ಸಿದ್ದರಾಮಯ್ಯ ಆಪ್ತ ಮರೀಗೌಡ ಕಾಂಗ್ರೆಸ್‌ನಿಂದ ಅಮಾನತು
ಮೈಸೂರು, ಜುಲೈ 23 : ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಎದುರಿಸುತ್ತಿರುವ ಸಿದ್ದರಾಮಯ್ಯ ಪರಮಾಪ್ತ ಕೆ.ಮರೀಗೌಡ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತು ಮಾಡಲಾಗುತ್ತದೆ. ಬಂಧನ ಭೀತಿಯಲ್ಲಿರುವ ಮರೀಗೌಡ ಅವರು ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಶನಿವಾರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಈ ಕುರಿತು ಮಾಹಿತಿ ನೀಡಿದರು. 'ಕೆ.ಮರೀಗೌಡ ಅವರನ್ನು ಪಕ್ಷದಿಂದ ಅಮಾನತು ಮಾಡಲು ಈಗಾಗಲೇ ನಿರ್ಧಾರವನ್ನು ಕೈಗೊಳ್ಳಲಾಗಿದೆ' ಎಂದು ಹೇಳಿದರು. ['ಸಿದ್ದರಾಮಯ್ಯ ಬಯಸಿದರೆ 24 ಗಂಟೆಯಲ್ಲಿ ಮರೀಗೌಡ ಬಂಧನ']

'ಕೆ.ಮರೀಗೌಡ ಅವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೇರೆ-ಬೇರೆ ಸ್ಥಳಗಳಲ್ಲಿ ಅವರ ಮೊಬೈಲ್ ಲೊಕೇಷನ್‌ಗಳು ಪತ್ತೆಯಾಗಿವೆ. ಶೀಘ್ರದಲ್ಲೇ ಅವರನ್ನು ಬಂಧಿಸಲಾಗುತ್ತದೆ' ಎಂದು ತಿಳಿಸಿದರು.[ಮರಿಗೌಡನ ಬಂಧನಕ್ಕಾಗಿ ಮೈಸೂರಲ್ಲಿ ಹಾರಿತು ಗಾಳಿಪಟ!]
ಮರೀಗೌಡ ಯಾರು? : ಕಾಂಗ್ರೆಸ್ ನಾಯಕ ಮತ್ತು ಮೈಸೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ಮರೀಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರಮಾಪ್ತ. ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪವನ್ನು ಮರೀಗೌಡ ಎದುರಿಸುತ್ತಿದ್ದಾರೆ.[ಜಿಲ್ಲಾಧಿಕಾರಿಗೆ ಧಮ್ಕಿ, ಸಿದ್ದರಾಮಯ್ಯ ಮೌನವೇಕೆ?]
ಸಿ.ಶಿಖಾ ಅವರು ನಜರಬಾದ್ ಠಾಣೆಯಲ್ಲಿ ಮರೀಗೌಡ ವಿರುದ್ಧ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ತಲೆ ಮರೆಸಿಕೊಂಡಿರುವ ಮರೀಗೌಡ ಅವರು ನಿರೀಕ್ಷಣಾ ಜಾಮೀನು ಪಡೆಯಲು ಸಲ್ಲಿಸಿದ್ದ ಅರ್ಜಿಯನ್ನು ಮೈಸೂರು ಜೆಎಂಎಫ್‌ಸಿ ಕೋರ್ಟ್ ರದ್ದುಗೊಳಿಸಿದೆ. ಕರ್ನಾಟಕ ಹೈಕೋರ್ಟ್ ಅರ್ಜಿಯ ವಿಚಾರಣೆಯನ್ನು ಮುಂದೂಡಿದೆ.












Click it and Unblock the Notifications