ಸುಳ್ಳು ಮೀಸಲಾತಿ ಘೋಷಿಸಿ ಮೋಸ ಮಾಡಿದ್ದು ಯಾಕೆ?: ಬಿಜೆಪಿಗೆ ಕಾಂಗ್ರೆಸ್‌ ನಾಯಕರ ಸಾಲು ಸಾಲು ಪ್ರಶ್ನೆ

ಮೈಸೂರು, ಏಪ್ರಿಲ್‌ 26: ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮಹಾ ಮೋಸ ಮತ್ತೊಮ್ಮೆ ಬಯಲಾಗಿದೆ ಎಂದು ರಣದೀಪ್ ಸಿಂಗ್ ಸರ್ಜೇವಾಲ ಹಾಗೂ ಡಿ.ಕೆ ಶಿವಕುಮಾರ್ ಜಂಟಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಬಸವರಾಜ ಬೊಮ್ಮಾಯಿ ಸರ್ಕಾರ ತನ್ನ ಮೀಸಲಾತಿ ಹೆಚ್ಚಳ ಆದೇಶ ಸಮರ್ಥಿಸಿಕೊಳ್ಳಲು ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಆ ಮೂಲಕ ಮೀಸಲಾತಿ ವಿಚಾರದಲ್ಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಸಮುದಾಯಗಳಿಗೆ ದ್ರೋಹ ಬಗೆದಿದೆ, ಅಪಮಾನ ಮಾಡಿದೆ ಎಂದು ಕಾಂಗ್ರೆಸ್‌ ನಾಯಕರು ಆರೋಪಿಸಿದ್ದಾರೆ.

Congress Leader Outrage Against BJP Government On Reservation

ಬೊಮ್ಮಾಯಿ ಸರ್ಕಾರ 2002ರಲ್ಲಿ ಜಾರಿಗೆ ತಂದಿದ್ದ ಮೀಸಲಾತಿಯನ್ನು ಮರು ಜಾರಿ ಮಾಡುವುದಾಗಿ ಕೋರ್ಟ್‌ನಲ್ಲಿ ತಿಳಿಸಿದೆ. ಆಮೂಲಕ ಒಕ್ಕಲಿಗರು 3ಎ ಹಾಗೂ ಲಿಂಗಾಯತರು 3ಬಿ ವರ್ಗೀಕರಣದಲ್ಲಿ ಮುಂದುವರಿಯಲಿದ್ದಾರೆ. ಬೊಮ್ಮಾಯಿ ಸರ್ಕಾರ ಆದೇಶದಂತೆ ಹೆಚ್ಚುವರಿ 2% ಮೀಸಲಾತಿ ಸಿಗುವುದಿಲ್ಲ. ಏ.25, 2023ರಂದು ಸುಪ್ರೀಂ ಕೋರ್ಟ್‌ನಲ್ಲಿ ಸಾಲಿಸಿಟರ್ ಜನರಲ್ ಮೂಲಕ, ಮಾರ್ಚ್ 27, 2023ರಂದು ತಾನು ಹೊರಡಿಸಿದ್ದ ಮೀಸಲಾತಿ ಹೆಚ್ಚಳ ಆದೇಶಕ್ಕೆ ತಾನೇ ತಡೆ ಹಿಡಿದಿದ್ದು, ಕ್ಷಮಿಸಲಾರದ ಪಾಪ ಎಸಗಿದೆ ಎಂದು ಕಿಡಿಕಾರಿದ್ದಾರೆ.

ಆ ಮೂಲಕ ಕಾಂಗ್ರೆಸ್ ಪಕ್ಷ ಹೇಳಿದ್ದ ಮಾತು ನಿಜವಾಗಿದೆ. ಬೊಮ್ಮಾಯಿ ಹಾಗೂ ಮೋದಿ ನೇತೃತ್ವದ ಬಿಜೆಪಿ ಡಬಲ್ ಇಂಜಿನ್ ಸರ್ಕಾರಗಳು ಈ ಸಮುದಾಯಗಳಿಗೆ ಡಬಲ್ ದ್ರೋಹ ಬಗೆದಿವೆ. ದ್ರೋಹ ಬಗೆವ ಬಿಜೆಪಿ ಸರ್ಕಾರದ ಮೂಲ ಉದ್ದೇಶ, ಚುನಾವಣೆ ಸಮಯದಲ್ಲಿ ಮೀಸಲಾತಿ ಹೆಚ್ಚಳ ಹೆಸರಿನಲ್ಲಿ ಈ ಸಮುದಾಯಗಳಿಗೆ ಲಾಲಿಪಾಪ್ ಕೊಟ್ಟು ಯಾಮಾರಿಸುವ ಪ್ರಯತ್ನ ನಡೆದಿದೆ. ಅಂತಿಮವಾಗಿ ಈ ಮೀಸಲಾತಿ ಹೆಚ್ಚಳ ವಿಚಾರ ಕಾನೂನು ಕಟಕಟೆಯಲ್ಲಿ ನಿಂತು ಯಾರಿಗೂ ಮೀಸಲಾತಿ ಸಿಗಬಾರದು, ಮೀಸಲಾತಿ ಹೆಸರಿನಲ್ಲಿ ಮತ ಬ್ಯಾಂಕ್ ರಾಜಕಾರಣ ಮಾಡುವ ಷಡ್ಯಂತ್ರ ರೂಪಿಸಿದೆ. ಈ ಷಡ್ಯಂತ್ರ ಸುಪ್ರೀಂ ಕೋರ್ಟ್ನಲ್ಲಿ ಬಟಾಬಯಲಾಗಿದೆ ಎಂದಿದ್ದಾರೆ.

Congress Leader Outrage Against BJP Government On Reservation

ಮುಸ್ಲಿಂ ಮೀಸಲಾತಿ ರದ್ದು ನಿರ್ಧಾರಕ್ಕೆ ಸುಪ್ರೀಂ ಕೋರ್ಟ್‌ ತಡೆಯ ಪರಿಣಾಮಗಳು

1. ಲಿಂಗಾಯತರ ಮೀಸಲಾತಿ ವರ್ಗೀಕರಣ 2ಡಿಯಿಂದ 3ಬಿಗೆ ಮರಳಿದೆ.

2. ಲಿಂಗಾಯತರಿಗೆ ನೀಡಲಾಗಿದ್ದ 2% ಹೆಚ್ಚುವರಿ ಮೀಸಲಾತಿ ಹಿಂಪಡೆದಂತಾಗಿದೆ.

3. ಒಕ್ಕಲಿಗರ ಮೀಸಲಾತಿ ವರ್ಗೀಕರಣ 2ಸಿಯಿಂದ 3ಎಗೆ ಮರಳಿದೆ.

4. ಒಕ್ಕಲಿಗರಿಗೆ ನೀಡಲಾಗಿದ್ದ 2% ಹೆಚ್ಚುವರಿ ಮೀಸಲಾತಿ ಹಿಂಪಡೆದಂತಾಗಿದೆ.

5. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೀಸಲಾತಿ ಹೆಚ್ಚಳವನ್ನು ಕೇಂದ್ರ ಸರ್ಕಾರ ಮಾರ್ಚ್ 14, 2023ರಂದು ಸಂಸತ್ತಿನಲ್ಲಿ ನಿರಾಕರಿಸಿದೆ.

6. ಒಟ್ಟಾರೆ ಇದೆಲ್ಲದರ ಫಲ ಯಾರಿಗೂ ಯಾವುದೇ ಮೀಸಲಾತಿ ಸಿಗದೆ ಎಲ್ಲರಿಗೂ ವಂಚನೆ ಮಾಡಲಾಗಿದೆ.

