ಮೈಸೂರಿನಲ್ಲಿ ಮಾವೋವಾದಿಗಳಿಗೆ ಶೋಧ ಆರಂಭ
ಮೈಸೂರು, ನ. 15: ಮೈಸೂರಿನ ಎಚ್.ಡಿ. ಕೋಟೆ ಹತ್ತಿರದ ಕರ್ನಾಟಕ-ಕೇರಳ ಗಡಿಯಲ್ಲಿ ಪೊಲೀಸ್ ಪಹರೆ ಬಿಗಿಗೊಳಿಸಲಾಗಿತೆ. ನಾಲ್ವರು ಶಸ್ತ್ರ ಸಜ್ಜಿತ ಮಾವೋವಾದಿಗಳು ಕೇರಳ ಪೊಲೀಸರಿಂದ ತಪ್ಪಿಸಿಕೊಳ್ಳಲು ಕರ್ನಾಟಕದ ಅರಣ್ಯ ಪ್ರದೇಶಕ್ಕೆ ನುಸುಳಲು ಯತ್ನಿಸುತ್ತಿದ್ದಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.
ಮೈಸೂರಿನಿಂದ 20 ಸದಸ್ಯರ ಕಮಾಂಡೋ ತಂಡ ಬಂದಿದ್ದು, ಎರಡು ದಿನಗಳ ಶೋಧ ಕಾರ್ಯ ಆರಂಭಿಸಿದ್ದಾರೆ. ಬಾವಳಿ ಚೆಕ್ ಪೋಸ್ಟ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಬಾವಳಿ, ಡಿ.ಬಿ. ಕುಪ್ಪೆ, ಮಚೂರ್, ಕಡೆಗಡ್ಡೆ ಸೇರಿದಂತೆ ಇತರ ಜನವಸತಿ ಪ್ರದೇಶಗಳಲ್ಲಿ ಮಾವೋವಾದಿಗಳು ಆಶ್ರಯ ಪಡೆಯದಂತೆ ಎಚ್ಚರ ವಹಿಸಲಾಗಿದೆ. [ನಕ್ಸಲ್ ವಿರುದ್ಧ ಕಾರ್ಯಾಚರಣೆಗೆ ಮಹಿಳಾ ಪಡೆ]

ಕರಪತ್ರ ಹಂಚಿದರು: ಕರ್ನಾಟಕದ ಬಾವಳಿ ಚೆಕ್ ಪೋಸ್ಟ್‌ನಿಂದ 30 ಕಿ.ಮೀ. ದೂರದ ತಿರುನೆಲ್ಲಿ ಪ್ರದೇಶದಲ್ಲಿರುವ ಖಾಸಗಿ ಪ್ರವಾಸಿ ರೆಸಾರ್ಟ್ ಪ್ರದೇಶದ ಮೇಲೆ ಮಾವೋವಾದಿಗಳು ದಾಳಿ ನಡೆಸಿದ್ದರು. ಅಲ್ಲದೆ, ಸಿಪಿಐ (ಮಾವೋವಾದಿ) ಸ್ಥಾಪನೆಯ 10ನೇ ವರ್ಷಾಚರಣೆಯಲ್ಲಿ ಭಾಗವಹಿಸುವಂತೆ ಕರಪತ್ರಗಳನ್ನು ಹಂಚಿ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ನಕ್ಸಲೀಯರ ಬಂಧನಕ್ಕೆ ಕಾರ್ಯಾಚರಣೆ ಆರಂಭಿಸಿದೆ. [ತುಮಕೂರಿನತ್ತ ಹೆಜ್ಜೆ ಹಾಕಿದ ನಕ್ಸಲರು]
ಕೇರಳದ ವಯನಾಡು ಅರಣ್ಯ ಪ್ರದೇಶದದಿಂದ ಕರ್ನಾಟಕ ಅರಣ್ಯ ಪ್ರದೇಶಕ್ಕೆ ನಕ್ಸಲೀಯರು ಸುಲಭವಾಗಿ ಪಾರಾಗಬಹುದು. ಆದ್ದರಿಂದ ವಯನಾಡು ಪ್ರದೇಶದಲ್ಲಿ ವಿಶೇಷ ಥಂಡರ್‌ಬೋಲ್ಟ್ ಕಮಾಂಡೋಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಕರ್ನಾಟಕ ಹಾಗೂ ಕೇರಳ ಪೊಲೀಸರು ನಿರಂತರ ಸಂಪರ್ಕದಲ್ಲಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.
-
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ












Click it and Unblock the Notifications