ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ಕೊರೊನಾ ವೈರಸ್; ಇದುವರೆಗಿನ ಪ್ರಕರಣಗಳೆಷ್ಟು?

|
Google Oneindia Kannada News

ಮೈಸೂರು, ಏಪ್ರಿಲ್ 02: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಹೋಗುತ್ತಿದೆ. ಇದೀಗ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿರುವುದು ಇಲ್ಲಿನವರನ್ನು ಕಂಗಾಲು ಮಾಡಿದೆ.

ನಂಜನಗೂಡು ತಾಲೂಕಿನ ಜ್ಯುಬಿಲಿಯಂಟ್ ಔಷಧ ತಯಾರಿಕಾ ಕಂಪನಿಯ ಗುಣಮಟ್ಟ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಆ ವ್ಯಕ್ತಿ ಸಂಪರ್ಕದಿಂದ ಜಿಲ್ಲೆಯಲ್ಲಿ ಈವರೆಗೆ 16 ಜನರಿಗೆ ಸೋಂಕು ತಗುಲಿರುವುದಲ್ಲದೆ, ಆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರಿಗೂ ಸೋಂಕು ತಗುಲಿದೆ.

ಕೊರೊನಾದಿಂದ ಯಾರೂ ಹಸಿವಿನಿಂದ ಇರಬಾರದು: ಸಚಿವ ಸೋಮಣ್ಣಕೊರೊನಾದಿಂದ ಯಾರೂ ಹಸಿವಿನಿಂದ ಇರಬಾರದು: ಸಚಿವ ಸೋಮಣ್ಣ

 ಬುಧವಾರ ಮತ್ತೆ ಮೂವರಲ್ಲಿ ಸೋಂಕು ದೃಢ

ಬುಧವಾರ ಮತ್ತೆ ಮೂವರಲ್ಲಿ ಸೋಂಕು ದೃಢ

ಇದಲ್ಲದೇ ಬುಧವಾರ ಹೊಸದಾಗಿ ಸೋಂಕು ತಗುಲಿರುವುದು ದೃಢಪಟ್ಟಿರುವ ಮೂವರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ‌ನಲ್ಲಿ ತಿಳಿಸಿದೆ. ದಿನದಿಂದ ದಿನಕ್ಕೆ ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚುತ್ತಿರುವ ಕುರಿತು ಆತಂಕವೂ ಉಂಟಾಗಿದೆ. ಒಟ್ಟು ಜಿಲ್ಲೆಯಲ್ಲಿ 19 ಪ್ರಕರಣಗಳು ದಾಖಲಾಗಿವೆ.

 ಜಿಲ್ಲೆಯಲ್ಲಿ 2619 ಜನರ ಮೇಲೆ ನಿಗಾ

ಜಿಲ್ಲೆಯಲ್ಲಿ 2619 ಜನರ ಮೇಲೆ ನಿಗಾ

ಜಿಲ್ಲೆಯಲ್ಲಿ ಈವರೆಗೆ 2619 ಜನರ ಮೇಲೆ ನಿಗಾ ವಹಿಸಲಾಗಿದೆ. 1635 ಮಂದಿ 14 ದಿನಗಳ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಸೋಂಕು ದೃಢಪಟ್ಟಿರುವ 17 ಜನರನ್ನು ಮೈಸೂರಿನ ಕೋವಿಡ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 967 ಮಂದಿ 14 ದಿನಗಳ ಹೋಮ್ ಕ್ವಾರಂಟೈನ್ ಮುಗಿಸಿದ್ದಾರೆ. 130 ಜನರ ಮಾದರಿ ಪರೀಕ್ಷೆಯಲ್ಲಿ 123 ಜನರ ಸ್ಯಾಂಪಲ್ ನೆಗೆಟಿವ್ ಬಂದಿದೆ.

 ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ

ಇದುವರೆಗೆ 14 ಮಂದಿಯಲ್ಲಿ ಕಂಡುಬಂದಿದ್ದ ಕೊರೊನಾ ಬುಧವಾರ ಮತ್ತೆ ಐವರಲ್ಲಿ ಕಾಣಿಸಿಕೊಂಡಿರುವುದರಿಂದ ಜಿಲ್ಲಾಡಳಿತದಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಬೆಂಗಳೂರು, ಮೈಸೂರು, ಉತ್ತರ ಕನ್ನಡ, ದಕ್ಷಿಣವಕನ್ನಡ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರೆಡ್ ಜೋನ್ ಎಂದು ಗುರುತಿಸಿದೆ. ಕೊರೊನಾ ವೈರಸ್ ಹರಡದಂತೆ ತಡೆಯುವ ಉದ್ದೇಶದಿಂದ ಹೀಗೆ ಗುರುತಿಸಲಾಗಿದೆ. ಈ ಜಿಲ್ಲೆಗಳಲ್ಲಿ ತೀವ್ರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

 ಮನೆಮನೆಗೆ ತೆರಳಿ ಜಾಗೃತಿ

ಮನೆಮನೆಗೆ ತೆರಳಿ ಜಾಗೃತಿ

ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವರು ಸೂಚಿಸಿರುವುದರಿಂದ ಹೆಚ್ಚಿನ ನಿಗಾ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮತ್ತು ಆತನ ಜೊತೆಗೆ ಸಂಪರ್ಕದಲ್ಲಿರುವವರ ಮೇಲೆ ತೀವ್ರ ನಿಗಾ ವಹಿಸಲಾಗುತ್ತಿದೆ. ಈಗಾಗಲೇ 19 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಲಾಗುತ್ತಿದೆ. ಮನೆಯಿಂದ ಹೊರ ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗುತ್ತಿರುವುದು ಕಂಡು ಬಂದಿದೆ.

English summary
Corona virus positive cases increasing in mysuru. Till now 19 cases have been reported,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X