ಸಾಂಸ್ಕೃತಿಕ ನಗರಿಯಲ್ಲಿ ಅದ್ಧೂರಿ ಭಗೀರಥ ಜಯಂತಿ ಆಚರಣೆ
ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಭಗೀರಥ ಜಯಂತ್ಯೋತ್ಸವ ಸಮಿತಿ ವತಿಯಿಂದ ಇಂದು ಭಗೀರಥ ಜಯಂತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಮೈಸೂರು, ಮೇ 2 : ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಭಗೀರಥ ಜಯಂತ್ಯೋತ್ಸವ ಸಮಿತಿ ವತಿಯಿಂದ ಇಂದು ಭಗೀರಥ ಜಯಂತಿಯ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಎದುರು ಮೆರವಣಿಗೆಗೆ ಶಾಸಕ ಎಂ.ಕೆ.ಸೋಮಶೇಖರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಭಗೀರಥರು ಗಂಗೆಯನ್ನೇ ಧರೆಗೆ ತಂದವರು. ಅವರ ಜಯಂತಿಯನ್ನು ಸರ್ಕಾರದ ವತಿಯಿಂದ ಮೂರನೇ ಬಾರಿ ಆಚರಣೆ ಮಾಡುತ್ತಿದ್ದೇವೆ. ಅವರ ಜೀವನದ ಮಹತ್ವವನ್ನು ಇಂದಿನ ಯುವ ಪೀಳಿಗೆಗೆ ಸಾರಬೇಕಿದೆ ಹಾಗೂ ಪಾಲನೆ ಮಾಡಲು ತಿಳಿಸಬೇಕಾಗಿದೆ ಎಂದರು.[ಮೈಸೂರು ಪಾಲಿಕೆ ಸದಸ್ಯರ ಕರೆ ಕಡಿತಕ್ಕೆ ಮೇಯರ್ ಗರಂ]

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಮಹಾನಗರ ಪಾಲಿಕೆಯ ಉಪ ಆಯುಕ್ತ ಎ.ಟಿ.ಸೋಮಶೇಖರ್, ಮೈಸೂರು ಹಾಗೂ ಚಾಮರಾಜನಗರ ಭಾಗಗಳಲ್ಲಿ ಭಗೀರಥ ಸಮುದಾಯ ತೀರಾ ಹಿಂದುಳಿದಿದೆ. ಚಾಮರಾಜನಗರದಲ್ಲಿ ಬಾಲ್ಯವಿವಾಹ ಹೆಚ್ಚಾಗಿದ್ದು ಸಮುದಾಯದ ಹೆಣ್ಣು ಮಕ್ಕಳೇ ಹೆಚ್ಚಾಗಿ ಬಾಲ್ಯವಿವಾಹಕ್ಕೆ ಗುರಿಯಾಗುತ್ತಿದ್ದಾರೆ ಎಂಬ ಮಾಹಿತಿ ನೀಡಿದರು.[ಈಶ್ವರಪ್ಪಗೆ ಟಾಂಗ್, ಶ್ರೀನಿವಾಸ್ ಪ್ರಸಾದ್ ಗೆ ಉಪಾಧ್ಯಕ್ಷ ಪಟ್ಟ ಕಟ್ಟಿದ ಬಿಎಸ್ವೈ]

ಸಮುದಾಯದಲ್ಲಿ ಸಾಕ್ಷರತೆ ಕೆಳಮಟ್ಟದಲ್ಲಿದ್ದು ಬಡತನ ತಾಂಡವವಾಡುತ್ತಿದೆ. ಹಾಗಾಗಿ ಸಮುದಾಯವನ್ನು ಸಮಾಜದ ಮುಖ್ಯ ವಾಹಿನಿಗೆ ತರಲು ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ವಿಶೇಷ ಹೌಸಿಂಗ್ ಸ್ಕೀಂ ಜಾರಿ ಮಾಡಿ ಉಪ್ಪಾರರನ್ನು ಗುಡಿಸಲು ಮುಕ್ತರನ್ನಾಗಿಸಬೇಕು. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.












Click it and Unblock the Notifications