• search
  • Live TV
ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈಸೂರಿನಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಸಾವು

By ಮೈಸೂರು ಪ್ರತಿನಿಧಿ
|

ಮೈಸೂರು, ಆಗಸ್ಟ್ 29: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ. ಮೂರು ದಿನಗಳ ಹಿಂದಷ್ಟೆ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ ಎಂಬುವರು ಕೊರೊನಾ ಸೋಂಕಿನಿಂದ ಬಳಲಿ ಸಾವನ್ನಪ್ಪಿದ್ದರು.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಇದೀಗ ಮೈಸೂರಿನಲ್ಲಿ ಮತ್ತೋರ್ವ ಕೊರೊನಾ ವಾರಿಯರ್ ಸಾವನ್ನಪ್ಪಿದ್ದಾರೆ. ಸಮುದಾಯ ಆರೋಗ್ಯಾಧಿಕಾರಿಯಾಗಿದ್ದ ಚಂದ್ರಶೇಖರ್ (32) ಎಂಬುವರು ಮೃತಪಟ್ಟಿದ್ದಾರೆ.

ಮೈಸೂರಿನಲ್ಲಿ ಒಂದೇ ದಿನ 951 ಕೊರೊನಾ ಪ್ರಕರಣ; 20 ಸಾವು

ಚಂದ್ರಶೇಖರ್ ಮೈಸೂರು ಜಿಲ್ಲೆ ಟಿ.ನರಸೀಪುರ ಪಟ್ಟಣದ ನಿವಾಸಿಯಾಗಿದ್ದು, ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೋವಿಡ್ ಸೋಂಕಿತರ ಪತ್ತೆ ತಂಡದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಚಂದ್ರಶೇಖರ್ ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು.

ಈ ನಡುವೆ ಚಂದ್ರಶೇಖರ್ ಮನೆಯಲ್ಲಿ ದಿಢೀರ್ ಅಸ್ವಸ್ಥರಾಗಿದ್ದು ತಕ್ಷಣ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ ಚಂದ್ರ ಶೇಖರ್ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಕೊರೊನಾ ಟೆಸ್ಟ್ ನಡೆಸಿ ವರದಿ ಬಂದ ಬಳಿಕ ಚಂದ್ರಶೇಖರ್ ಅವರ ಅಂತ್ಯಕ್ರಿಯೆ ನಡೆಯಲಿದೆ.

English summary
Another Corona Warrior has died in T Narasipura in Mysuru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X