ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ: ಸಿದ್ದರಾಮಯ್ಯ
ಮೈಸೂರು, ಆಗಸ್ಟ್ 12: ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಮೈಸೂರಿನಲ್ಲಿ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು. ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು ಎಂದರು.

ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಅಗತ್ಯ. ಕೆಳ ನ್ಯಾಯಾಲಯಗಳಲ್ಲಿ ಮೀಸಲಾತಿ ಇದೆ. ಮೇಲ್ಮಟ್ಟದ ನ್ಯಾಯಾಲಯದಲ್ಲಿ ಮೀಸಲಾತಿ ಇಲ್ಲ. ಅಲ್ಲಿ ಮೀಸಲಾತಿ ಜಾರಿಯಾದರೆ ಹೆಚ್ಚು ಉಪಯುಕ್ತ ವಾದ ನ್ಯಾಯದಾನ ನೀಡಲು ಸಾಧ್ಯ. ಕಾನೂನಿನ ದೃಷ್ಟಿಯಲ್ಲಿ ಎಲ್ಲರೂ ಸಮಾನರು. ಸಂವಿಧಾನ ಬರುವ ಮುನ್ನ ಒಂದು ರೀತಿಯ ನ್ಯಾಯದಾನ ವ್ಯವಸ್ಥೆ ಇತ್ತು. ಸಂವಿಧಾನ ಬಂದ ನಂತರ ಭಿನ್ನವಾಗಿದೆ.
ಬ್ರಿಟಿಷರ ಕಾಲದಲ್ಲಿ ಹಾಗೂ ಸ್ವಾತಂತ್ರ್ಯ ದೊರೆತ ನಂತರ ಭಿನ್ನವಾಗಿದೆ. ಅದಕ್ಕೂ ಮುನ್ನ ರಾಜಮಹಾರಾಜರು ನ್ಯಾಯ ತೀರ್ಮಾನ ಮಾಡುತ್ತಿದ್ದರು. ಅವರ ತೀರ್ಮಾನ ಮನುವಾದದ ಮೇಲೆ ತೀರ್ಮಾನವಾಗುತ್ತಿದ್ದವು. ಜಾತಿ ವ್ಯವಸ್ಥೆ ಬಲವಾಗಿದ್ದುದರಿಂದ ಒಂದೇ ರೀತಿಯ ತಪ್ಪಿಗೆ ಬೇರೆ ಬೇರೆ ಶಿಕ್ಷೆಗಳಿದ್ದವು. ಶ್ರೀಮಂತರಿಗೆ, ಮೇಲ್ಜಾತಿಯವರಿಗೆ, ಕೆಲವರ್ಗದವರಿಗೆ, ಬಡವರಿಗೆ ಬೇರೆ ರೀತಿಯ ಶಿಕ್ಷೆ ಆಗುತ್ತಿತ್ತು. ಸಂವಿಧಾನ ಬಂದ ನಂತರ ಆರ್ಟಿಕಲ್ 14 ರಲ್ಲಿ Equality before Law, Equal Protection of Law ಎಂದು ಒಪ್ಪಿಕೊಂಡಿದ್ದೇವೆ. ಕಾನೂನಿನ ದೃಷ್ಟಿ ಯಲ್ಲಿ ಎಲ್ಲರೂ ಸಮಾನರು ಎಂದರು.
ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ:
ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕೆಂದು ನಮ್ಮ ಸಂವಿಧಾನ ಬಹಳ ಸ್ಪಷ್ಟವಾಗಿ ಹೇಳಿದೆ. ಸುಪ್ರಸಿದ್ಧ ವಕೀಲರನ್ನು ಕರ್ನಾಟಕ ಬಾರ್ ಕೌನ್ಸಿಲ್ ಕಳುಹಿಸಿಕೊಟ್ಟಿರುವುದು ಹೆಮ್ಮೆಯ ವಿಚಾರ. ಬಹಳ ಜನ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ರಾಗಿದ್ದಾರೆ, ತಜ್ಞರಾಗಿದ್ದಾರೆ. ಕರ್ನಾಟಕದಲ್ಲಿ ಬಹಳ ಜನ ಪ್ರತಿಭಾವಂತ ವಕೀಲರಿದ್ದಾರೆ. ಯಾರು ಸಮಾಜದಲ್ಲಿ ದಡ್ಡರೂ ಅಲ್ಲ, ಬುದ್ಧಿವಂತರೂ ಅಲ್ಲ. ಅವಕಾಶದಿಂದ ವಂಚಿತರಾದವರು ದಡ್ಡರು ಹಾಗೂ ಅವಕಾಶ ದೊರತವರು ಬುದ್ಧಿವಂತರು. ಸಂವಿಧಾನ ಎಲ್ಲರಿಗೂ ಅವಕಾಶ ದೊರೆತಿರುವುದರಿಂದ ಕೆಳವರ್ಗದವರೂ ಕೂಡ ಉನ್ನತ ಸ್ಥಾನಗಳಿಗೆ ಹೋಗಲು ಸಾಧ್ಯವಾಗುತ್ತದೆ. ನಾನು ಮೈಸೂರಿಗೆ ಬಂದಾಗ ಕುರುಬರಲ್ಲಿ ನಾನೊಬ್ಬನೇ ವಕೀಲ ಇದ್ದೆ ಎಂದು ಮುಖ್ಯ ಮಂತ್ರಿಗಳು ಸ್ಮರಿಸಿದರು.

ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಪಟ್ಟಭದ್ರ ಹಿತಾಸಕ್ತಿಗಳು:
ಎಲ್ಲಾ ಮೇಲ್ವರ್ಗದವರೇ ವಕೀಲರಾಗಿದ್ದರು. ಕೆಳಜಾತಿಯವರಿಗೆ ವಕೀಲರಾಗುವುದು ಬೇಡ ಎಂದೂ ಹೇಳುತ್ತಿದ್ದರು. ನನಗೇ ಇದರ ಅನುಭವವಾಗಿದೆ ಎಂದರು. ಶಾನುಭೋಗರೊಬ್ಬರು ಮಗನನ್ನು ಕಾನೂನು ಕಲಿಸಬೇಡ ಎಂದು ತಮ್ಮ ತಂದೆಗೆ ಹೇಳಿದ್ದರು. ಅವರ ಮಾತು ಕೇಳಿ ಕಾನೂನು ಓದದೇ ಹೋಗಿದ್ದರೆ ಇಂದು ಮುಖ್ಯಮಂತ್ರಿಯಾಗಲು ಸಾಧ್ಯವಾಗುತ್ತಿರಲಿಲ್ಲ ಎಂದರು.
ಪಟ್ಟಭದ್ರ ಹಿತಾಸಕ್ತಿಗಳು ಎಲ್ಲ ಸಂದರ್ಭದಲ್ಲಿ ಎಲ್ಲಾ ಕಾಲದಲ್ಲೂ ಇದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಸಮುದಾಯದಿಂದ ಬಂದವರು. ಅವರಿಗೆ ಬರೋಡಾ ಮಹಾರಾಜರು ವಿದೇಶಕ್ಕೆ ತೆರಳಲು ಅವಕಾಶ ನೀಡದೆ ಹೋಗಿದ್ದರೆ, ಇಂಥ ಸಂವಿಧಾನ ಸಿಗುತ್ತಿರಲಿಲ್ಲ. ಸಂವಿಧಾನವನ್ನು ವಿರೋಧಿಸುವವರೂ ಇದ್ದಾರೆ.
ಸಮಾಜದಲ್ಲಿ ವಿದ್ಯಾರ್ಥಿ ದೆಸೆಯಲ್ಲಿಯೇ ಮಕ್ಕಳ ತಲೆ ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಎಳೆ ವಯಸ್ಸಿನಲ್ಲಿ ಸಂವಿಧಾನದ ವಿರುದ್ಧ ದಾರಿತಪ್ಪಿಸುತ್ತಾರೆ. ಬಡವರಿಗೆ, ದಲಿತರಿಗೆ, ಅವಕಾಶ ವಂಚಿತರಿಗೆ ನ್ಯಾಯ ಸಿಗಬೇಕು. ಸಂವಿಧಾನದ ವಿರುದ್ಧ ಇರುವವರಿಂದ ನ್ಯಾಯ, ಬಡವರಿಗೆ ರಕ್ಷಣೆ ಸಿಗಲು ಸಾಧ್ಯವೇ? ಈ ಬಗ್ಗೆ ಗಂಭೀತವಾಗಿ ಚರ್ಚೆ ಮಾಡಬೇಕಿದೆ. ಇಂಥ ಸಮಾವೇಶ ಗಳನ್ನು ಮಾಡುವಾಗ ಈ ವಿಚಾರಗಳ ಬಗ್ಗೆ ಚರ್ಚಿಸಬೇಕು ಎಂದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications