CM Siddaramaiah: ಬಿಜೆಪಿ-ಜೆಡಿಎಸ್‌ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

ಮುಡಾ ಹಗರಣದಲ್ಲಿ ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ಮಾಡುತ್ತಿರುವ ಪಾದಯಾತ್ರೆಗೆ ತಿರುಗೇಟು ಕೊಡಲು ಇಂದು ಮೈಸೂರಿನಲ್ಲಿ ಬೃಹತ್ ಜನಾಂದೋಲನ ಸಮಾವೇಶ ನಡೆಸಲಾಯಿತು. ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅಕ್ಷರಶಃ ಅಬ್ಬರಿಸಿದರು. ವಿಪಕ್ಷ ನಾಯಕರ ಜನ್ಮ ಜಾಲಾಡಿದ ಅವರು, ನನ್ನ ರಾಜೀನಾಮೆ ಕೇಳಲು ನಿಮಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನೆ ಮಾಡಿದರು.

ಮೈಸೂರಿನ ಮಹಾರಾಜ ಕಾಲೇಜು ಆವರಣದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗ ನಾಯಕರು ಸಿಎಂ ಆಗಿರುವುದು ಮನುವಾದಿಗಳಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ, ಅದಕ್ಕೆ ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ಪಾದಯಾತ್ರೆಯ ನಾಟಕವಾಡುತ್ತಿದ್ದಾರೆ. ನಾನು ಇದಕ್ಕೆಲ್ಲಾ ಜಗ್ಗುವುದೂ ಇಲ್ಲ ಬಗ್ಗುವುದೂ ಇಲ್ಲ ಎಂದರು.

CM Siddaramaiah Expresses Outrage Against BJP and JDS Leaders at Mysuru Event

ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸಿಕೊಳ್ಳಲು ಇವರಿಗೆ ಆಗುತ್ತಿಲ್ಲ ಎಂದರು.

ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ

ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರು ನನ್ನ ಶವದ ಮೇಲೆ ಅಧಿಕಾರ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟುಹೋಗುತ್ತೇನೆ ಎಂದವರು ಈಗ ಅವರೇ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ ಎಂದರು.

ನಾನು ಸೊನ್ನೆಯಿಂದ ರಾಜಕೀಯ ಆರಂಭಿಸಿದವನು. 1983 ರಲ್ಲಿ ಮೊದಲ ಚುನಾವಣೆಗೆ ಡೆಪಾಸಿಟ್ ಮಾಡಲು ನನ್ನ ಬಳಿ ಹಣ ಇರಲಿಲ್ಲ. ನನ್ನ ಕಚೇರಿ ಕ್ಲರ್ಕ್ ಆನಂದ 250 ರೂ. ಡೆಪಾಸಿಟ್ ಕಟ್ಟಿದರು. ಜನರೇ ಹಣ ಕೊಟ್ಟು ಚುನಾವಣೆ ಗೆಲ್ಲಿಸಿದರು. ಆ ಚುನಾವಣೆಯಲ್ಲಿ ಜನರೇ 63 ಸಾವಿರ ರೂ. ಖರ್ಚು ಮಾಡಿ ನನ್ನನ್ನು ಆರಿಸಿದರು ಎಂದರು.

ಯಡಿಯೂರಪ್ಪ ಅವರು ಈ ವಯಸ್ಸಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಪೋಕ್ಸೋ ಕೇಸ್‌ನಲ್ಲಿ ಇದ್ದಾರೆ. ನಾಚಿಕೆ ಆಗಲ್ವಾ? ಬಿಜೆಪಿ, ಜೆಡಿಎಸ್ ಅಧಿಕಾರದಲ್ಲಿ ಇದ್ದಾಗ ನಡೆಸಿದ್ದು ಒಂದಾ, ಎರಡಾ ಹಗರಣಗಳು. ಸುಪ್ರೀಕೋರ್ಟ್ ನಲ್ಲಿ ತಮ್ಮ ಹಗರಣಗಳಿಗೆ ತಡೆಯಾಜ್ಞೆ ತಂದಿದ್ದಾರೆ. ಇವರು ನನ್ನ ರಾಜೀನಾಮೆ ಕೇಳುತ್ತಿದ್ದಾರೆ. ಇವರಿಗೆ ನಾಚಿಕೆ ಆಗಲ್ವಾ ಎಂದರು.

ಈಗ ರಾಜಭವನವನ್ನು ದುರುಪಯೋಗಪಡಿಸಿಕೊಂಡು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಷಡ್ಯಂತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದ್ದಾರೆ. ಕುಮಾರಸ್ವಾಮಿ ವಿರುದ್ಧ, ನಿರಾಣಿ ವಿರುದ್ಧ, ಶಶಿಕಲಾ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೂ ರಾಜಭವನದಿಂದ ಇದುವರೆಗೂ ನೋಟಿಸ್ ಹೋಗಿಲ್ಲ. ಆದರೆ ನನಗೆ ಮಾತ್ರ ನೋಟಿಸ್ ಬಂದಿದೆ. ಇದು ದ್ರೋಹ ಅಲ್ಲವೇ ಎಂದು ಪ್ರಶ್ನಿಸಿದರು.

ವಾಲ್ಮೀಕಿ ನಿಗಮದ ಪ್ರಕರಣದಲ್ಲೂ ಸರ್ಕಾರದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿ ಸೋತರು. ದಾಖಲೆಗಳು ಸ್ಪಷ್ಟವಾಗಿವೆ. ಸರ್ಕಾರಕ್ಕೂ ನಿಗಮದ ಹಗರಣಕ್ಕೂ ಸಂಬಂಧ ಇಲ್ಲ ಎನ್ನುವುದು ದಾಖಲೆಗಳಲ್ಲಿವೆ. ನನ್ನದೊಂದು ಪತ್ರ ಇಲ್ಲ, ನನ್ನದೊಂದು ಸಹಿ ಇಲ್ಲ, ಆಗ ನಮ್ಮ ಸರ್ಕಾರ ಅಧಿಕಾರದಲ್ಲೂ ಇರಲಿಲ್ಲ. ಆದರೂ ಹಗರಣ, ಹಗರಣ ಎಂದು ಬೊಬ್ಬೆ ಹಾಕುತ್ತಾ ಸುಳ್ಳು ಆರೋಪ ಹೊರಿಸುತ್ತಿದ್ದಾರೆ. ಇದಕ್ಕೆ ನೀವ್ಯಾರೂ ಸೊಪ್ಪು ಹಾಕಬೇಡಿ, ನಂಬಬೇಡಿ ಎಂದು ಕರೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+