ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು ಬಿಷಪ್ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲು

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ನವೆಂಬರ್ 30: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಮೈಸೂರು ಪ್ರಾಂತ್ಯದ ಧರ್ಮಗುರು ಬಿಷಪ್ ಕೆ.ಎ.ವಿಲಿಯಂ ಹಾಗೂ ಇತರರ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪದ ಸುಳಿಯಲ್ಲಿ ಮೈಸೂರಿನ ಬಿಷಪ್; ತನಿಖೆಗೆ ಆಗ್ರಹಲೈಂಗಿಕ ದೌರ್ಜನ್ಯ ಆರೋಪದ ಸುಳಿಯಲ್ಲಿ ಮೈಸೂರಿನ ಬಿಷಪ್; ತನಿಖೆಗೆ ಆಗ್ರಹ

ಮೈಸೂರಿನ ಸಾಮಾಜಿಕ ಕಾರ್ಯಕರ್ತ ರಾಬರ್ಟ್ ರೊಸಾರಿಯೋ ಗುರುವಾರ ಬಿಷಪ್ ವಿಲಿಯಂ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿತರಾದ ಬಿಷಪ್ ಹಾಗೂ ಇತರರು ಅವರ ನಿವಾಸದಲ್ಲಿ ನೌಕರಿ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಮಾನಸಿಕ, ಲೈಂಗಿಕ ಕಿರುಕುಳ ನೀಡಿ ದೌರ್ಜನ್ಯವೆಸಗಿದ್ದಾರೆ. ಆ ಕಾರಣದಿಂದ ನೌಕರಿ ಬಿಟ್ಟು ಮಹಿಳೆ ಬೇರೆ ಕಡೆ ಕೆಲಸಕ್ಕೆ ಸೇರಿಕೊಂಡಿದ್ದು, ಆಕೆಗೆ ಬಿಷಪ್ ಬಗ್ಗೆ ಇನ್ನೂ ಹಲವು ವಿಷಯಗಳ ಕುರಿತು ಗೊತ್ತಿದ್ದ ಹಿನ್ನೆಲೆಯಲ್ಲಿ ಆಕೆಯನ್ನು ಅಪಹರಣ ಮಾಡಿ ತಮ್ಮ ವಿಚಾರ ಬಾಯಿ ಬಿಡದಂತೆ ಕೊಲೆ ಬೆದರಿಕೆ ಒಡ್ಡಿದ್ದಾರೆ. ಅದೇ ರೀತಿ ಹಲವು ಮಹಿಳೆಯರಿಗೂ ದೌರ್ಜನ್ಯವೆಸಗಿದ್ದು, ಕಿರುಕುಳ ನೀಡಿದ್ದಾರೆ ಎಂದು ರೊಸಾರಿಯೋ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

Complaint Against Mysuru Bishop For Sexual Harrassment

ಬಿಷಪ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಬಿಷಪ್ ನಿವಾಸದ ಎದುರು ಪ್ರತಿಭಟನೆಗಳು ಕೂಡ ನಡೆದಿದ್ದವು. ಅಲ್ಲದೇ ಈ ಬಗ್ಗೆ ಸುದ್ದಿಗೋಷ್ಠಿಯಲ್ಲೂ ಆರೋಪ-ಪ್ರತ್ಯಾರೋಪಗಳನ್ನು ಮಾಡಲಾಗಿತ್ತು. ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದ ಲಷ್ಕರ್ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

English summary
A complaint has been lodged at Lashkar police station against Bishop KA William of Mysuru and others for allegedly sexually assaulting woman
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X