7. ಬೊಮ್ಮಾಯಿ ಸರ್ಕಾರ 2002 ಅಕ್ಟೋಬರ್ 30ರಂದು ಜಾರಿ ಮಾಡಲಾಗಿದ್ದ ಮೀಸಲಾತಿಯನ್ನು ಮರುಜಾರಿಗೆ ತಂದಿದೆ ಎಂದು ಕಾಂಗ್ರೆಸ್‌ ನಾಯಕರು ವಿವರಿಸಿದ್ದಾರೆ.

ಇನ್ನು ರಣದೀಪ್ ಸಿಂಗ್ ಸರ್ಜೇವಾಲ ಹಾಗೂ ಡಿ.ಕೆ ಶಿವಕುಮಾರ್ ಹೊರಡಿಸಿರುವ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಒಂಬತ್ತು ಪ್ರಶ್ನೆಗಳನ್ನು ಕೇಳಲಾಗಿದ್ದು, ಪಿಎಂ ಹಾಗೂ ಸಿಎಂ ಉತ್ತರಿಸಲಿ ಎಂದು ಕಾಂಗ್ರೆಸ್‌ ನಾಯಕರು ಒತ್ತಾಯಿಸಿದ್ದಾರೆ.

1. ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಸುಳ್ಳಿನ ಮೀಸಲಾತಿ ಘೋಷಿಸಿ ಮೋಸ ಮಾಡಿದ್ದು ಯಾಕೆ?

2. ಸರ್ಕಾರ ತನ್ನ ಮೀಸಲಾತಿ ಹೆಚ್ಚಳ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಳ್ಳುತ್ತಿಲ್ಲ ಯಾಕೆ?

3. ಮೀಸಲಾತಿ ಪ್ರಕರಣದಲ್ಲಿ ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡವಿಟ್ ಸಲ್ಲಿಸಿಲ್ಲ ಯಾಕೆ?

4. ಮಾರ್ಚ್ 14, 2023ರಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳವನ್ನು ನಿರಾಕರಿಸಿದ್ದು ಯಾಕೆ?

5. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳ ಕಾನೂನನ್ನು ಸಂವಿಧಾನದ 9ನೇ ಶೆಡ್ಯೂಲ್‌ನಲ್ಲಿ ಸೇರಿಸಲಿಲ್ಲ ಏಕೆ?

6. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು, ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗಗಳು ಹಾಗೂ ಇತರ ಸಮುದಾಯಗಳು ಮೀಸಲಾತಿ ಹೆಚ್ಚಳ ಬೇಡಿಕೆ ಇಟ್ಟಿದ್ದು, ಇವರ ಆಶೋತ್ತರ ಈಡೇರಿಸಲು 50% ಇರುವ ಮೀಸಲಾತಿ ಮಿತಿ ವಿಸ್ತರಣೆ ಮಾಡಲು ನಿರಾಕರಿಸುತ್ತಿರುವುದು ಏಕೆ?

7. ಚುನಾವಣೆ ಸಮಯದಲ್ಲಿ ಸಮಾಜ ಒಡೆದು ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರನ್ನು ಗುರಿ ಮಾಡುತ್ತಿರುವುದೇಕೆ?

8. ಮೀಸಲಾತಿ ಹೆಚ್ಚಳ ನಿರ್ಧಾರವನ್ನು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಹೇಳಿಕೆ ಮೂಲಕ ತಡೆ ನೀಡಿರುವುದೇಕೆ?

9. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು, ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿಚಾರದಲ್ಲಿ ಆಗಿರುವ ಮೋಸಕ್ಕೆ ಪ್ರಧಾನಿ ಮೋದಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳುವರೆ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ ಇಷ್ಟೆಲ್ಲಾ ದ್ರೋಹ ಬಗೆದಿರುವ ಬಿಜೆಪಿಗೆ ರಾಜ್ಯದ ಮತದಾರರು 40ಕ್ಕಿಂತ ಹೆಚ್ಚಿನ ಸೀಟು ನೀಡುವುದಿಲ್ಲ ಎಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+