ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಪ್ಟ್ ಎಂದ ಸಿಎಂ ಯಡಿಯೂರಪ್ಪ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಜನವರಿ 27: ಮಾರ್ಚ್ 5 ರಂದು ಮಂಡಿಸುವ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಬಂಪರ್ ಗಿಪ್ಟ್ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

Recommended Video

ಅಂಬೇಡ್ಕರ್ ಮೊಮ್ಮಗನ ವಿವಾದಾತ್ಮಕ ಹೇಳಿಕೆ | AMBEDKAR | RAJARATHNA AMBEDKAR | GRANDSON | RSS

ಮೈಸೂರು ಜಿಲ್ಲೆ ಕೃಷ್ಣರಾಜನಗರ ತಾಲೂಕಿನ ದೇವಿತಂದ್ರೆ ಗ್ರಾಮದಲ್ಲಿರುವ ಸಪ್ತ ಮಾತೃಕೆ ದೇವಿರಮ್ಮನ ದೇವಾಲಯದ ರಾಜಗೋಪುರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಖಜಾನೆ ಖಾಲಿ ಎಂದ ಸಿದ್ದುಗೆ ಬಿಎಸ್ವೈ ತಿರುಗೇಟು!ರಾಜ್ಯ ಖಜಾನೆ ಖಾಲಿ ಎಂದ ಸಿದ್ದುಗೆ ಬಿಎಸ್ವೈ ತಿರುಗೇಟು!

ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ವೀರಶೈವ-ಲಿಂಗಾಯತ ಧರ್ಮ ನಮಗಾಗಿ ಇರುವ ಧರ್ಮ ಅಲ್ಲ. ದಲಿತರು, ಹಿಂದುಳಿದವರ ಏಳಿಗೆಗಾಗಿ ಇರುವ ಧರ್ಮ ಎಂದು ತಿಳಿಸಿದರು.

CM Yediyurappa Said Bumper Gift For Farmers In The Budget

ರಂಭಾಪುರಿ ಮಠ ವೀರಶೈವ ಪಂಚಪೀಠಗಳಲ್ಲಿ ಪ್ರಾಚೀನವಾದದ್ದು. ನಾವು ನಮಗಾಗಿ ಬದುಕಬಾರದು. ಸಮಾಜಕ್ಕಾಗಿ ಬದುಕಬೇಕು ಮಾರ್ಚ್ 5 ರಂದು ಬಜೆಟ್ ಮಂಡಿಸುತ್ತೇನೆ. ರೈತರ ಪರವಾದ ಕಾರ್ಯಕ್ರಮಗಳನ್ನು ರೂಪಿಸುತ್ತೇನೆ. ರಾಜ್ಯದ ಕೈಗಾರಿಕಾಭಿವೃದ್ಧಿಯನ್ನೂ ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸುತ್ತೇನೆ ಎಂದರು.

"ಯಾರು ಏನೇ ಹೇಳಲಿ, ರಾಜ್ಯದಲ್ಲಿ 3 ವರ್ಷ ಯಡಿಯೂರಪ್ಪ ಸರ್ಕಾರ ಗ್ಯಾರಂಟಿ"

ಸಚಿವ ವಿ.ಸೋಮಣ್ಣ ಮಾತನಾಡಿ, ಇನ್ನೂ ಮೂರು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕೆ ಪಂಚಾಚಾರ್ಯ ಸ್ವಾಮೀಜಿಗಳ ಆಶೀರ್ವಾದ ಬೇಕು. ಯಡಿಯೂರಪ್ಪನವರ ಮುಂದೆ ಹಲವು ಸವಾಲುಗಳಿವೆ. ಅವೆಲ್ಲವುಗಳನ್ನೂ ಮೀರಿ ಕೆಲಸ ಮಾಡುವ ಸಾಮರ್ಥ್ಯ ಅವರಿಗಿದೆ ಎಂದರು.

ಬಾಳೆಹೊನ್ನೂರು ಪೀಠದ ರಂಭಾಪುರಿ ಶ್ರೀಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ, ಮಾಜಿ ಸಚಿವರಾದ ಸಿ.ಎಚ್.ವಿಜಯಶಂಕರ್, ಸಾ.ರಾ.ಮಹೇಶ್, ಶಾಸಕ ರೇಣುಕಾಚಾರ್ಯ ಸೇರಿದಂತೆ ವಿವಿಧ ಮಠಗಳ ಮಠಾಧೀಶರುಗಳು ಭಾಗಿಯಾಗಿದ್ದರು.

English summary
Chief Minister BS Yediyurappa said farmers programs would be formulated in the budget.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X