ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಸಹೋದರಿ ನಿಧನ
Recommended Video

ಸಿದ್ದರಾಮಯ್ಯ ಹಿರಿಯ ಸಹೋದರಿ ನಿಧನ | Oneindia Kannada
ಮೈಸೂರು, ಅಕ್ಟೋಬರ್ 07 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಸಹೋದರಿ ಚಿಕ್ಕಮ್ಮ(91) ನಿಧನರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಚಿಕ್ಕಮ್ಮ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿಸಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಚಿಕ್ಕಮ್ಮ ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದರು.

ಮೈಸೂರಿನ ದೇವೇಗೌಡನಹುಂಡಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ.












Click it and Unblock the Notifications