• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮುಂಡಿ ಬೆಟ್ಟದ ಅಭಿವೃದ್ಧಿಗೆ 7.5 ಕೋಟಿ ರೂ ಅನುದಾನ; ಸಿಎಂ

By ಮೈಸೂರು ಪ್ರತಿನಿಧಿ
|

ಮೈಸೂರು, ಅಕ್ಟೋಬರ್ 17: ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟದಲ್ಲಿ ಅಭಿವೃದ್ಧಿ ಕಾರ್ಯಗಳಿಗಾಗಿ 7.5 ಕೋಟಿ ರೂಪಾಯಿಯನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ನಾಡಹಬ್ಬ ದಸರಾ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಚಿವರ ಮನವಿ ಮೇರೆಗೆ ಚಾಮುಂಡಿ ಬೆಟ್ಟದ ವ್ಯಾಪ್ತಿಯ ದೇವಿಕೆರೆ, ಹಿರೆ ಕೆರೆ ತುಂಬಿಸಲು, ಮೆಟ್ಟಿಲುಗಳ ಅಭಿವೃದ್ಧಿ ಹಾಗೂ ಬೆಟ್ಟದಲ್ಲಿ ಬೀದಿದೀಪಗಳನ್ನು ಅಳವಡಿಸಲು ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಜನರನ್ನು ರಕ್ಷಿಸಿ ಎಂದು ಪ್ರಧಾನಿ ಹೇಳಿರುವುದು ಸಮಾಧಾನ ತಂದಿದೆ: ಬಿಎಸ್‌ವೈ

ಸೆಪ್ಟೆಂಬರ್‌ ತಿಂಗಳಲ್ಲಿ ಪ್ರವಾಹದಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಅಪಾರ ನಷ್ಟವುಂಟಾಗಿದೆ. ಈ ಕುರಿತು ಪ್ರಧಾನಿ ಮೋದಿ ಅವರೂ ಚರ್ಚೆ ನಡೆಸಿದ್ದು, ಒಂದು ವಾರದೊಳಗೆ ಪ್ರವಾಹ ಪೀಡಿತರಿಗೆ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕಲಬುರಗಿಯಲ್ಲಿ ಪ್ರವಾಹಪೀಡಿತ ಗ್ರಾಮವೊಂದನ್ನು ಸ್ಥಳಾಂತರ ಮಾಡಲಾಗಿದ್ದು, ಕಂದಾಯ ಸಚಿವರು ಹಲವು ಕಡೆ ಭೇಟಿ ನೀಡುತ್ತಿದ್ದಾರೆ. ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರವಾಹಪೀಡಿತ ಪ್ರದೇಶಗಳ ನಿರ್ವಹಣೆಗಾಗಿ 34 ಕೋಟಿ ರೂ. ಬಿಡುಗಡೆ ಮಾಡಲಾಗುವುದು. ನೇರವಾಗಿ ನೆರೆ ಸಂತ್ರಸ್ತರ ಖಾತೆಗಳಿಗೆ ಹಾಕಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಈಗಾಗಲೇ ಹಣ ಇದೆ ಎಂದೂ ಹೇಳಿದರು.

English summary
Chief Minister BS Yediyurappa to grant Rs 7.5 crore for development work in the famous Chamundi Hills in Mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X