ಬೆಂಗಳೂರು ಮಾದರಿ ಕಿದ್ವಾಯಿ ಆಸ್ಪತ್ರೆಗೆ ಮೈಸೂರಿನಲ್ಲಿ ಶಂಕುಸ್ಥಾಪನೆ ನೆರವೇರಿಸಿದ ಸಿಎಂ
ಮೈಸೂರು, ಡಿಸೆಂಬರ್ 22: ಬಡವರಿಗೆ ಉಚಿತವಾಗಿ ಹಾಗೂ ಕಡಿಮೆ ಖರ್ಚಿನಲ್ಲಿ ಆರೋಗ್ಯ ಸೇವೆ ದೊರೆಯಬೇಕು ಇದು ನಮ್ಮ ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ನಗರದ ಪಿ ಕೆ ಟಿ ಬಿ ಅಸ್ಪತ್ರೆಯ ಆವರಣದಲ್ಲಿ ಮೈಸೂರು ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ರಿಯಲ್ ಕ್ಯಾನ್ಸರ್ ಕೇಂದ್ರ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆ ಹಾಗೂ ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಸೇರಿದ ಬಾಲಕಿಯರ ವಿದ್ಯಾರ್ಥಿ ನಿಲಯದ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಬೆಂಗಳೂರು ನಗರವನ್ನು ಬಿಟ್ಟರೆ ಅತಿ ಹೆಚ್ಚು ಬೆಳವಣಿಗೆ ಆಗುತ್ತಿರುವ ನಗರ ಮೈಸೂರು. ಬೆಂಗಳೂರು ಮೈಸೂರು ನಡುವೆ 140 ಞ ಅಂತರ ಇದೆ. ಬೆಂಗಳೂರಿನಲ್ಲಿ ಕ್ಯಾರ್ನ್ಸ ಆಸ್ಪತ್ರೆ ಇದೆ. ಅಲ್ಲಿ ಹೆಚ್ಚಿನ ಒತ್ತಡ ಇದೆ. ಅಲ್ಲಿನ ಒತ್ತಡ ಕಡಿಮೆ ಮಾಡಲು ಜಿಲ್ಲಾ ಕೇಂದ್ರಗಳಲ್ಲಿ ಕ್ಯಾರ್ನ್ಸ ಆಸ್ಪತ್ರೆ ಪ್ರಾರಂಭ ಮಾಡಬೇಕು. ನಾನು ಡಾರ್ಕ್ಟ ಆಗಬೇಕು ಎಂದು ನಮ್ಮ ತಂದೆಯ ಆಸೆ ಇತ್ತು. ನನಗೆ ಡಾಕ್ಟರ್ ಆಗುವಷ್ಟು ಅಂಕ ಬರಲಿಲ್ಲ. ನಾನು ಡಾಕ್ಟರ್ ಆಗಿದ್ದರೆ ಇಂದು ಮುಖ್ಯ ಮಂತ್ರಿ ಆಗುತ್ತಿರಲಿಲ್ಲ ಎಂದು ಸ್ಮರಿಸಿದರು.
ವೈದ್ಯ ವೃತ್ತಿಯು ಸಮಾಜ ಸೇವೆ ಮಾಡಲು ಉತ್ತಮ ವೃತ್ತಿ. ಬಡವರಿಗೆ ಉಚಿತ ಹಾಗೂ ಉತ್ತಮ ಚಿಕಿತ್ಸೆ ನೀಡಿದರೆ ಅವರು ನಿಮ್ಮನ್ನು ನೇನೆದುಕೊಳ್ಳುತ್ತಾರೆ. ಜಯದೇವ ಆಸ್ಪತ್ರೆಯಲ್ಲಿ ಉತ್ತಮ ಸೇವೆ ನೀಡುತ್ತಾರೆ ಎಂದು ಜನರೇ ಹೇಳುತ್ತಾರೆ ಅಲ್ಲಿ ಉತ್ತಮ ಸೇವೆ ಸಿಗುವಾಗ ಬೇರೆ ಆಸ್ಪತ್ರೆಗಳಲ್ಲಿ ಕೂಡ ಉತ್ತಮ ಚಿಕಿತ್ಸೆ ದೊರೆಯಬೇಕು ಎಂದರು.
