MUDA Site: ಎಚ್.ಡಿ.ದೇವೇಗೌಡರ ಕುಟುಂಬ ಪಡೆದಿರುವ ಸೈಟ್ ಪಟ್ಟಿ ಬೇಕಾ ಎಂದ ಸಿಎಂ ಸಿದ್ದರಾಮಯ್ಯ
ಮುಡಾ ಸೈಟು ಹಂಚಿಕೆ ವಿವಾದ ದಿನೇ ದಿನೇ ತಿರುವು ಪಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಮಾಡಿದ್ದ, ಬಿಜೆಪಿ ಮತ್ತು ಜೆಡಿಎಸ್‌ಗೆ ಕಾಂಗ್ರೆಸ್ ತಿರುಗೇಟು ಕೊಟ್ಟಿದ್ದು, ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಹಂಚಿಕೆಯಾಗಿರುವ ಮುಡಾ ನಿವೇಶನಗಳ ಪಟ್ಟಿ ಬಿಡುಗಡೆ ಮಾಡಿದೆ. ಇದೀಗ ಸಿಎಂ ಸಿದ್ದರಾಮಯ್ಯ ಕೂಡ ಎಚ್‌ಡಿ ದೇವೇಗೌಡರ ಕುಟುಂಬ ಪಡೆದಿರುವ ಸೈಟ್‌ಗಳ ಪಟ್ಟಿ ಬೇಕಾ ಎಂದು ಕೇಳಿದ್ದಾರೆ
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಎಷ್ಟು ಸೈಟ್ ಹೋಗಿದೆ ಗೊತ್ತಾ? ಪುಟ್ಟಯ್ಯ ಸಿಐಟಿಬಿ ಅಧ್ಯಕ್ಷರಾಗಿದ್ದಾಗ ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟ್ ಬರೆಸಿಕೊಂಡಿದ್ದಾರೇ ಪಟ್ಟಿ ಕೊಡಲೇ ? ಪ್ರಶ್ನೆ ಮಾಡಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ 40 ವರ್ಷದ ಹಿಂದೆ ಮುಡಾ ಸೈಟ್ ಪಡೆದಿದ್ದಾರೆ. ಅದರ ಸ್ವಾಧೀನ ಪತ್ರವೂ ಪಡೆದುಕೊಂಡಿದ್ದಾರೆ. ಈಗ ಇಲ್ಲ ಎಂದು ಸುಳ್ಳು ಯಾಕೆ ಸುಳ್ಳು ಹೇಳಬೇಕು ಎಂದು ಕೇಳಿದ ಅವರು, ಮುಡಾದ ಇಲ್ಲದ ಹಗರವಣನ್ನು ಸೃಷ್ಟಿ ಮಾಡಿರುವ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆಗೆ ಪ್ರತಿಯಾಗಿ ನಾವು ಕೂಡ ಪಾದಯಾತ್ರೆ ನಡೆಸುತ್ತೇವೆ. ಮುಡಾ ವಿಚಾರ ಇಟ್ಟುಕೊಂಡು ಬಿಜೆಪಿ ಬ್ಲ್ಯಾಕ್ ಮೇಲ್ ಮಾಡುತ್ತಿದೆ. ಈಗಾಗಲೇ ಮುಡಾ ಹಗರಣವನ್ನ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದೇನೆ ಇನ್ನೇನು ಮಾಡಬೇಕು ಎಂದರು.
ಅವರು ಸಿಬಿಐಗೆ ಕೊಟ್ಟಿದ್ದಾರಾ?
ಬಿಜೆಪೊ ಸರ್ಕಾರದ ಅವಧಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದ್ದವು, ಅವರು ನ್ಯಾಯಾಂಗ ತನಿಖೆ ಮಾಡಿಸಿದ್ದರಾ? ಕೋವಿಡ್ ಸಂದರ್ಭದಲ್ಲಿ ಸುಮಾರು 4,000 ಕೋಟಿ ಭ್ರಷ್ಟಾಚಾರ ನಡೆದಿದೆ ಅದನ್ನು ತನಿಖೆ ಮಾಡಿಸಿದ್ರಾ? ನಾನು ಅಧಿಕಾರಕ್ಕೆ ಬಂದ ಬಳಿಕ 7-8 ಹಗರಣಗಳನ್ನು ಸಿಬಿಐ ತನಿಖೆಗೆ ಕೊಟ್ಟಿದ್ದೇನೆ, ಅವರು ಒಂದಾದರೂ ಕೊಟ್ಟಿದ್ರಾ ಎಂದು ಕೇಳಿದರು.
ಮೇಕೆದಾಟು ಕಟ್ಟಲು ಸಿದ್ದ
ಮೇಕೆದಾಟು ಯೋಜನೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ಧರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕೇಂದ್ರದವರು ಮಧ್ಯಸ್ಥಿಕೆ ವಹಿಸಲಿ. ಡ್ಯಾಂ ಕಟ್ಟಲು ನಾವು ಸಿದ್ಧ ಎಂದರು.
ರಾಜ್ಯದಿಂದ ಕೈಗಾರಿಕೆಗಳು ವಾಪಸ್ ಹೋಗುತ್ತಿವೆ ಎಂಬ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದಿಂದ ಅಲ್ಲ ದೇಶದಿಂದಲೇ ಕೈಗಾರಿಕೆಗಳು ವಾಪಸ್ ಹೋಗುತ್ತಿವೆ. ನಮ್ಮಲ್ಲಿ ಕೈಗಾರಿಕೆಗಳು ಎಷ್ಟು ಬೆಳವಣಿಗೆಯಾಗಿದೆ ಎಂಬುದನ್ನು ವಿವರವಾಗಿ ಹೇಳುತ್ತೇನೆ ಎಂದರು.












Click it and Unblock the Notifications