CM Siddaramaiah: ಮೈಸೂರು ಪ್ರವಾಸದಲ್ಲಿ ಸಿಎಂ: ಸಾಂಸ್ಕೃತಿಕ ನಗರಿಯಿಂದಲೇ ಪ್ರಚಾರ ಶುರು!
ಮೈಸೂರು ಏಪ್ರಿಲ್ 1: ಮೈಸೂರು ಲೋಕಸಭಾ ಚುನಾವಣೆಯ ಸಮರ ಜೋರಾಗಿದೆ. ಸಾಂಸ್ಕೃತಿಕ ನಗರಿಯಿಂದ ಸಿಎಂ ಸಿದ್ದರಾಮಯ್ಯ ಪ್ರಚಾರವನ್ನು ಇಂದು ಆರಂಭಿಸಲಿದ್ದಾರೆ. ಮಾತ್ರವಲ್ಲದೆ ಮೈಸೂರಿನಲ್ಲಿ ಮೂರು ದಿನದ ಪ್ರವಾಸ ಕೈಗೊಂಡಿದ್ದಾರೆ.
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಈ ಬಾರಿ ಬಿಜೆಪಿ ರಾಜಮನೆತನದ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ ಪಕ್ಷ ಎಂ ಲಕ್ಷ್ಮಣ್ ಅವರನ್ನು ಅಖಾಡಕ್ಕಿಳಿಸಿದೆ. ಈಗಾಗಲೇ ಮೈಸೂರಿಗೆ ತೆರಳಿರುವ ಅವರು ಮದ್ಯಾಹ್ನ 3 ಗಂಟೆಗೆ ಟಿ ನರಸೀಪುರ ಕ್ಷೇತ್ರದಲ್ಲಿ ಪ್ರಚಾರವನ್ನು ಆರಂಭಿಸಲಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಚಾಮರಾಜನಗರ ಹಾಗೂ ಮೈಸೂರಿನಲ್ಲೂ ನಾವೇ ಗೆಲ್ಲುತ್ತೇವೆ. ಸೋಲಿನ ಭೀತಿಯಿಂದ 28 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಿಜೆಪಿ ಅವರು ಸುಳ್ಳು ಹೇಳುತ್ತಿದ್ದಾರೆ' ಎಂದು ಸಿದ್ದರಾಮಯ್ಯ ಹೇಳಿದರು. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ನಾಮಪತ್ರ ಸಲ್ಲಿಕೆಯಲ್ಲೂ ಸಿಎಂ ಪಾಲ್ಗೊಳ್ಳಲಿದ್ದಾರೆ. ಸಂಜೆ 6ಕ್ಕೆ ಬೆಂಗಳೂರಿಗೆ ವಾಪಾಸ್ ಆಗಲಿದ್ದಾರೆ.
ಮೈಸೂರು ಜಿಲ್ಲೆ ಸಾಂಸ್ಕೃತಿಕವಾಗಿ, ಶೈಕ್ಷಣಿಕವಾಗಿ ಹಿಂದಿನಿಂದಲೂ ಉನ್ನತ ಮಟ್ಟದಲ್ಲಿರುವ ಜಿಲ್ಲೆ. ಇನ್ನು ದಕ್ಷಿಣದ ಕಾಶ್ಮೀರ ಎಂದೇ ಖ್ಯಾತವಾಗಿರುವ ಕೊಡಗು ಜಿಲ್ಲೆ ಪ್ರಾಕೃತಿಕ ಸೌಂದರ್ಯದ ಖನಿ. ವಿಧಾನಸಭಾ ಚುನಾವಣೆಯ ಅದ್ಭುತ ಗೆಲುವಿನಿಂದಾಗಿ ಉತ್ಸಾಹದಿಂದಿರುವ ಕಾಂಗ್ರೆಸ್ ಪಕ್ಷ ಕಳೆದುಹೋಗಿರುವ ತನ್ನ ಗತ ವೈಭವವನ್ನು ಇಲ್ಲಿ ಮರಳಿ ಪಡೆಯುವ ಪ್ರಯತ್ನದಲ್ಲಿದೆ.
ಹಿಂದಿನ ಚುನಾವಣೆಯ ಲೆಕ್ಕಾಚಾರಗಳನ್ನು ನೋಡುವುದಾದರೆ, 2014ರಲ್ಲಿ ಅನಿರೀಕ್ಷಿತವಾಗಿ ಬಿಜೆಪಿ ಟಿಕೆಟ್ ಪಡೆದ ಪತ್ರಕರ್ತ ಪ್ರತಾಪ್ ಸಿಂಹ್ ಅವರು ಅಡಗೂರು ಎಚ್ ವಿಶ್ವನಾಥ್ ವಿರುದ್ಧ 31 608 ಮತಗಳ ಅಂತರದಿಂದ ಜಯಭೇರಿ ಬಾರಿಸಿ ಸಂಸತ್ ಪ್ರವೇಶಿಸಿದರು. ಆ ಬಾರಿ ಪ್ರತಾಪ್ ಸಿಂಹ ಅವರು 503908 ಮತಗಳನ್ನು ಪಡೆದರೆ, ಕಾಂಗ್ರೆಸ್ ನ ಅಡಗೂರು ಎಚ್ ವಿಶ್ವನಾಥ್ 472300 ಮತಗಳನ್ನು ಪಡೆದಿದ್ದರು. ಇನ್ನು ಜೆಡಿಎಸ್ ನ ಚಂದ್ರಶೇಖರಯ್ಯ ಅವರು 138587 ಮತಗಳನ್ನು ಪಡೆದಿದ್ದರು.
2019ರ ಚುನಾವಣೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಅವರು 688974 ಮತಗಳನ್ನು ಪಡೆದರೆ, ಬಿಜೆಪಿಯಿಂದ ಕಾಂಗ್ರೆಸ್ ಸೇರಿ ಟಿಕೆಟ್ ಗಿಟ್ಟಿಸಿಕೊಂಡಿದ್ದ ಮೈತ್ರಿ ಅಭ್ಯರ್ಥಿ ಸಿಎಚ್ ವಿಜಯಶಂಕರ್ ಅವರು 550327 ಮತಗಳನ್ನು ಪಡೆದಿದ್ದರು.ಇನ್ನು ಬಿಎಸ್ಪಿಯಿಂದ ಕಣಕ್ಕಿಳಿದಿದ್ದ ಡಾ ಬಿ ಚಂದ್ರು ಪಡೆದದ್ದು ಕೇವಲ 24597 ಮತಗಳು.
ಸಿಎಂ ತವರು ಜಿಲ್ಲೆ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ 5 ಸ್ಥಾನಗಳನ್ನು ಗೆದ್ದಿರುವುದು ಕಾಂಗ್ರೆಸ್ ಗೆ ಪ್ಲಸ್ ಪಾಯಿಂಟ್ ಆಗಿದ್ದರೂ ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಗೆ ಗೆಲುವು ಕೂಡ ಸುಲಭ ಸಾಧ್ಯವಿಲ್ಲ. ಹೀಗಾಗಿ ಈ ಬಾರಿ ಮತದಾರರ ಮನ ಯಾರ ಕಡೆಗೆ ವಾಲಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.
-
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ












Click it and Unblock the Notifications