ಹೃದಯ ಸಂಬಂಧಿ ಕಾಯಿಲೆಗಳಿಗೆ ಹಿಂದೆ ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳ ಜನರು ಬೆಂಗಳೂರಿಗೆ ಬರುತ್ತಿದ್ದರು ಆದರೆ ನಾನು ಇಲ್ಲಿ ಜಯದೇವ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಯನ್ನು ಪ್ರಾರಂಭಿಸಿದೆ. ಮುಂದೆ ನ್ರೊ ಯುರಾಲಜಿ ಸೆಂರ್ಟ ಅನ್ನು ನೀಡಲಾಗುವುದು. ಸರ್ಕಾರಿ ಆಸ್ಪತ್ರೆ ಗಳಲ್ಲಿ ಕೆಲಸ ಮಾಡುವ ವೈದ್ಯರಿಗೆ ಮನುಷತ್ವ ಇರಬೇಕು ಆಗ ಮಾತ್ರ ಬಡವರಿಗೆ ಉತ್ತಮ ಚಿಕಿತ್ಸೆ ದೊರೆಯುತ್ತದೆ. ಶ್ರೀಮಂತರು ಹಣ ಇರುತ್ತದೆ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಾರೆ. ಮೈಸೂರು ಜಿಲ್ಲೆಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುವುದು. ಮೈಸೂರು ನಗರ ಪಾರಂಪರಿಕ ನಗರವಾಗಿದೆ. ನಿವೃತ್ತಿ ಆದವರು ಹೆಚ್ಚಾಗಿ ಮೈಸೂರು ನಗರದಲ್ಲಿ ವಾಸಿಸಲು ಇಷ್ಟ ಪಡುತ್ತಾರೆ ಎಂದು ತಿಳಿಸಿದರು.
ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ ಹರೀಶ್ ಗೌಡ ಅವರು ಮಾತನಾಡಿ ಮೈಸೂರು ಜಿಲ್ಲೆಯಿಂದ ಪ್ರತಿ ತಿಂಗಳು 10 ಸಾವಿರ ಜನ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಮೈಸೂರು ನಗರದಲ್ಲಿಯೇ ಚಿಕಿತ್ಸೆ ದೊರೆಯುವಂತೆ ಮಾಡಲು ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆಯನ್ನು ಸ್ಥಾಪಿಸಲು ಇಂದು ಶಂಕು ಸ್ಥಾಪನೆ ಮಾಡಲಾಗಿದೆ. 2 ವರ್ಷಗಳಲ್ಲಿ ಅಸ್ಪತ್ರೆ ಪ್ರಾರಂಭ ವಾಗುತ್ತದೆ. ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಗೆ ಜಿಲ್ಲಾ ಆಸ್ಪತ್ರೆ ಹಾಗೂ ಜಯದೇವ ಆಸ್ಪತ್ರೆಯನ್ನು ನೀಡಿದ್ದಾರೆ. ಮೈಸೂರಿನ ಕಿದ್ವಾಯಿ ಆಸ್ಪತ್ರೆಗೆ 5 ಎಕರೆ ಜಾಗ ನೀಡಿದ್ದು ಇದರಲ್ಲಿ ಮೊದಲ ಹಂತದಲ್ಲಿ 100 ಹಾಸಿಗೆಗಳ ಕಟ್ಟಡ ಕಟ್ಟಲಾಗುತ್ತದೆ. ಇದಕ್ಕೆ 50 ಕೋಟಿಗಳ ಹಣ ಮಂಜೂರು ಆಗಿದೆ. ಜಿಲ್ಲೆಗೆ ನ್ಯೂರಾಲಾಜಿ ನೀಡಬೇಕು ಎಂದು ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ, ಶಾಸಕರಾದ ಡಿ ರವಿಶಂರ್ಕ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಸಿ ಎನ್ ಮಂಜೇಗೌಡ, ಡಿ ತಿಮ್ಮಯ್ಯ, ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿಯ ಸದಸ್ಯರಾದ ಯತಿಂದ್ರ ಸಿದ್ದರಾಮಯ್ಯ, ಕಿದ್ವಾಯಿ ಸಂಸ್ಥೆಯ ನಿರ್ದೇಶಕರಾದ ಡಾ. ಲೋಕೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.












Click it and Unblock the Notifications