ ದರ ನಿಗದಿ ಮಾಡಿದ್ದು, ನನ್ನ ಪಾತ್ರ ಇಲ್ಲ. ಪ್ರಾದೇಶಿಕ ಜವಳಿ ಪ್ರಯೋಗಾಲಯ ಸಮಿತಿಯು ಬ್ಯಾಗ್‌ಗಳ ಗುಣಮಟ್ಟ ದೃಢೀಕರಿಸಿತ್ತು. ನಾನು ಜಿಲ್ಲಾಧಿಕಾರಿಯಾಗಿದ್ದಾಗ ಒಂದು ಪೈಸೆಯನ್ನೂ ನಿಗಮಕ್ಕೆ ನೀಡಿಲ್ಲ. ಈಗ 9.59 ಲಕ್ಷ ರೂ. ಮಾತ್ರ ನಿಗಮಕ್ಕೆ ಪಾವತಿಯಾಗಿದೆ,'' ಎಂದು ಹೇಳಿದ್ದರು.

English summary
Cloth Bag Scam: Karnataka Govt Order Probe Against Mysuru Former DC Rohini Sindhuri. KR Nagar MLA Sa Ra Mahesh accuses Rohini Sindhuri of cloth bag scam when she is servicing as Msuru DC.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X