ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಇಂದಿನಿಂದ ಮೋಡ ಬಿತ್ತನೆ ಕಾರ್ಯ ಆರಂಭ

|
Google Oneindia Kannada News

ಮೈಸೂರು, ಜುಲೈ 26: ಮೈಸೂರಿನಲ್ಲಿ ಗುರುವಾರದಿಂದ ಮೋಡ ಬಿತ್ತನೆ ಕಾರ್ಯ ಆರಂಭಗೊಂಡಿದೆ. ಮೋಡ ಬಿತ್ತನೆ ಯೋಜನೆಗಾಗಿ ಈಗಾಗಲೇ ಬೆಂಗಳೂರಿನಿಂದ ಒಂದು ವಿಮಾನ ಮೈಸೂರಿಗೆ ಬಂದಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ವತಿಯಿಂದ ಈ ಭಾಗದಲ್ಲಿ 90 ದಿನಗಳ ಕಾಲ ಮೋಡ ಬಿತ್ತನೆ ಕಾರ್ಯ ಮುಂದುವರಿಯಲಿದೆ.

 ಜುಲೈ 2ನೇ ವಾರದಿಂದ ಮೋಡ ಬಿತ್ತನೆ : ಕೃಷ್ಣ ಬೈರೇಗೌಡ ಜುಲೈ 2ನೇ ವಾರದಿಂದ ಮೋಡ ಬಿತ್ತನೆ : ಕೃಷ್ಣ ಬೈರೇಗೌಡ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಬೈರೇಗೌಡ ಅವರು 2019-20, 2020-21ನೇ ವರ್ಷವನ್ನು ಗಮನದಲ್ಲಿಟ್ಟುಕೊಂಡು ವೈಮಾನಿಕ ಮೋಡ ಬಿತ್ತನೆ ಕೈಗೊಂಡಿದ್ದರು. ಎರಡು ವರ್ಷಗಳ ಗುತ್ತಿಗೆಯನ್ನು ಖಾಸಗಿ ಸಂಸ್ಥೆಗೆ ನೀಡಲಾಗಿತ್ತು. ಅಲ್ಲದೇ ಜೂನ್ ಅಂತ್ಯದಲ್ಲಿ ಬಿತ್ತನೆ ಮಾಡಲು ತೀರ್ಮಾನಿಸಿದ್ದು, ಈಗಾಗಲೇ ತಡವಾಗಿದೆ. ಹಾಗಾಗಿ ಇಂದಿನಿಂದ ಎರಡು ವಿಮಾನಗಳನ್ನು ಬಳಸಿ ಮೈಸೂರು ಹಾಗೂ ಹುಬ್ಬಳ್ಳಿ ನಗರವನ್ನು ಕೇಂದ್ರವಾಗಿಟ್ಟುಕೊಂಡು ವೈಮಾನಿಕ ಬಿತ್ತನೆ ಕಾರ್ಯವನ್ನು ಆರಂಭಿಸಲಾಗಿದೆ.

Cloud Seeding Started in Mysuru

ಎರಡು ವರ್ಷಗಳ ವೈಮಾನಿಕ ಮೋಡ ಬಿತ್ತನೆಗೆ ರಾಜ್ಯ ಸರ್ಕಾರ 45 ಕೋಟಿ ರೂಪಾಯಿ ಅನುದಾನ ನೀಡಿದೆ. ಬೆಂಗಳೂರು ಎಚ್ಎಎಲ್ ವಿಮಾನ ನಿಲ್ದಾಣದಿಂದ ಹಾರಿದ ಎರಡು ವಿಮಾನಗಳು ಪ್ರಾಯೋಗಿಕವಾಗಿ ಮೋಡ ಬಿತ್ತನೆ ಮಾಡಿ ಪರಿಶೀಲನೆ ನಡೆಸಿವೆ. ಒಂದು ವಿಮಾನ ಕನಕಪುರದ ಕಡೆಗೆ ಹಾಗೂ ಮತ್ತೊಂದು ಕೋಲಾರದ ಕಡೆಗೆ ಮೋಡ ಬಿತ್ತನೆ ಕಾರ್ಯವನ್ನು ಯಶಸ್ವಿಯಾಗಿ ಮಾಡಿವೆ. 2017ರಲ್ಲಿ ಮೋಡ ಬಿತ್ತನೆ ಮಾಡಿದಾಗ ಸಾಧಾರಣ ಮಳೆ ಶೇ.28 ಹೆಚ್ಚಾಗಿತ್ತು. ಮೈಸೂರು ಜಿಲ್ಲೆಯಲ್ಲಿ ವೈಮಾನಿಕ ಮೋಡ ಬಿತ್ತನೆಯ ನಂತರ ಉತ್ತಮ ಮಳೆಯಾಗುತ್ತದೆ ಎಂಬ ನಿರೀಕ್ಷೆ ಇರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

English summary
Cloud seeding has started in Mysore from Thursday. A flight from Bangalore arrived in Mysore for the cloud seeding project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X