ಸಂವಿಧಾನದ ರಕ್ಷಣೆ ಮಾಡಿದರೆ ಜನರ ರಕ್ಷಣೆ ಮಾಡಿದಂತೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಸಂವಿಧಾನ ರಕ್ಷಣೆ ಎಂದರೆ ಅದು ಜನರ ರಕ್ಷಣೆ ಮಾಡಿದಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಗೃಹ ಕಚೇರಿಯಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದೇಶದ ಸಾಮಾಜಿಕ, ರಾಜಕೀಯ, ಆರ್ಥಿಕ ವಿಕಸನಕ್ಕೆ ಸಂವಿಧಾನವನ್ನು ಬಲಪಡಿಸಬೇಕಾಗಿದೆ ಎಂದರು.
75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜಾಥಾಕ್ಕೆ ಚಾಲನೆ ನೀಡುತ್ತಿದ್ದು, ಸಂವಿಧಾನ ತಜ್ಞರು, ವಿಚಾರವಾದಿಗಳಿಂದ ಭಾಷಣ ಕಾರ್ಯಗಳು ನಡೆಯಲಿದೆ ಎಂದು ತಿಳಿಸಿದರು.

ಸಂವಿಧಾನದ ಮೂಲ ಅಂಶಗಳಾದ ಧರ್ಮನಿರಪೇಕ್ಷತೆ, ಜಾತ್ಯಾತೀತೆ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಒದಗಿಸುವ ವಿಧಿಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳು ಮತ್ತು ರಾಜ್ಯ ನಿರ್ದೇಶಕ ತತ್ವಗಳನ್ನು ಖಾತ್ರಿಪಡಿಸುವ ವಿಷಯಗಳ ಬಗೆಗೆ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಚರ್ಚೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಸಂವಿಧಾನದ ಅಂಗೀಕಾರದ ಮುನ್ನಾದಿನ ಅಂಬೇಡ್ಕರರು ರಚನಾ ಸಭೆಯಲ್ಲಿ ಮಾಡಿದ ಅಮೋಘ ಭಾಷಣದಲ್ಲಿ ಮುಂದೆ ಬರಬಹುದಾದ ಸಮಸ್ಯೆಗಳ ಬಗೆಗೂ ಪ್ರಸ್ತಾಪಿಸಿದ್ದಾರೆ. ಆ ಎಲ್ಲಾ ಮಹತ್ವದ ಅಂಶಗಳನ್ನು ಪುಸ್ತಕಗಳು ಒಳಗೊಂಡಿರುವುದರೊಂದಿಗೆ ಡಾ.ಬಾಬು ರಾಜೇಂದ್ರ ಪ್ರಸಾದ್, ರಾಜಾಜಿ ಅಂತಹವರೂ ಸೇರಿದಂತೆ ಸಂವಿಧಾನ ರಚನಾ ಸಭೆಯ ಮುತ್ಸದ್ದಿಗಳ ಮಾತುಗಳು ಪುಸ್ತಕದಲ್ಲಿರಲಿವೆ ಎಂದರು.
ಪ್ರಮುಖವಾಗಿ ಸಂವಿಧಾನ ಜಾರಿಗೆ ಬಂದ 75 ವರ್ಷಗಳಲ್ಲಿ ಸಂವಿಧಾನದ ಆಶಯ ಹಾಗೂ ಧ್ಯೇಯೋದ್ದೇಶ ಎಷ್ಟರ ಮಟ್ಟಿಗೆ ಈಡೇರಿದೆ ಎಂಬ ಅಂಶವೂ ಪ್ರಮುಖವಾಗಿ ಚರ್ಚೆಯಾಗಲಿದೆ ಎಂದರು.
ಸಂವಿಧಾನವನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಹವಣಿಸುತಿದ್ದು, ಸಂವಿಧಾನಕ್ಕೆ ವಿರುದ್ದವಾದ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಅಂತಹವರಿಗೆ ಸಂವಿಧಾನ ಜಾಥಾ ಉತ್ತರ ಕೊಡಲಿದೆ ಎಂದರು.
{document1}sid












Click it and Unblock the Notifications