ಪಿರಿಯಾಪಟ್ಟಣ: 150 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಇಡೀ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಳ ಆಗಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಮುತ್ತಿನ ಮುಳುಸೋಗೆ ಗ್ರಾಮದ ಹತ್ತಿರ ಕಾವೇರಿ ನದಿಯಿಂದ ನೀರೆತ್ತಿ 79 ಗ್ರಾಮಗಳಲ್ಲಿ ಬರುವ 150 ಕೆರೆಗಳು ಹಾಗೂ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು.

CM Siddaramaiah Vows to Fill Lakes for Groundwater Improvement Across Entire Karnataka

2017 ರಲ್ಲಿ ನಾನು ಈ ಯೋಜನೆಗೆ ಮಂಜೂರು ಮಾಡಿ ಚಾಲನೆ ನೀಡಿದ್ದೆ. ಪಿರಿಯಾಪಟ್ಟಣ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಇದೆ, ಈ ಯೋಜನೆಯಿಂದ 150 ಕೆರೆಗಳಿಗೆ ನೀರು ತುಂಬಿಸುವುದರಿಂದ ಅಂತರ್ಜಲ ಹೆಚ್ಚಳ ಆಗಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಯುತ್ತದೆ. ಇದರಿಂದ 79 ಗ್ರಾಮಗಳ 93 ಸಾವಿರ ಜನರಿಗೆ ಅನುಕೂಲ ಆಗುತ್ತದೆ ಎಂದರು.

ನುಡಿದಂತೆ ನಡೆಯುತ್ತೇವೆ

ನಾವು ನೀರಾವರಿ ಯೋಜನೆಗೆ ಪ್ರತಿ ವರ್ಷ 10 ಸಾವಿರ ಕೋಟಿ ಖರ್ಚು ಮಾಡುವುದಾಗಿ ವಾಗ್ದಾನ ಮಾಡಿದ್ದೆವು, ಅದರಂತೆ 5 ವರ್ಷಗಳಲ್ಲಿ 56 ಸಾವಿರ ಕೋಟಿ ಖರ್ಚು ಮಾಡಿದ್ದೆವು. ರಾಜ್ಯದ 223 ತಾಲ್ಲೂಕುಗಳಲ್ಲಿ ಬರಗಾಲ ಇದೆ. ಆದರೂ ಜನರಿಗೆ ನೀರಿನ ಸಮಸ್ಯೆ ಆಗದಂತೆ ಕಾರ್ಯ ನಿರ್ವಹಿಸಿದ್ದೇವೆ. ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ ಆದರೆ ಇನ್ನೂ ಬರ ಪರಿಹಾರ ಬಿಡುಗಡೆ ಆಗಿಲ್ಲ ಎಂದರು.

ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದ್ದ 5 ಗ್ಯಾರೆಂಟಿ ಗಳನ್ನು ಜಾರಿಗೆ ತಂದಿದ್ದೇವೆ. ಈ 5 ಗ್ಯಾರಂಟಿಗಳಿಗೆ 38 ಸಾವಿರ ಕೋಟಿ ಹಾಗೂ ಮುಂದಿನ ವರ್ಷದಲ್ಲಿ 58 ಸಾವಿರ ಕೋಟಿ ರೂಗಳನ್ನು ಖರ್ಚು ಮಾಡುತ್ತೇವೆ. 4.5 ಕೋಟಿ ಜನರಿಗೆ ಪ್ರತಿ ತಿಂಗಳು 4 ರಿಂದ 5 ಸಾವಿರ ಮೌಲ್ಯದ ಸೌಲಭ್ಯಗಳು ಸಿಗುತ್ತಿವೆ ಎಂದರು.

ಇಡೀ ದೇಶಕ್ಕೆ ಮಾದರಿ ಸರ್ಕಾರ!

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ ಇಡೀ ದೇಶಕ್ಕೆ ಮಾದರಿಯಾದ ಸರ್ಕಾರವನ್ನು ರೂಪಿಸಿದ್ದೇವೆ. ಕೆರೆಗಳಿಗೆ ನೀರನ್ನು ತುಂಬಿಸಿ ಅಂತರ್ಜಲ ಹೆಚ್ಚಿಸುವ ಕೆಲಸವನ್ನು ಮಾಡುತ್ತಿದ್ದೇವೆ. ರೈತರಿಗೆ ಯಾವುದೇ ಸಂಬಳ, ರಜೆ, ಪ್ರಮೋಷನ್, ಪಿಂಚಣಿ ಇಲ್ಲ. ಆದ್ದರಿಂದ ಅವರು ಬೆಳೆ ಬೆಳೆಯಲು ನೀರನ್ನು ನೀಡಿದರೆ ಉತ್ತಮ ಬೆಳೆಗಳನ್ನು ಬೆಳೆದು ಉತ್ತಮ ಜೀವನ ನಡೆಸಲು ಸಹಕಾರಿಯಾಗುತ್ತದೆ. ನಮ್ಮ ಸರ್ಕಾರ ರೈತ ಪರವಾದ ಸರ್ಕಾರ. ನಾವು ಚುನಾವಣೆಗೂ ಮುಂಚೆ ನೀಡಿದ್ದ 5 ಗ್ಯಾರೆಂಟಿಗಳನ್ನು ಜಾರಿಗೆ ತಂದು ನುಡಿದಂತೆ ನಡೆಸಿದ್ದೇವೆ ಎಂದರು.

ನಮ್ಮ ಸರ್ಕಾರ ಕನ್ನಡಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಕನ್ನಡದಲ್ಲಿ ನಾಮಫಲಕಗಳನ್ನು ಹಾಕುವಂತೆ ಆದೇಶ ಮಾಡಲಾಗಿದೆ. ಮೇಕೆದಾಟು ಯೋಜನೆಯನ್ನು ಜಾರಿಗೆ ತರಲು ಪಾದಯಾತ್ರೆ ಮಾಡಿದೆವು. ಈ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ಇದೆ. ನಮ್ಮ ನೀರು ನಮ್ಮ ಹಕ್ಕು. ಈ ಬಗ್ಗೆ ಹೋರಾಟ ಮಾಡುತ್ತೇವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+