ಡಿಸಿ ಕೆಲಸಕ್ಕೆ ಅಡ್ಡಿಪಡಿಸಿದ ಮರೀಗೌಡರಿಗೆ ಬಂಧನ ಭೀತಿ
ಮೈಸೂರು, ಜುಲೈ 07 : ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಏಕವಚನದಲ್ಲಿ ಅವರನ್ನು ನಿಂದಿಸಿದ ಆರೋಪವನ್ನು ಮರೀಗೌಡ ಎದುರಿಸುತ್ತಿದ್ದಾರೆ.
ಬುಧವಾರ ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಮುಖಂಡ ಕೆ.ಮರೀಗೌಡ ಅವರು ತಮ್ಮ ವಕೀಲರ ಮೂಲಕ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ಈ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ. ['ಹಾಳಾಗಿ ಹೋಗ್ತೀಯಾ' ಸಿಎಂಗೆ ಕೊಳ್ಳೇಗಾಲದ ವ್ಯಕ್ತಿಯಿಂದ ಶಾಪ]

ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಮರೀಗೌಡ ವಿರುದ್ಧ ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೇವರಾಜ ಉಪವಿಭಾಗದ ಎಸಿಪಿ ರಾಜಶೇಖರ್ ಅವರು ಪ್ರಕರಣದ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದು, ಬುಧವಾರದಿಂದ ತನಿಖೆ ಆರಂಭಗೊಂಡಿದೆ. ['ಎಸಿ ಕೊಠಡಿಗಳಿಂದ ಹೊರಬಂದು ಹಳ್ಳಿಗಳಿಗೆ ಹೋಗಿ']
ಸಿ.ಸಿಖಾ ಅವರ ಕಾರು ಚಾಲಕ ಶಿವು ಹಾಗೂ ಭದ್ರತಾ ಸಿಬ್ಬಂದಿ ಸತ್ಯವೇಲು ಅವರನ್ನು ಬುಧವಾರ ವಿಚಾರಣೆ ನಡೆಸಲಾಗಿದೆ. ನಜರಬಾದ್ ಠಾಣೆಯಲ್ಲಿ ವಿಚಾರಣೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಹೇಳಿಕೆಗಳನ್ನು ದಾಖಲು ಮಾಡಿಕೊಳ್ಳಲಾಗಿದೆ.
ತಮ್ಮ ವಿರುದ್ಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗುತ್ತಿದ್ದಂತೆ ಮರೀಗೌಡ ಅವರು ತಲೆಮರೆಸಿಕೊಂಡಿದ್ದಾರೆ. ಅವರ ಬಂಧನಕ್ಕಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಜುಲೈ 7ರಂದು ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಆಗಿದ್ದೇನು? : ಜುಲೈ 3ರ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಫ್ತಾರ್ ಕೂಟದಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿದ್ದರು. ಶಿಷ್ಟಾಚಾರದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಸರ್ಕಾರಿ ಅತಿಥಿ ಗೃಹದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಂಡಿದ್ದರು.
ಆಗ ಅಲ್ಲಿಗೆ ಆಗಮಿಸಿದ್ದ ಕೆ.ಮರೀಗೌಡ ಅವರು ಯಾದಗಿರಿ ಉಪ ವಿಭಾಗಾಧಿಕಾರಿಯಾಗಿ ಬಡ್ತಿ ಹೊಂದಿ, ವರ್ಗಾವಣೆಯಾಗಿರುವ ನವೀನ್ ಜೋಸೆಫ್ ಅವರನ್ನು ತಹಶೀಲ್ದಾರ್ ಏಕೆ ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದರು.
ನಂತರ ಅತಿಥಿಗೃಹದಿಂದ ಹೊರಟ ಜಿಲ್ಲಾಧಿಕಾರಿ ಸಿ.ಸಿಖಾ ಅವರನ್ನು ಏಕವಚನದಲ್ಲಿ ಮರೀಗೌಡ ಅವರು ನಿಂದಿಸಿದ್ದರು. ಮರೀಗೌಡ ಅವರ ಬೆಂಬಲಿಗರು ಜಿಲ್ಲಾಧಿಕಾರಿ ವಿರುದ್ಧ ಘೋಷಣೆ ಕೂಗಿ, ಕಾರು ಅಡ್ಡಹಾಕಿದ್ದರು. ಈ ಬಗ್ಗೆ ಸಿಖಾ ಅವರು ಪೊಲೀಸರಿಗೆ ದೂರು ಕೊಟ್ಟಿದ್ದಾರೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications