ಮೈಸೂರಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ?: ಶೋಭಾ ಕರಂದ್ಲಾಜೆ
ನಂಜನಗೂಡು ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಅವರ ಜಯಲಕ್ಷ್ಮೀಪುರಂನಲ್ಲಿರುವ ನಿವಾಸಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಚುನಾವಣೆ ಕುರಿತು ಚರ್ಚೆ ನಡೆಸಿದರು.
ಮೈಸೂರು, ಮಾರ್ಚ್18 : ಏಪ್ರಿಲ್ 9 ರಂದು ನಡೆಯಲಿರುವ ನಂಜನಗೂಡು ಉಪಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ. ನಂಜನಗೂಡು ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ ಪ್ರಸಾದ್ ಅವರ ಜಯಲಕ್ಷ್ಮೀಪುರಂನಲ್ಲಿರುವ ನಿವಾಸಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಮಾಜಿ ಸಚಿವರಾದ ವಿ.ಸೋಮಣ್ಣ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಭೇಟಿ ನೀಡಿದ್ದು, ಚುನಾವಣೆ ಕುರಿತು ಚರ್ಚೆ ನಡೆಸಿದರು.[ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ?]
ಈ ಸಂದರ್ಭ ಬಿಜೆಪಿ ನಗರಾಧ್ಯಕ್ಷ ಮಂಜುನಾಥ್ ನಗರಪಾಲಿಕೆ ಸದಸ್ಯರಾದ ನಂದೀಶ್ ಪ್ರೀತಂ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಎರಡು ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಏನು ಮಾಡಿದ್ದಾರೆ ಎಂದು ಜನ ಕಾಂಗ್ರೆಸ್ ಗೆ ಮತ ಹಾಕುತ್ತಾರೆ.ಮೈಸೂರಿಗೆ ನೀವೇನು ಮಾಡಿದ್ದೀರಿ ಎನ್ನುವ ಕುರಿತು ಚರ್ಚೆಗೆ ಬನ್ನಿ. ನಾನು ಉಸ್ತುವಾರಿಯಾಗಿದ್ದಾಗ ಮಾಡಿದ ಕೆಲಸದಷ್ಟು ನೀವು ಕೆಲಸ ಮಾಡಿಲ್ಲ ಎಂದು ಹರಿಹಾಯ್ದರು. ಇಡೀ ಸಚಿವ ಸಂಪುಟವೇ ಪ್ರಚಾರಕ್ಕೆ ಬರುತ್ತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಇಲ್ಲೇ ಪ್ರಚಾರ ಮಾಡುತ್ತಾರೆ. ಒಂದೆರಡು ದಿನ ಹೊರಗೆ ಹೋಗುವುದನ್ನು ಬಿಟ್ಟರೆ ಚುನಾವಣೆ ಮುಗಿಯುವವರೆಗೂ ಯಡಿಯೂರಪ್ಪ ಇಲ್ಲೆ ಇರುತ್ತಾರೆ ಎಂದರು.[ಉಪಚುನಾವಣೆ ಗೆದ್ದು ತಕ್ಕ ಉತ್ತರ ನೀಡುತ್ತೇವೆ: ಡಾ.ಜಿ.ಪರಮೇಶ್ವರ್]
ಮಾಧ್ಯಮಗಳೊಂದಿಗೆ ಮಾಜಿ ಸಚಿವ ವಿ.ಸೋಮಣ್ಣ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀನಿವಾಸ್ ಪ್ರಸಾದ್‌ರನ್ನು ಸಂಪುಟದಿಂದ ಕೈಬಿಟ್ಟಿರುವುದು ಕೇಡುಗಾಲಕ್ಕೆ ನಾಯಿ ಮೊಟ್ಟೆ ಇಟ್ಟಂತಾಗಿದೆ. ತಾವೇ ತೋಡಿದ್ದ ಹಳ್ಳಕ್ಕೆ ತಾವೇ ಬಿದ್ದಿದ್ದಾರೆ ಎಂದು ವ್ಯಂಗ್ಯವಾಡಿದರು. ಈ ಉಪಚುನಾವಣೆ ಮುಂದಿನ ಸಾರ್ವತ್ರಿಕ ಚುನಾವಣೆ ದಿಕ್ಸೂಚಿಯಾಗಲಿದೆ. ಎರಡು ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications