ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಮೈಸೂರಿನಲ್ಲಿ ಮತ ಸಿಗುತ್ತಾ ?

|
Google Oneindia Kannada News

ಮೈಸೂರು, ಮಾರ್ಚ್ 23 : ಲೋಕಸಭೆ ಚುನಾವಣೆ ಕಾವು ಹೆಚ್ಚುತ್ತಿರುವಂತೆ ಮತಗಳಿಕೆ ಲೆಕ್ಕಾಚಾರವೂ ವಿವಿಧ ರೀತಿಯಲ್ಲಿ ನಡೆಯುತ್ತಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಸಂಸದ ಪ್ರತಾಪ ಸಿಂಹ ಕಣಕ್ಕಿಳಿಯಲಿದ್ದಾರೆ. ಇತ್ತ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯ ಹೆಸರು ಇನ್ನೆರಡು ದಿನಗಳಲ್ಲಿ ಅಂತಿಮಗೊಳ್ಳುವ ಸಾಧ್ಯತೆಯಿದೆ.

ಮೈಸೂರಿನಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಇದೇ ಮೊದಲ ಬಾರಿಗೆ ಜತೆಯಾಗಿ ಕಣಕ್ಕಿಳಿಯುವುದರಿಂದ ಸಾಕಷ್ಟು ಕುತೂಹಲ ಮೂಡಿಸಿದೆ.

2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಕಣದಲ್ಲಿದ್ದರೂ, ಕಾಂಗ್ರೆಸ್‌-ಬಿಜೆಪಿ ನಡುವೆ ನೇರ ಹಣಾಹಣಿ ನಡೆದಿತ್ತು. ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಐದು ಲಕ್ಷಕ್ಕೂ ಅಧಿಕ ಮತಗಳನ್ನು ಪಡೆದು ಜಯ ಸಾಧಿಸಿದ್ದರು.

ಈ ಕ್ಷೇತ್ರದಲ್ಲಿ ಐದು ಲಕ್ಷಕ್ಕೂ ಹೆಚ್ಚು ಮತಗಳನ್ನು ಪಡೆದ ಮೊದಲ ಅಭ್ಯರ್ಥಿ ಎಂಬ ಗೌರವ ಅವರಿಗೆ ಒಲಿದಿತ್ತು. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದುಕೊಂಡಿದ್ದವು.

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಹಿಳೆಯರದ್ದೇ ಮೇಲುಗೈ ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮಹಿಳೆಯರದ್ದೇ ಮೇಲುಗೈ

ಕಳೆದ ಬಾರಿಯ ಚುನಾವಣೆಯೂ ಸೇರಿದಂತೆ ಕಾಂಗ್ರೆಸ್‌-ಜೆಡಿಎಸ್‌ ಅಭ್ಯರ್ಥಿಗಳ ಒಟ್ಟು ಮತಗಳು ಎರಡು ಸಲ ಆರು ಲಕ್ಷಗಳ ಗಡಿ ದಾಟಿದ್ದರೆ, ಎರಡು ಸಲ ಐದು ಲಕ್ಷಗಳ ಗಡಿ ದಾಟಿದ್ದವು.

ಈ ಬಾರಿಯೂ ಅದೇ ರೀತಿಯ ಲೆಕ್ಕಾಚಾರ ಹಾಕಿಕೊಂಡು ಗೆಲುವಿನ ದಡ ಸೇರುವುದು ಮೈತ್ರಿ ಪಕ್ಷಗಳ ಲೆಕ್ಕಾಚಾರ.

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಮೈಸೂರಲ್ಲಿ ಗೆಲುವು ಸಿಗುತ್ತಾ?

ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಮೈಸೂರಲ್ಲಿ ಗೆಲುವು ಸಿಗುತ್ತಾ?

ಆದರೆ ಈ ಬಾರಿ ಉಭಯ ಪಕ್ಷಗಳು ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುತ್ತಿವೆ. ಇದರಿಂದ ಮತಗಳ ಲೆಕ್ಕಾಚಾರದ ಸಮೀಕರಣವೇ ಬದಲಾಗಿದೆ. ಕಾಂಗ್ರೆಸ್-ಜೆಡಿಎಸ್‌ ಮತಗಳು ಒಟ್ಟಾದರೆ ಮಾತ್ರ ಮೈತ್ರಿ ಪಕ್ಷದ ಅಭ್ಯರ್ಥಿಯ ಗೆಲುವು ಸಾಧ್ಯ ಎಂದು ವಿಶ್ಲೇಷಿಸಲಾಗುತ್ತಿದೆ. 2014 ರಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳ ಅಭ್ಯರ್ಥಿಗಳು ಒಟ್ಟಾಗಿ 6,10,887 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಎಚ್‌.ವಿಶ್ವನಾಥ್‌ 4,72,300 ಮತಗಳನ್ನು ಹಾಗೂ ಜೆಡಿಎಸ್‌ನ ಚಂದ್ರಶೇಖರಯ್ಯ 1,38,587 ಮತಗಳನ್ನು ಪಡೆದಿದ್ದರು. ಕಳೆದ ಚುನಾವಣೆಯಲ್ಲಿ 11,59,594 ಲಕ್ಷ ಮಂದಿ ಮತ ಚಲಾಯಿಸಿದ್ದು, ಶೇ 67.3 ಮತದಾನ ದಾಖಲಾಗಿತ್ತು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ:ಅಭ್ಯರ್ಥಿಗಳ ಆಯ್ಕೆ ವಿಳಂಬವೇಕೆ? ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ:ಅಭ್ಯರ್ಥಿಗಳ ಆಯ್ಕೆ ವಿಳಂಬವೇಕೆ?

ಕಳೆದ ಬಾರಿ ಗೆಲುವಿನ ಅಂತರ ಹೆಚ್ಚಿರಲಿಲ್ಲ

ಕಳೆದ ಬಾರಿ ಗೆಲುವಿನ ಅಂತರ ಹೆಚ್ಚಿರಲಿಲ್ಲ

ಕಳೆದ ಬಾರಿ ಬಿಜೆಪಿ ಗೆಲುವಿನ ಅಂತರ ತುಂಬಾ ದೊಡ್ಡದಿರಲಿಲ್ಲ. ಪ್ರತಾಪ್‌ ಸಿಂಹ ಅವರು 31,608 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಆದ್ದರಿಂದ ಈ ಬಾರಿ ಮೈತ್ರಿ ಅಭ್ಯರ್ಥಿಯಿಂದ ಬಿಜೆಪಿಗೆ ಪ್ರಬಲ ಸವಾಲು ಎದುರಾಗುವ ಸಾಧ್ಯತೆಯಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ತನ್ನದೇ ಆದ ಮತ ಬ್ಯಾಂಕ್‌ ಹೊಂದಿವೆ ಎಂಬುದು ಕಳೆದ ನಾಲ್ಕು ಲೋಕಸಭಾ ಚುನಾವಣೆಗಳ ಫಲಿತಾಂಶವನ್ನು ಗಮನಿಸಿದಾಗ ಸ್ಪಷ್ಟವಾಗುತ್ತದೆ.

ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ ಮೈಸೂರು-ಕೊಡಗು ಕ್ಷೇತ್ರ:ಯಾರ ಲೆಕ್ಕಾಚಾರ ಹೇಗಿದೆ? ಲೋಕಸಭಾ ಚುನಾವಣೆಗೆ ಸಜ್ಜಾಗುತ್ತಿದೆ ಮೈಸೂರು-ಕೊಡಗು ಕ್ಷೇತ್ರ:ಯಾರ ಲೆಕ್ಕಾಚಾರ ಹೇಗಿದೆ?

2009ರಲ್ಲಿ ಎರಡೂ ಪಕ್ಷಗಳು ಗಳಿಸಿದ್ದ ಮತವೆಷ್ಟು?

2009ರಲ್ಲಿ ಎರಡೂ ಪಕ್ಷಗಳು ಗಳಿಸಿದ್ದ ಮತವೆಷ್ಟು?

2009 ರಲ್ಲಿ ಎರಡೂ ಪಕ್ಷಗಳ ಅಭ್ಯರ್ಥಿಗಳು ಒಟ್ಟು 5.71 ಲಕ್ಷ ಮತಗಳನ್ನು ಪಡೆದುಕೊಂಡಿದ್ದರು. ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದ ಎಚ್‌.ವಿಶ್ವನಾಥ್‌ ಅವರು 3.54 ಲಕ್ಷ ಮತ ಹಾಗೂ ಜೆಡಿಎಸ್‌ ಅಭ್ಯರ್ಥಿ 2.16 ಲಕ್ಷ ಮತಗಳನ್ನು ಪಡೆದಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಸಿ.ಎಚ್‌.ವಿಜಯಶಂಕರ್ ಅವರಿಗೆ 3.47 ಲಕ್ಷ ಮತಗಳು ಲಭಿಸಿದ್ದವು. 2004 ರಲ್ಲಿ ಕಾಂಗ್ರೆಸ್‌ನ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌ ಮತ್ತು ಜೆಡಿಎಸ್‌ನ ಎ.ಎಸ್‌.ಗುರುಸ್ವಾಮಿ ಅವರು ಜತೆಯಾಗಿ 6.05 ಲಕ್ಷ ಮತಗಳನ್ನು ಪಡೆದಿದ್ದರು. 1999 ರಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳ ಒಟ್ಟು ಮತ 5.28 ಲಕ್ಷ ಆಗಿತ್ತು.

ಕಾಂಗ್ರೆಸ್ ಜೆಡಿಎಸ್ ನಡುವೆ ಹಣಾಹಣಿ

ಕಾಂಗ್ರೆಸ್ ಜೆಡಿಎಸ್ ನಡುವೆ ಹಣಾಹಣಿ

ಆದರೆ ಮೈಸೂರು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ವಿಧಾನಸಭಾ ಕ್ಷೇತ್ರಗಳವರೆಗೆ ನಡೆಯುವ ಎಲ್ಲ ಚುನಾವಣೆಗಳಲ್ಲೂ ಕಾಂಗ್ರೆಸ್‌- ಜೆಡಿಎಸ್‌ ನಡುವೆಯೇ ಹಣಾಹಣಿ ನಡೆಯುತ್ತದೆ. ರಾಜ್ಯದಲ್ಲಿ ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದ್ದರೂ ಜಿಲ್ಲೆಯಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರಿಗೆ ಇನ್ನೂ ಮೈತ್ರಿ ಆಗಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗೆ ಜೆಡಿಎಸ್‌ನ ಮತಗಳು ಬೀಳುವುದೇ ಎಂಬ ಪ್ರಶ್ನೆ ಕಾಂಗ್ರೆಸ್‌ ಮುಖಂಡರನ್ನು ಕಾಡುತ್ತಿದೆ.

English summary
Days are coming near for Lokasabha election. In Mysuru – Kodagu constituency congress – jds party leaders are not much friendly in relationship. Will congress get JDS votes in this election?
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X