ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ನಮ್ಮದೇ: ಸಿಎಂ
ಮೈಸೂರು, ಡಿಸೆಂಬರ್, 12: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಗೆಲುವು ನಮ್ಮದಾಗುತ್ತದೆ ಎಂದು ಸ್ವಯಂ ಘೋಷಣೆ ಮಾಡಿದ್ದಾರೆ.
ಮೈಸೂರು ಜಿಲ್ಲೆಗೆ ಶುಕ್ರವಾರ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಲಿತ ಮಹಲ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿ, 'ಡಿಸೆಂಬರ್ 27ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಗೆ ಬಂಡಾಯ ಅಭ್ಯರ್ಥಿಗಳ ಮುಖಂಡರ ಜೊತೆ ಮಾತುಕತೆ ನಡೆಸಿದ್ದು, ನಾಮಪತ್ರ ಹಿಂಪಡೆಯುವಂತೆ ಮನವೊಲಿಕೆ ಮಾಡಲಾಗುತ್ತಿದೆ. ಬಿಜೆಪಿ, ಜೆಡಿಎಸ್ ಪಕ್ಷದ ಜೊತೆ ತೀವ್ರ ಸ್ಪರ್ಧೆ ಇದೆ. ಆದರೂ ಕಾಂಗ್ರೆಸ್ ಗೆ ಜಯ ಸಿಗಲಿದೆ' ಎಂದರು.[ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಟಿಕೆಟ್ ಪಡೆದವರ ಪಟ್ಟಿ]

ದೇಶಾದ್ಯಂತ ಭುಗಿಲೆದ್ದಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ ರಾಜಕೀಯ ಪ್ರೇರಿತವಾಗಿದೆ. ಈ ವಿಚಾರದಲ್ಲಿ ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಬಿಜೆಪಿ ಏಜೆಂಟ್ ರೀತಿ ಕೆಲಸ ಮಾಡುತ್ತಿದ್ದಾರೆ. ಹೆರಾಲ್ಡ್ ಪ್ರಕರಣದಲ್ಲಿ ಇಲ್ಲದಿರುವ ವಿವಾದ ಸೃಷ್ಟಿಸಲಾಗುತ್ತಿದೆ. ಇದು ರಾಜಕೀಯ ಕುತಂತ್ರ ಎಂದು ಕಿಡಿ ಕಾರಿದರು.[ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತ!]
ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಚುನಾವಣಾ ಮೀಸಲಾತಿ ಬಗ್ಗೆ ಚುನಾವಣಾ ಆಯೋಗದ ಕೆಲಸದೊಂದಿಗೆ ಯಾವುದೇ ಹಸ್ತಕ್ಷೇಪ ಮಾಡಿಲ್ಲ. ಬಿಜೆಪಿ ಪಕ್ಷದವರು ಸುಳ್ಳು ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ ಎಂದು ಬಿಜೆಪಿ ಪಕ್ಷದ ಕಾರ್ಯವೈಖರಿ ಮೇಲೆ ಅಸಮಾಧಾನ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ರಾಜ್ಯದ 20 ಜಿಲ್ಲೆಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಇತಿಹಾಸ ನಿರ್ಮಿಸಲು ಹೊರಟಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ ಮಾತಿಗೆ ಎಂಬ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಗೆ ಸ್ವಂತ ಶಕ್ತಿ ಮೇಲೆ ಚುನಾವಣೆ ಎದುರಿಸುವ ವಿಶ್ವಾಸವಿದೆ ಎಂದರು.












Click it and Unblock the Notifications