ಆನ್ ಲೈನ್ ನಲ್ಲಿ ಮೈಸೂರಿನ ನೂತನ ಕೋವಿಡ್ ಪರೀಕ್ಷಾ ಕೇಂದ್ರ ಉದ್ಘಾಟಿಸಿದ ಸಿಎಂ
ಮೈಸೂರು, ಜೂನ್ 29: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಆನ್ ಲೈನ್ ಮೂಲಕ ಮೈಸೂರಿನ ಕೋವಿಡ್ ಪರೀಕ್ಷಾ ಕೇಂದ್ರವನ್ನು ಉದ್ಘಾಟನೆ ಮಾಡಿದರು.
Recommended Video
ಜೆಎಸ್ ಎಸ್ ವೈದ್ಯಕೀಯ ಕಾಲೇಜಿನಿಂದ ನೂತನವಾಗಿ ಕೋವಿಡ್ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು. ಆನ್ ಲೈನ್ ಮೂಲಕವೇ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ ಸೇರಿ ಮತ್ತಿತರರು ಭಾಗಿಯಾಗಿದ್ದರು.
ಅತ್ಯಾಧುನಿಕ ಯಂತ್ರೋಪಕರಣಗಳನ್ನು ಈ ಪರೀಕ್ಷಾ ಕೇಂದ್ರ ಎನ್.ಎ.ಬಿ.ಎಲ್ ಮತ್ತು ಐ.ಸಿ.ಎಆರ್ ಗಳ ಅನುಮೋದನೆಯನ್ನು ಪಡೆದುಕೊಂಡಿದೆ. ಜ್ವರ, ಕೆಮ್ಮು, ನೆಗಡಿ ಇತ್ಯಾದಿ ರೋಗದ ಲಕ್ಷಣಗಳು ಕಂಡುಬಂದರೆ ಪರೀಕ್ಷೆ ಮಾಡಿಸಿಕೊಳ್ಳಲು ಸಹಕಾರಿಯಾಗಲಿದೆ. ಮೈಸೂರಿನಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಯೋಗಾಲಯದ ಅವಶ್ಯಕತೆಯೂ ಹೆಚ್ಚಿರುವುದರಿಂದ ಈ ನೂತನ ಪ್ರಯೋಗಾಲಯವನ್ನು ತೆರೆಯಲಾಗಿದೆ.

ಜೆಎಸ್ಎಸ್ ಆಸ್ಪತ್ರೆಯಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ನಿರ್ಮಾಣವಾಗಿದೆ.












Click it and Unblock the Notifications