ಡಿಕೆ.ಶಿವಕುಮಾರ್ ಮೇಲೆ ಐಟಿ ದಾಳಿ ಖಂಡಿಸಿ ಬೀದಿಗಿಳಿದ ಕೈ ಕಾರ್ಯಕರ್ತರು
ಮೈಸೂರು, ಜೂನ್ 2 : ಕಾಂಗ್ರೆಸ್ ಪಕ್ಷದ ನಾಯಕರ ಜನಪ್ರಿಯತೆಯನ್ನು ಸಹಿಸಿಕೊಳ್ಳದ ಬಿಜೆಪಿ, ಶಾಸಕ ಡಿ.ಕೆ.ಶಿವಕುಮಾರ್ ಹಾಗೂ ಅವರ ಆಪ್ತರ ಮೇಲೆ ಸಿಬಿಐ, ಆದಾಯ ತೆರಿಗೆ ಅಧಿಕಾರಿಗಳ ಮೂಲಕ ದಾಳಿ ನಡೆಸಿ ವಿನಾಕಾರಣ ತೊಂದರೆ ನೀಡುತ್ತಿದೆ ಎಂದು ಆರೋಪಿಸಿ ಮೈಸೂರು ನಗರ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನಗರಾಧ್ಯಕ್ಷ ಆರ್.ಮೂರ್ತಿ ಮಾತನಾಡಿ, ಬಿಜೆಪಿಯ ಕೆಲವು ರಾಜಕಾರಣಿಗಳು ದ್ವೇಷದ ರಾಜಕಾರಣದ ಮೂಲಕ ಸಮಾಜವನ್ನು ಒಡೆಯುವ ಕೆಲಸಕ್ಕೆ ಮುಂದಾಗಿದ್ದು ಶಾಂತಿ ಸುವ್ಯವಸ್ಥೆಯನ್ನು ಕದಡುವ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಪಕ್ಷವು ಆದಾಯ ತೆರಿಗೆ ಇಲಾಖೆಯನ್ನು ರಾಜಕೀಯದ ದಾಳವಾಗಿ ಬಳಸುತ್ತಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರಂತಹ ದಕ್ಷ ಜನಪ್ರತಿನಿಧಿಗಳನ್ನು ಆದಾಯ ತೆರಿಗೆ ಇಲಾಖೆಯ ಮೂಲಕ ರಾಜಕೀಯವಾಗಿ ನಿಗ್ರಹಿಸಬಹುದು ಎನ್ನುವ ಭ್ರಮೆಯಿಂದ ಬಿಜೆಪಿ ನಾಯಕರು ಹೊರಬರಬೇಕು ಎಂದರು.












Click it and Unblock the Notifications