ನಾಳೆಯಿಂದ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ: ಈ ಕಾರ್ಯಕ್ರಮಗಳಲ್ಲಿ ಭಾಗಿ
ಮೈಸೂರು, ಆಗಸ್ಟ್ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆಯಿಂದ ಆಗಸ್ಟ್ 30ರವರಗೆ ಮೈಸೂರು ಜಿಲ್ಲೆಯ ಪ್ರವಾಸ ನಡೆಸಲಿದ್ದು,
ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
ಆಗಸ್ಟ್ 28 ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಡುವ ಅವರು 11 ಗಂಟೆಗೆ ಮೈಸೂರು ಜಿಪಂ ಸಭಾಂಗಣದಲ್ಲಿ ಆಯೋಜಿಸಿರುವ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ)ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಜರಗುವ ಗಂಗೋತ್ರಿಯ ಆಯ್ದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.

ಆಗಸ್ಟ್ 29 ರಂದು ಬೆಳಿಗ್ಗೆ 10,30 ಕ್ಕೆ ಸುತ್ತೂರು ಮಠದ ಪರಮಪೂಜ್ಯ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108 ನೇ ಜಯಂತಿ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಧ್ಯಾಹ್ನ 1,45ಕ್ಕೆ ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭ ಹಾಗೂ ಕೆ.ಆರ್.ಆಸ್ಪತ್ರೆಯ ರೇಡಿಯಾಲಜಿ ವಿಭಾಗದ ಎಂ.ರ್ಆ.ಐ ಯಂತ್ರೋಪಕರಣ ಇನ್ನಿತರೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ, ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 30 ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3,50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 6.30ಕ್ಕೆ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಿರುವ ರಾಜೀವ ನಗರದ ಆಲ್ -ಬರ್ದ ಸರ್ಕಲ್ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ರಾತ್ರಿ 7.30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications