ಚಂದನ್ ಶೆಟ್ಟಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು
ಮೈಸೂರು, ಆಗಸ್ಟ್ 28: ಕೋಲುಮಂಡೆ ಹಾಡಿನ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ rapper ಚಂದನ್ ಶೆಟ್ಟಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಕೋಲುಮಂಡೆ ಹಾಡನ್ನು ವಿಕೃತಗೊಳಿಸಿ ಅಪಮಾನ ಮಾಡಿದ ಆರೋಪದ ಮೇಲೆ ಚಂದನ್ ಶೆಟ್ಟಿ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಅಂತರಾಷ್ಟ್ರೀಯ ಕಂಸಾಳೆ ಮಹದೇವಯ್ಯ ಕಲಾಸಂಘದಿಂದ ಡಿಸಿಪಿ ಪ್ರಕಾಶ್ ಗೌಡ ಅವರಿಗೆ ದೂರು ಸಲ್ಲಿಕೆಯಾಗಿದೆ. ಕಂಸಾಳೆ ಕಲಾವಿದರಾದ ಕಂಸಾಳೆ ರವಿ ಎಂಬುವರು ದೂರು ನೀಡಿದ್ದಾರೆ.
ಕೋಲುಮಂಡೆ ಹಾಡಿಗೆ ಸಾಕಷ್ಟು ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕ್ಷಮೆ ಕೋರಿ ಮರು ಚಿತ್ರೀಕರಣ ಮಾಡುವುದಾಗಿ ಚಂದನ್ ಶೆಟ್ಟಿ ಹೇಳಿದ್ದರು. ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಂಸಾಳೆ ಕಲಾವಿದ, ಹಾಡನ್ನು ಮರು ಚಿತ್ರೀಕರಣವನ್ನೂ ಮಾಡಬಾರದೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಸೆನ್ಸಾರ್ ಮಂಡಳಿಗೂ ದೂರು ನೀಡಲು ಕಂಸಾಳೆ ಕಲಾವಿದರು ನಿರ್ಧರಿಸಿದ್ದಾರೆ.

ಚಂದನ್ ಶೆಟ್ಟಿ ವಿರುದ್ಧ ಈಗಾಗಲೇ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲೂ ದೂರು ದಾಖಲಾಗಿದೆ. ಭಜರಂಗದಳ ಮುಖಂಡ ತೇಜಸ್ ಗೌಡ ಅವರು ಚಂದನ್ ವಿರುದ್ಧ ದೂರು ದಾಖಲಿಸಿದ್ದು, ದೂರು ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದಾರೆ
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications