ಮೈಸೂರು ಪಾಲಿಕೆ ಅಸಮಾಧಾನದ ಬೆಂಕಿ: ಶಾಸಕ ತನ್ವೀರ್ ಆಪ್ತನಿಗೆ ನೋಟಿಸ್ ನೀಡಿದ ಕಾಂಗ್ರೆಸ್
ಮೈಸೂರು, ಮಾರ್ಚ್ 16: ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜತೆಗಿನ ದೋಸ್ತಿ ಬಳಿಕ "ಕೈ' ಪಾಳಯದಲ್ಲಿ ಭುಗಿಲೆದ್ದಿರುವ ಅಸಮಾಧಾನ ಇನ್ನೂ ಹೊಗೆಯಾಡುತ್ತಲೇ ಇದೆ. ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ವಿರುದ್ಧ ಶುರುವಾದ ಭಿನ್ನಮತ ಇದೀಗ ಅವರ ಆಪ್ತರ ಮೇಲೂ ಸ್ಪೋಟಿಸುತ್ತಿದೆ.
ಮೇಯರ್ ಚುನಾವಣೆ ಬಳಿಕ ಮೈಸೂರು ಕಾಂಗ್ರೆಸ್‌ನಲ್ಲಿ ನಡೆದ ರಾಜಕೀಯ ಬೆಳವಣಿಗೆ ವೇಳೆ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ಆರೋಪ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದ್ದಕ್ಕೆ ಶಾಸಕ ತನ್ವೀರ್ ಸೇಠ್ ಆಪ್ತನಿಗೆ ನಗರ ಕಾಂಗ್ರೆಸ್ ಅಧ್ಯಕ್ಷ ನೋಟಿಸ್ ಜಾರಿ ಮಾಡಿದ್ದಾರೆ.

ಎನ್.ಆರ್ ಕ್ಷೇತ್ರದ 8 ಮಂದಿಗೆ ನೋಟಿಸ್ ಜಾರಿ
ಶಾಸಕ ತನ್ವೀರ್ ಆಪ್ತ ಸೇರಿದಂತೆ ಎನ್.ಆರ್ ಕ್ಷೇತ್ರದ 8 ಮಂದಿಗೆ ನೋಟಿಸ್ ಜಾರಿಯಾಗಿದ್ದು, ನಿಮ್ಮ ಮೇಲೆ ಯಾಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ 7 ದಿನದ ಒಳಗೆ ಉತ್ತರ ನೀಡಿ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ಚುನಾವಣೆ ಮುಗಿದು ಒಂದು ತಿಂಗಳಾದರೂ ಕಾಂಗ್ರೆಸ್‌ನಲ್ಲಿ ಮಾತ್ರ ಒಳಜಗಳ ನಿಂತಂತೆ ಕಾಣದಿರುವುದು, ಕಾಂಗ್ರೆಸ್ ಒಳಜಗಳ ಬೂದಿ ಮುಚ್ಚಿದ ಕೆಂಡ ಎಂಬುದಕ್ಕೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.

ನೋಟಿಸ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿ
ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮೈತ್ರಿ ವಿಚಾರವಾಗಿ ತನ್ವೀರ್ ಪರಮಾಪ್ತನ ಮೇಲೆ ಕ್ರಮಕ್ಕೆ ಮುಂದಾಗಿರುವ ಮೈಸೂರು ನಗರ ಕಾಂಗ್ರೆಸ್ ಘಟಕ, ಅಧಿಕೃತವಾಗಿ ತನ್ವೀರ್ ಆಪ್ತ ಅಬ್ದುಲ್ ಖಾದರ್ ಶಾಹಿದ್‌ಗೆ ಕಾಂಗ್ರೆಸ್‌ನಿಂದ ನೋಟಿಸ್ ಜಾರಿ ಮಾಡಿದೆ. ಶಾಸಕ ತನ್ವೀರ್ ಬೆಂಬಲಿಗನಿಗೆ ನೋಟಿಸ್ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ ಅನ್ನುವ ಚರ್ಚೆ ಸಹ ಆರಂಭವಾಗಿರುವ ಹಿನ್ನೆಲೆಯಲ್ಲಿ, ನೋಟಿಸ್ ವಿಚಾರ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.

ಪಕ್ಷ ವಿರೋಧಿ ಚಟುವಟಿಕೆ
ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ ಅವರು ಎನ್.ಆರ್ ಕ್ಷೇತ್ರದ ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿರುವ ಅಬ್ದುಲ್ ಖಾದರ್ ಶಾಹಿದ್ ಇವರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಪಾಲಿಕೆ ಚುನಾವಣೆ ನಂತರ ಫೆ.26 ರಂದು ಶಾಸಕ ತನ್ವೀರ್ ಮನೆ ಮುಂದೆ ಪ್ರತಿಭಟನೆ ನಡೆದಿತ್ತು. ಆ ಪ್ರತಿಭಟನೆಯಲ್ಲಿ ನೀವು ಕೆಲ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸೇರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿರುತ್ತೀರಿ? ಇದು ಮಾಧ್ಯಮಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಭಿತ್ತರವಾಗಿರುತ್ತದೆ. ನಿಮ್ಮ ಪ್ರತಿಭಟನೆಯಿಂದ ಪಕ್ಷದ ಹಾಗೂ ನಾಯಕರ ಘನತೆಗೆ ಕುಂದು ಉಂಟಾಗಿರುತ್ತದೆ, ಇದು ಪಕ್ಷ ವಿರೋಧಿ ಚಟುವಟಿಕೆಯಾಗಿರುತ್ತದೆ.

ಮೈತ್ರಿ ವಿಷಯದಲ್ಲಿ ದೊಡ್ಡವರ ನಡುವೆ ಶುರುವಾದ ಜಗಳ
ಈ ಕಾರಣದಿಂದ ಕೆಪಿಸಿಸಿ ಸೂಚನೆ ಮೇರೆಗೆ ನಿಮ್ಮ ಮೇಲೆ ಏಕೆ ಕ್ರಮ ಕೈಗೊಳ್ಳಬಾರದು ಎಂಬುದಕ್ಕೆ ಉತ್ತರ ನೀಡಿ, ಈ ನೋಟಿಸ್ ತಲುಪಿದ 7 ದಿನದ ಒಳಗೆ ಉತ್ತರ ನೀಡಿ ಎಂದು ನೋಟಿಸ್ ನೀಡಲಾಗಿದೆ. ಅಬ್ದುಲ್ ಖಾದರ್ ಸೇರಿದಂತೆ 8 ಮಂದಿಗೆ ನೋಟಿಸ್ ಜಾರಿಯಾಗಿದ್ದು, ಪ್ರತ್ಯೇಕವಾಗಿ ಅಬ್ದುಲ್ ಖಾದರ್ ಶಾಹಿದ್ ಹೆಸರಿಗೆ ನೋಟಿಸ್ ನೀಡಿರುವ ನಗರ ಕಾಂಗ್ರೆಸ್ ಅಧ್ಯಕ್ಷ, 8 ಮಂದಿಗೂ ಪ್ರತ್ಯೇಕ ನೋಟಿಸ್ ನೀಡಲಾಗಿದೆ. ನಗರ ಕಾಂಗ್ರೆಸ್‌ನಲ್ಲಿ ನಡೆದ ಈ ದಿಢೀರ್ ಬೆಳವಣಿಗೆ ಶಾಸಕ ತನ್ವೀರ್ ಸೇಠ್ ಆಪ್ತರು ಹಾಗೂ ಎನ್.ಆರ್. ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಅಚ್ಚರಿಗೆ ಕಾರಣವಾಗಿದೆ. ಅಲ್ಲದೇ ಮೈತ್ರಿ ವಿಷಯದಲ್ಲಿ ದೊಡ್ಡವರ ನಡುವೆ ಶುರುವಾದ ಜಗಳಕ್ಕೆ ಕಿರಿಯರ ಮೇಲೆ ಕ್ರಮಕ್ಕೆ ಮುಂದಾಗಿರುವುದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
-
Cabinet Reshuffle: ಶಾಸಕರ ದೆಹಲಿಗೆ ಭೇಟಿ ತಪ್ಪಿಲ್ಲ, ಸಂಪುಟ ಪುನರ್ರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಿದ್ದರಾಮಯ್ಯ -
ಮೂರು ವರ್ಷ ಮುಗಿದಿದೆ, ಸಚಿವ ಸಂಪುಟ ಬದಲಿಸಿ: ಹೈಕಮಾಂಡ್ಗೆ ಮನವಿ ಸಲ್ಲಿಸಲು ಟಿ.ಬಿ.ಜಯಚಂದ್ರ ಸಜ್ಜು -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ












Click it and Unblock the Notifications