ನಂಜನಗೂಡು ಉಪಚುನಾವಣೆಗೆ 'ಕೈ'ಗೆ ಅಭ್ಯರ್ಥಿ ಸಿಕ್ಕಿ ಬಿಟ್ರಾ?
ನಂಜನಗೂಡು ಉಪಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಹುಡುಕಾಟದಲ್ಲಿ ತೊಡಗಿದೆ. ಮತ್ತೊಂದು ಕಡೆ ಜೆಡಿಎಸ್ ಮುಖಂಡ ಕಳಲೆ ಕೇಶವಮೂರ್ತಿ ಅವರಿಗೆ ಗಾಳ ಹಾಕಿದೆ ಎಂದು ತಿಳಿದು ಬಂದಿದೆ.
ಮೈಸೂರು, ಜನವರಿ. 17 : ನಂಜನಗೂಡು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಎನ್ನುವುದು ಖಚಿತವಾಗಿದೆ. ಆದರೆ, ಕಾಂಗ್ರೆಸ್ ನಲ್ಲಿ ಮಾತ್ರ ಇನ್ನೂ ಕೂಡ ಗೊಂದಲ ಮುಂದುವರೆದಿದೆ.
ಡಾ.ಹೆಚ್.ಎಸ್.ಮಹದೇವಪ್ಪರಾಗಲೀ, ಅವರ ಪುತ್ರ ಸುನೀಲ್ ಬೋಸ್ ಆಗಲೀ ಕಣಕ್ಕಿಳಿಯಲು ಮುಂದಾಗುತ್ತಿಲ್ಲ. ಸದ್ಯದ ಮಟ್ಟಿಗೆ ಶ್ರೀನಿವಾಸಪ್ರಸಾದ್ ಅವರ ಎದುರು ನಿಂತು ಚುನಾವಣೆ ಎದುರಿಸಲು ಕೆಲವು ನಾಯಕರು ಹಿಂದೇಟು ಹಾಕುತ್ತಿದ್ದಾರೆ.
ಇದೊಂದು ರೀತಿಯಲ್ಲಿ ಕಾಂಗ್ರೆಸ್ ಗೆ ನುಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಒಂದು ಕಡೆ ಪ್ರತಿಷ್ಠೆ ಮತ್ತೊಂದು ಕಡೆ ಗೆದ್ದೇ ತೀರಬೇಕೆನ್ನುವ ಹಠದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಲೆಬಿಸಿಯಾಗಿರುವುದಂತು ಸತ್ಯ.[ಗರಿಗೇದರಿದ ನಂಜನಗೂಡು ಉಪಚುನಾವಣಾ ರಣಕಣ]

ಈಗಿನ ಪರಿಸ್ಥಿತಿಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಲ್ಲಿ ಅಂತಹ ನಾಯಕರ ಕೊರತೆಯಿದೆ ಹಾಗಾಗಿಯೇ ಅನ್ಯ ಮಾರ್ಗವಿಲ್ಲದೆ ಇದೀಗ ಹಿಂದಿನ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪೈಪೋಟಿ ನೀಡಿದ್ದ ಜೆಡಿಎಸ್ ಪಕ್ಷದ ಮುಖಂಡ ಕಳಲೆ ಕೇಶವಮೂರ್ತಿ ಅವರಿಗೆ ಗಾಳ ಹಾಕಲಾಗಿದೆ.
ಅವರನ್ನು ಕಾಂಗ್ರೆಸ್ ತಮ್ಮ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಮುಂದಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ಕಾಂಗ್ರೆಸ್ ನ ಹಲವು ನಾಯಕರು ಸೇರಿದಂತೆ ಮುಖ್ಯಮಂತ್ರಿಗಳ ಆಪ್ತ ಸಲಹೆಗಾರ ನಿವೃತ್ತ ಪೊಲೀಸ್ ಅಧಿಕಾರಿ ಕೆಂಪಯ್ಯ ಅವರು ನಂಜನಗೂಡು ಕ್ಷೇತ್ರದಲ್ಲಿ ಈಗಾಗಲೇ ಸಮೀಕ್ಷೆ ಮಾಡಿದ್ದಾರೆ.
ಹಿಂದುಳಿದವರ ಮತ್ತು ವೀರಶೈವರ ಮತಗಳು ಹೆಚ್ಚಿರುವ ಕಾರಣ ಅದನ್ನು ಸೆಳೆಯುವ ಸಲುವಾಗಿ ಹಿಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳು ಪಡೆದ ಮತಗಳನ್ನು ಪರಿಶೀಲಿಸಿ ಅದರಲ್ಲಿ ಹೆಚ್ಚಿನ ಮತ ಪಡೆದಿದ್ದ ಜೆಡಿಎಸ್ ನ ಕಳಲೆ ಕೇಶವಮೂರ್ತಿ ಅವರನ್ನೇ ಕಾಂಗ್ರೆಸ್ ಗೆ ಸೇರ್ಪಡೆಗೊಳಿಸಿ ಬಳಿಕ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ನ ಅಭ್ಯರ್ಥಿಯಾಗಿ ಶ್ರೀನಿವಾಸ ಪ್ರಸಾದ್ ವಿರುದ್ಧ ಸ್ಪರ್ಧಿಸಲು ಕೇಶವಮೂರ್ತಿ ಅವರು ಕೂಡ ಒಪ್ಪಿದ್ದಾರೆ ಎನ್ನಲಾಗಿದೆ. ಇನ್ನೊಂದೆಡೆ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರಲ್ಲಿ ಕೇಶವಮೂರ್ತಿ ಬಗ್ಗೆ ಅಸಮಾಧಾನವಿದ್ದು ಅವರ ಮನವೊಲಿಸುವ ಪ್ರಯತ್ನ ಮಾಡಲಾಗಿದೆ.
ಮತ್ತೊಂದೆಡೆ ಬಿಜೆಪಿಯ ಕೆಲವು ನಾಯಕರ ಬೆಂಬಲವೂ ಕೇಶವಮೂರ್ತಿ ಅವರಿಗೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಕಾರಣ ತಳಮಟ್ಟದಿಂದ ಸಂಘಟನೆ ಮಾಡಿ ಪಕ್ಷವನ್ನು ಬೆಳೆಸಿದ್ದ ನಾಯಕರಿಗೆ ದಿಢೀರ್ ಮತ್ತೊಂದು ಪಕ್ಷದಿಂದ ಬಂದು ಸ್ಪರ್ಧಿಸಿ ಗೆಲುವು ಪಡೆಯುವ ನಾಯಕರ ವಿರುದ್ಧ ಅಸಮಾಧಾನವೂ ಇದೆ.
ಇದನ್ನು ಬಳಸಿಕೊಳ್ಳುವ ಪ್ರಯತ್ನವನ್ನು ಕಾಂಗ್ರೆಸ್ ಸಮರ್ಪಕವಾಗಿ ಮಾಡುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರು ಕೇಶವಮೂರ್ತಿ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಲು ಸಮ್ಮತಿ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಸದ್ಯ ತಲಾಸೆಯಲ್ಲಿದ್ದ ಕಾಂಗ್ರೆಸ್ ಗೆ ನಾಯಕ ಸಿಕ್ಕಿದ್ದು ಮುಂದಿನ ಬೆಳವಣಿಗೆಯನ್ನು ಕಾದು ನೋಡಬೇಕಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications